ಮಹಿಳಾ ಕಾಂಗ್ರೆಸ್ ಸದಸ್ಯರಿಗೆ ಸಂವಹನಾ ತರಬೇತಿ ಶಿಬಿರ

ಮಂಗಳೂರು, ಸೆ.15: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಿಳಾ ಕಾಂಗ್ರೆಸ್ ಸದಸ್ಯರಿಗೆ ಪರಿಣಾಮಕಾರಿ ಸಂವಹನ ತರಬೇತಿ ಕಾರ್ಯಕ್ರಮವು ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ತರಬೇತಿ ಶಿಬಿರ ಉದ್ಘಾಟಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶಾಲೆಟ್ ಪಿಂಟೋ ಅಧ್ಯಕ್ಷತೆ ವಹಿಸಿದ್ದರು.
ಜಿಪಂ ಸದಸ್ಯೆ ಮಮತಾ ಗಟ್ಟಿ ಅತಿಥಿಯಾಗಿ ಭಾಗವಹಿಸಿದ್ದರು. ಯು.ಎಚ್. ಖಾಲಿದ್ ಉಜಿರೆ ಸಂಪನ್ಮೂಲ ವ್ಯಕ್ತಿಯಾಗಿ ಸಂವಹನ ತರಬೇತಿ ನೀಡಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಆಡಳಿತ ಕಾರ್ಯದರ್ಶಿ ಸಂತೋಷ್ ಕುಮಾರ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ನಝೀರ್ ಬಜಾಲ್ ಮತ್ತು ಹನೀಫ್ ಸಹಕರಿಸಿದ್ದರು.
Next Story





