ಫಲಾಹ್ ಪ್ರೌಢಶಾಲೆಯಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ತಲಪಾಡಿ, ಸೆ. 15: ಫಲಾಹ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಹಾಗೂ ಬ್ಲೂವೇಲ್ ಮಾರಣಾಂತಿಕ ಆಟದ ಬಗ್ಗೆ ಜಾಗೃತಿ ಕಾರ್ಯಾಗಾರ ನಡೆಯಿತು.
ಸಂಸ್ಥೆಯ ಅಧ್ಯಕ್ಷ ಹಾಜಿ ಯು. ಬಿ.ಮುಹಮ್ಮದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಕೋಶಾಧಿಕಾರಿ ಹಾಜಿ ಇಸ್ಮಾಯೀಲ್ ನಾಗತೋಟ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಕ್ಕಳು ವಿವೇಚನಾ ರಹಿತವಾಗಿ ಬಳಸುವ ಮೊಬೈಲ್‌ಫೋನ್ ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಎಂದರು. ಮುಖ್ಯೋಪಾಧ್ಯಾಯ ಮುಹಮ್ಮದ್ ರಫೀಕ್ ಅವರು ಬ್ಲೂವೇಲ್ ಆಟದ ಭೀಕರ ಪರಿಣಾಮದ ಕುರಿತು ಉಪನ್ಯಾಸ ನೀಡಿದರು.
ಶಿಕ್ಷಕರಾದ ಸಾಧನಾರಾವ್, ಲತಾ ಪಿ., ನವೀನ್ ಪ್ರಸಾದ್ ಮತ್ತು ಶ್ರೀನಿವಾಸ ಬಿ.ಎಡ್. ಕಾಲೇಜಿನ ಪ್ರಶಿಕ್ಷಣಾರ್ಥಿಗಳಾದ ನವ್ಯಾ ಹಾಗೂ ಸುಕನ್ಯಾ ಉಪಸ್ಥಿತರಿದ್ದರು. ಹಿರಿಯ ಶಿಕ್ಷಕಿ ಐರಿನ್ ರೋಡ್ರಿಗಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ಚಂದ್ರಕಲಾ ಎಂ. ವಂದಿಸಿದರು.
Next Story





