ಬ್ರಹ್ಮಾವರ ವಲಯ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ
ಬ್ರಹ್ಮಾವರ, ಸೆ.15: ಉಡುಪಿ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಬ್ರಹ್ಮಾವರ ವಲಯ ಹಾಗೂ ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸಾಲಿಹಾತ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಬ್ರಹ್ಮಾವರ ವಲಯ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳು ‘ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ’ದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು.
ಅಧ್ಯಕ್ಷತೆಯನ್ನು ಉಡುಪಿ ಜಿಪಂ ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ ವಹಿಸಿ ದ್ದರು. ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಶೆಟ್ಟಿ ಮಾತನಾಡಿದರು. ಜಿಲ್ಲಾ ಅಕ್ಷರ ದಾಸೋಹ ನೋಡಲ್ ಅಧಿಕಾರಿ ನಾಗೇಶ್ ಶ್ಯಾನುಭೋಗ್ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ಸಾಲಿಹಾತ್ ಶಿಕ್ಷಣ ಸಂಸ್ಥೆಯ ವತಿಯಿಂದ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಬ್ರಹ್ಮಾವರ ಸರಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಬಿ.ಟಿ.ನಾಯ್ಕ ಹಾಗೂ ಕಳೆದ ಬಾರಿ ರಾಷ್ಟ್ರಪ್ರಶಸ್ತಿ ಪಡೆದ ಮಟಪಾಡಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಅಶೋಕ್ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಸರ್ವಶಿಕ್ಷಣ ಅಭಿಯಾನ ಜಿಲ್ಲಾ ನೋಡಲ್ ಅಧಿಕಾರಿ ಚಂದ್ರ ನಾಯ್ಕ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ., ಸಾರ್ವಜನಿಕ ಶಿಕ್ಷಣ ಉಪ ನಿರ್ದೇಶಕರ ಇಲಾಖೆಯ ನಾಗರಾಜ್, ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯ ದರ್ಶಿ ಅಕ್ಬರ್ ಅಲಿ, ಖಜಾಂಚಿ ಅಬ್ದುಲ್ ಖಾದರ್, ಆಡಳಿತಾಧಿಕಾರಿ ಅಸ್ಲಂ ಹೈಕಾಡಿ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಮೊದ ಲಾದವರು ಉಪಸ್ಥಿತರಿದ್ದರು.
ಸಂಸ್ಥೆಯ ಕಾರ್ಯದರ್ಶಿ ಜಿ.ಇಮ್ತಿಯಾಝ್ ಸ್ವಾಗತಿಸಿದರು. ಬ್ರಹ್ಮಾವರ ಶಿಕ್ಷಣ ಇಲಾಖಾ ನೋಡೆಲ್ ಅಧಿಕಾರಿ ಗಣಪತಿ ಭಟ್ ವಂದಿಸಿದರು. ಶಿಕ್ಷಕ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.