ಮಕ್ಕಳು ಪೋಷಕರನ್ನುನಿರ್ಲಕ್ಷಿಸುವ ಧೋರಣೆ ಹೆಚ್ಚುತ್ತಿರುವುದು ಅನಾರೋಗ್ಯಕರ ಬೆಳವಣಿಗೆ: ದಿವಾಕರ್

ಮಂಡ್ಯ, ಸೆ.15: ವಯಸ್ಸಾದ ಪೋಷಕರನ್ನು ಮಕ್ಕಳು ನಿರ್ಲಕ್ಷಿಸುವ ಧೋರಣೆ ಹೆಚ್ಚುತ್ತಿರುವುದು ಅನಾರೋಗ್ಯಕರ ಬೆಳವಣಿಗೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಡಾ.ಎಸ್.ದಿವಾಕರ್ ಅವರು ವಿಷಾದಿಸಿದ್ದಾರೆ.
ನಗರದ ಆಯುಷ್ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 2017-18ನೆ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಮಕ್ಕಳಿಂದ ತಿರಸ್ಕøತಗೊಂಡು ಆರೋಗ್ಯ ಸೌಲಭ್ಯಗಳಿಂದ ವಂಚಿತರಾಗಿರುವ ಹಿರಿಯ ನಾಗರಿಕರಿಗೆ ಪುನರ್‍ವಸತಿ ಕಲ್ಪಿಸಿ, ಆರೋಗ್ಯ ತಪಾಸಣೆಯನ್ನು ಮಾಡುವ ಮೂಲಕ ಅವರ ಆರೋಗ್ಯ ಸುಸ್ಥಿತಿಯಲ್ಲಿಡಲು ಸಹಕರಿಸುತ್ತಿರುವುದಾಗಿ ಅವರು ವಿವರಿಸಿದರು.
ಆಯುಷ್ ಇಲಾಖೆ ಹಿರಿಯ ವೈದ್ಯಾಧಿಕಾರಿ ಡಾ.ಪುಷ್ಪಾ ಅವರು ಮಾತನಾಡಿ, ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣೆ ಇಲಾಖೆ ವತಿಯಿಂದ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ವಯ್ಯಸ್ಸಾದವರ ಆರೋಗ್ಯ ಸ್ಥಿರತೆ ಕಾಪಾಡುವುದು ಶಿಬಿರದ ಉದ್ದೇಶವಾಗಿದೆ ಎಂದು ಹೇಳಿದರು.
ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಧಿಕಾರಿ ಸುರೇಶ್ ಮಾತನಾಡಿ, ಜಿಲ್ಲೆಯಲ್ಲಿರುವ ಐದು ವೃದ್ಧಾಶ್ರಮಗಳ ಫಲಾನುಭವಿಗಳೆಲ್ಲರೂ ಸದರಿ ಶಿಬಿರದಿಂದ ದೊರೆಯುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಡಾ.ಭಾಗ್ಯಲಕ್ಷ್ಮೀ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.







