ಕಾಂಗ್ರೆಸ್ ಶಾಸಕ ಸೇರಿದಂತೆ 11 ಜನರಿಗೆ ಜೈಲುಶಿಕ್ಷೆ
ದೊಂಬಿ ಪ್ರಕರಣ

ಭೋಪಾಲ್, ಸೆ.15: ದೊಂಬಿ, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಧ್ಯಪ್ರದೇಶದ ನ್ಯಾಯಾಲಯವೊಂದು ಕಾಂಗ್ರೆಸ್ ಶಾಸಕ, ಇಬ್ಬರು ಮಾಜಿ ಶಾಸಕರು ಹಾಗೂ 9 ಕಾರ್ಯಕರ್ತರಿಗೆ ಆರು ತಿಂಗಳ ಜೈಲುಶಿಕ್ಷೆ ವಿಧಿಸಿದೆ.
ಅಲ್ಲದೆ ಪ್ರತಿಯೊಬ್ಬರಿಗೂ ತಲಾ 1,000 ರೂ. ದಂಡ ವಿಧಿಸಿದೆ . 2011ರ ಸೆ.30ರಂದು ಈ ಪ್ರಕರಣ ನಡೆದಿದ್ದು ಜಿಲ್ಲಾಧಿಕಾರಿ ಕಚೇರಿಯ ಎದುರು ಕಾಂಗ್ರೆಸ್ ಶಾಸಕರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಆ ಸಂದರ್ಭ ಜಿಲ್ಲಾಧಿಕಾರಿ ಕಚೇರಿಗೆ ಕಲ್ಲೆಸೆಯಲಾಗಿತ್ತು ಹಾಗೂ ಕಚೇರಿ ಆವರಣದಲ್ಲಿದ್ದ ವಸ್ತುಗಳಿಗೆ ಹಾನಿ ಎಸಗಲಾಗಿತ್ತು ಎಂಬ ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ತಡೆ ಕಾಯ್ದೆಯಡಿ ಆರೋಪಿಗಳನ್ನು ದೋಷಿಗಳೆಂದು ಪರಿಗಣಿಸಿ ತೀರ್ಪು ನೀಡಿದೆ.
Next Story





