Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆಬ್ಬಾಳ-ನಾಗವಾರ ವ್ಯಾಲಿ ನೀರಿನ ಬಗ್ಗೆ...

ಹೆಬ್ಬಾಳ-ನಾಗವಾರ ವ್ಯಾಲಿ ನೀರಿನ ಬಗ್ಗೆ ತಪ್ಪುಗ್ರಹಿಕೆ ಬೇಡ: ಶಾಸಕ ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ15 Sept 2017 10:21 PM IST
share
ಹೆಬ್ಬಾಳ-ನಾಗವಾರ ವ್ಯಾಲಿ ನೀರಿನ ಬಗ್ಗೆ ತಪ್ಪುಗ್ರಹಿಕೆ ಬೇಡ: ಶಾಸಕ ಸುಧಾಕರ್

ಚಿಕ್ಕಬಳ್ಳಾಪುರ, ಸೆ.15: ಜಿಲ್ಲೆಯ ಅಂತರ್ಜಲ ವೃದ್ಧಿಗಾಗಿ ಜಾರಿಗೊಳಿಸಲಾಗುತ್ತಿರುವ ಹೆಬ್ಬಾಳ ನಾಗವಾರ ವ್ಯಾಲಿಯ ಯೋಜನೆಯಡಿ ಕೊಳಚೆ ನೀರನ್ನು ಮೂರು ಹಂತದಲ್ಲಿ ಶುದ್ಧೀಕರಿಸಿದ ನೀರನ್ನು ಕೆರೆಗಳಿಗೆ ಹರಿಸಲಾಗುತ್ತಿದ್ದು, ಜಿಲ್ಲೆಯ ಜನತೆ ಕೊಳಚೆ ನೀರೆಂಬ ತಪ್ಪುಗ್ರಹಿಕೆಯಿಂದ ಹೊರಬರಬೇಕೆಂದು ಶಾಸಕ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ತಾಲೂಕಿನ ನಂದಿಗಿರಿಧಾಮದ ನೆಹರೂ ನಿಲಯದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆರೆಗಳ ನಾಡಾಗಿರುವ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕಳೆದ ಹಲವು ವರ್ಷಗಳಿಂದ ಮಳೆಯ ಕೊರತೆಯಿಂದಾಗಿ ಕೆರೆಗಳು ಬಣಗುಡುತ್ತಿದ್ದು, ಈ ಕೆರೆಗಳಿಗೆ ಜೀವ ತುಂಬುವ ನಿಟ್ಟಿನಲ್ಲಿ ಹೆಬ್ಬಾಳ ನಾಗವಾರ ಯೋಜನೆಯಡಿಯಲ್ಲಿ ಹಂತ ಹಂತವಾಗಿ ಸಂಸ್ಕರಿಸಿದ ನೀರನ್ನು ಜಿಲ್ಲೆಯ 44 ಕೆರೆಗಳಲ್ಲಿ ತುಂಬಿಸಲಾಗುವುದು ಎಂದರು.

ಹೆಬ್ಬಾಳ ನಾಗವಾರ ವ್ಯಾಲಿಯ ಯೋಜನೆಯಡಿ ಕೊಳಚೆ ನೀರನ್ನು ಶುದ್ದೀಕರಿಸಿ ಕೆರೆಗಳಿಗೆ ಹಾಯಿಸುತ್ತಿರುವುದು ದೇಶದಲ್ಲಿ ಪ್ರಥಮ ಯೋಜನೆಯಾಗಿದೆ. ಶುದ್ಧೀಕರಿಸುವ ನೀರು ಕುಡಿಯಲು ಯೋಗ್ಯವಾಗಿರುವುದರಿಂದ ಯಾವುದೇ ರೀತಿಯ ದುಷ್ಪರಿಣಾಮಗಳು ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಈಗಾಗಲೇ ಅಮೇರಿಕಾ, ದುಬೈ, ಜಪಾನ್, ಇಸ್ರೇಲ್ ದೇಶಗಳಲ್ಲಿ ಕೋಳಚೆ ನೀರನ್ನು ಶುದ್ಧೀಕರಿಸಿ ದಿನನಿತ್ಯ ಚಟುವಟಿಕೆಗಳಿಗೆ ಸೇರಿದಂತೆ ಕುಡಿಯಲೂ ಅದೇ ನೀರನ್ನು ಬಳಸಲಾಗುತ್ತಿದೆ ಎಂದ ಅವರು, ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ನೀರಿನ ಬವಣೆಯನ್ನು ನೀಗಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ದಿಟ್ಟ ಹೆಜ್ಜೆಯನ್ನಿಟ್ಟಿದ್ದು, ಈ ಭಾಗದ ನೀರಾವರಿ ಯೋಜನೆಗಾಗಿ ಸುಮಾರು 14 ಸಾವಿರ ಕೋಟಿ ರೂ. ಗೂ ಹೆಚ್ಚು ಅನುದಾನವನ್ನು ಹಂತ ಹಂತವಾಗಿ ಜಾರಿಗೊಳಿಸುತ್ತಿದೆ ಎಂದರು.

947 ಕೋಟಿ ರೂ. ವೆಚ್ಚದ ಹೆಬ್ಬಾಳ ನಾಗವಾರ ವ್ಯಾಲಿಯ ಯೋಜನೆಗೆ ಸಿಎಂ ಸಿದ್ದರಾಮಯ್ಯರವರು ಸೆ.18ರಂದು ಚಾಲನೆ ನೀಡಲಿದ್ದು, ಅದೇ ದಿನದಂದು ನಗರೋತ್ಥಾನ ಮೂರನೇ ಹಂತದ ಯೋಜನೆ, ಸರಕಾರಿ ಜೂನಿಯರ್ ಕಾಲೇಜು ಕಟ್ಟಡ ನಿರ್ಮಾಣ, 37 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆಂದರು.

ನೂತನ ಬಸ್ ನಿಲ್ದಾಣದ ಉದ್ಘಾಟನೆ: ನಗರದಲ್ಲಿ 9.92 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸರಕಾರಿ ಬಸ್‌ನಿಲ್ದಾಣ, 14.43 ಕೋಟಿ ರೂ. ವೆಚ್ಚದಲ್ಲಿ ರೇಣುಮಾಕಲಹಳ್ಳಿಯಲ್ಲಿ ನಿರ್ಮಾಣವಾಗಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಗಾಂಧಿ ಪಥ ಗ್ರಾಮ ಪಥ ಯೋಜನೆಯಡಿ ಸುಮಾರು 21.85 ಕೋಟಿ ರೂ. ಕೈಗೊಂಡಿರುವ ರಸ್ತೆಗಳ ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಯಲುವಹಳ್ಳಿ ಎನ್.ರಮೇಶ್, ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಜಿ.ಆರ್. ಶ್ರೀನಿವಾಸ್, ತಾಪಂ ಅಧ್ಯಕ್ಷ ರಾಮಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X