ಡಾ.ಅಮೃತ ಸೋಮೇಶ್ವರರಿಗೆ ‘ಭಾಷಾ ಸಮ್ಮಾನ್’
2016ನೆ ಸಾಲಿನ ಕೇಂದ್ರ ಸಾಹಿತ್ಯ ಅಕಾಡಮಿಯ ‘ಭಾಷಾ ಸಮ್ಮಾನ್’ ಪ್ರಶಸ್ತಿಯನ್ನು ತುಳು ಜಾನಪದ ವಿದ್ವಾಂಸ, ಹಿರಿಯ ಸಾಹಿತಿ ಡಾ.ಅಮೃತ ಸೋಮೇಶ್ವರರಿಗೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಆಡಿಟೋರಿಯಂನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಡಾ.ಚಂದ್ರಶೇಖರ ಕಂಬಾರ ಪ್ರದಾನ ಮಾಡಿದರು. ಈ ಸಂದರ್ಭ ಡಾ.ಅಮೃತ ಸೋಮೇಶ್ವರರ ಪತ್ನಿ ನರ್ಮದಾ, ನಿಟ್ಟೆ ವಿವಿ ಕುಲಾಧಿಪತಿ ಡಾ.ಎನ್.ವಿನಯ್ ಹೆಗ್ಡೆ, ಸಹಕುಲಾಧಿಪತಿ ಡಾ.ಎಂ.ಶಾಂತಾರಾಮ ಶೆಟ್ಟಿ, ಕುಲಪತಿ ಡಾ.ಎಸ್.ರಮಾನಂದ ಶೆಟ್ಟಿ, ಕೇಂದ್ರ ಸಾಹಿತ್ಯ ಅಕಾಡಮಿಯ ಸದಸ್ಯ ಡಾ. ನಾ.ದಾಮೋದರ ಶೆಟ್ಟಿ, ಆಯ್ಕೆ ಸಮಿತಿಯ ಸದಸ್ಯ ಡಾ.ಚಿನ್ನಪ್ಪ ಗೌಡ, ಪ್ರಾಧ್ಯಾಪಕಿ ಸಾಯಿಗೀತಾ ಮೊದಲಾದವರು ಉಪಸ್ಥಿತರಿದ್ದರು.
Next Story





