Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಯುಯಾನ, ವಿಜ್ಞಾನ, ವ್ಯಾಪಾರ ಸೇರಿದಂತೆ...

ವಾಯುಯಾನ, ವಿಜ್ಞಾನ, ವ್ಯಾಪಾರ ಸೇರಿದಂತೆ 15 ಒಪ್ಪಂದಗಳಿಗೆ ಭಾರತ-ಜಪಾನ್ ಸಹಿ

ವಾರ್ತಾಭಾರತಿವಾರ್ತಾಭಾರತಿ15 Sept 2017 6:55 PM IST
share
ವಾಯುಯಾನ, ವಿಜ್ಞಾನ, ವ್ಯಾಪಾರ ಸೇರಿದಂತೆ 15 ಒಪ್ಪಂದಗಳಿಗೆ ಭಾರತ-ಜಪಾನ್ ಸಹಿ

ಹೊಸದಿಲ್ಲಿ, ಸೆ.15: ನಾಗರಿಕ ವಾಯುಯಾನ, ವ್ಯಾಪಾರ , ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿ ಇವೇ ಮುಂತಾದ 15 ಪ್ರಮುಖ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಒಪ್ಪಂದಕ್ಕೆ ಭಾರತ ಹಾಗೂ ಜಪಾನ್ ಸಹಿಹಾಕಿವೆ.

ವಿಪತ್ತು ಅಪಾಯವನ್ನು ಕನಿಷ್ಠಗೊಳಿಸುವ ನಿಟ್ಟಿನಲ್ಲಿ ಸಹಕಾರ ಮತ್ತು ಸಹಭಾಗಿತ್ವ ಹೊಂದುವ ಒಪ್ಪಂದಕ್ಕೆ ಭಾರತದ ಗೃಹ ಸಚಿವಾಲಯ ಹಾಗೂ ಜಪಾನ್ ಸರಕಾರ ಸಹಿ ಹಾಕಿವೆ. ಭಾರತದಲ್ಲಿ ಜಪಾನ್ ಭಾಷೆಯ ಕಲಿಕೆ ಹಾಗೂ ಕೌಶಲ್ಯ ಅಭಿವೃದ್ಧಿಯ ಕ್ಷೇತ್ರದ ಸಹಕಾರವನ್ನು ಇನ್ನಷ್ಟು ಸದೃಢಗೊಳಿಸಲೂ ಉಭಯ ದೇಶಗಳು ನಿರ್ಧರಿಸಿವೆ.

‘ಭಾರತ-ಜಪಾನ್ ಹೂಡಿಕೆ ಅಭಿವೃದ್ಧಿ ನೀಲನಕ್ಷೆ’ಯಲ್ಲಿ ಭಾರತದಲ್ಲಿ ಜಪಾನ್ ದೇಶದ ಹೂಡಿಕೆಯ ಸಾಧ್ಯತೆಯ ಬಗ್ಗೆ ವಿವರಿಸಲಾಗಿದ್ದರೆ ‘ ಮೇಕ್ ಇನ್ ಇಂಡಿಯಾ ಪರಿಕಲ್ಪನೆಗಾಗಿ ಜಪಾನ್-ಭಾರತ ವಿಶೇಷ ಕಾರ್ಯಸೂಚಿ’ಯಲ್ಲಿ ಗುಜರಾತ್‌ನ ಮಂಡಲ್ ಬೆಚ್‌ರಾಜ್- ಖೋರಜ್ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ದ್ವಿಪಕ್ಷೀಯ ಸಹಕಾರದ ಬಗ್ಗೆ ವಿವರಿಸಲಾಗಿದೆ.

ನಾಗರಿಕ ವಾಯುಯಾನ ಕ್ಷೇತ್ರದಲ್ಲಿ ಸಹಿ ಹಾಕಲಾದ ಒಪ್ಪಂದದ ಪ್ರಕಾರ, ಇನ್ನು ಮುಂದೆ ಉಭಯ ದೇಶಗಳೂ ಎರಡೂ ದೇಶಗಳ ಕೆಲವು ಆಯ್ದ ನಗರಗಳಲ್ಲಿ ಅನಿಯಮಿತ ವಿಮಾನಸಂಚಾರ ಸೇವೆ ನಡೆಸಬಹುದು. ಉಭಯ ದೇಶಗಳ ಯುವ ವಿಜ್ಞಾನಿಗಳ ವಿನಿಮಯ ಕಾರ್ಯಕ್ರಮದ ಮೂಲಕ ವೈಜ್ಞಾನಿಕ ಸಂಶೋಧನೆಗೆ ಪ್ರೋತ್ಸಾಹ ನೀಡುವ ಒಪ್ಪಂದಕ್ಕೂ ಸಹಿ ಹಾಕಲಾಗಿದೆ.

ಜೀವವಿಜ್ಞಾನ ಮತ್ತು ಬಯೊಟೆಕ್ ಕ್ಷೇತ್ರದಲ್ಲಿ ಪರಸ್ಪರ ಸಹಕಾರ ಸಂಬಂಧಕ್ಕೆ

  ಭಾರತದ ಬಯೊಟೆಕ್ನಾಲಜಿ ಸಂಸ್ಥೆ ಮತ್ತು ಜಪಾನ್‌ನ ‘ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್‌ಡ್ ಸೈಯನ್ಸ್ ಆ್ಯಂಡ್ ಟೆಕ್ನಾಲಜಿ’ ನಡುವೆ ತಿಳುವಳಿಕಾ ಪತ್ರಕ್ಕೆ ಸಹಿ ಹಾಕಲಾಗಿದೆ. ಭಾರತದ ಈಶಾನ್ಯ ರಾಜ್ಯಗಳಲ್ಲಿ ದಕ್ಷ ಹಾಗೂ ಪರಿಣಾಮಕಾರಿ ರೀತಿಯಲ್ಲಿ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಉತ್ತೇಜಿನ ನೀಡಲು ಹಾಗೂ ಈ ರಾಜ್ಯಗಳ ಮಧ್ಯೆ ಸಂಯೋಜಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ‘ಭಾರತ- ಜಪಾನ್ ಪೂರ್ವ ವೇದಿಕೆ ಒಪ್ಪಂದ’ಕ್ಕೆ ಸಹಿ ಹಾಕಲಾಗಿದೆ. ಭಾರತದ ಕ್ರೀಡಾ ಪ್ರಾಧಿಕಾರ ಹಾಗೂ ಜಪಾನ್‌ನ ನಿಪ್ಪಾನ್ ಕ್ರೀಡಾವಿಜ್ಞಾನ ವಿವಿ ನಡುವೆ ಕ್ರೀಡಾವಲಯದಲ್ಲಿ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X