ಸ್ಕೂಟರ್ ಢಿಕ್ಕಿ: ಪಾದಚಾರಿ ಮೃತ್ಯು
ಕಾಪು, ಸೆ.15: ಉದ್ಯಾವರ ರೇಶ್ಮಾ ಬಾರ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆ.14ರಂದು ರಾತ್ರಿ 8:50ರ ಸುಮಾರಿಗೆ ಸ್ಕೂಟರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ಬಸ್ ಕಾಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಉದ್ಯಾವರದ ಬಿ.ಎನ್.ಚಂದ್ರಶೇಖರ (54) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿಗೆ ತೆರಳಲು ಬಸ್ ಕಾಯುತ್ತಿದ್ದಾಗ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸ್ಕೂಟರ್ ರಸ್ತೆ ಬದಿಯಲ್ಲಿ ನಿಂತಿದ್ದ ಚಂದ್ರಶೇಖರಗೆ ಡಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಚಂದ್ರಶೇಖರ್ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕಾಫು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





