ಲಂಚ ಸ್ವೀಕಾರ: ಎಸಿಬಿ ಬಲೆಗೆ ಬಿದ್ದ ಪಿಡಿಒ
ಮಂಡ್ಯ, ಸೆ.14: ಟ್ರ್ಯಾಕ್ಟರ್ ಮಾಲಕನಿಂದ ಲಂಚ ಪಡೆಯುತ್ತಿದ್ದ ಪಿಡಿಒ ಓರ್ವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ತಾಲೂಕಿನ ಮಾರಚಾಕನಹಳ್ಳಿ ಗ್ರಾಪಂ ಪಿಡಿಒ ರಾಮಚಂದ್ರ 10 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಬಲೆ ಬೀಸಿದ ಎಸಿಬಿ ಪೊಲೀಸರು ತಮ್ಮ ಬಲೆಗೆ ಕೆಡವಿದರು.
ಮಾದೇಗೌಡನ ಕೊಪ್ಪಲು ಗ್ರಾಮದ ಟ್ರ್ಯಾಕ್ಟರ್ ಟ್ಯಾಂಕರ್ ಮಾಲಕ ಕುಡಿಯುವ ನೀರು ಸರಬರಾಜು ಮಾಡಲು ತಮ್ಮ ಟ್ಯಾಂಕರ್‍ನ್ನು ಗ್ರಾಪಂಗೆ ಬಾಡಿಗೆ ನೀಡಿದ್ದರು ಎನ್ನಲಾಗಿದೆ.
ಬಾಡಿಗೆ ಹಣ ಪಾವತಿಗೆ ರಾಮಚಂದ್ರ 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಡಿವೈಎಸ್ಪಿ ಎಚ್.ಎಂ.ಶೈಲೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆಯಲಾಯಿತು.
Next Story





