ಉಳಿ ಗ್ರಾಪಂ: 94ಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ
ಬಂಟ್ವಾಳ, ಸೆ. 15: ಬಂಟ್ವಾಳ ತಾಲೂಕು ಉಳಿ, ಕಕ್ಕೆಪದವು ಪಂಚದುರ್ಗಾಪರಮೆಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಶುಕ್ರವಾರ ಉಳಿ ಗ್ರಾಪಂ ವ್ಯಾಪ್ತಿಯಲ್ಲಿನ 94ಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣಾ ಕಾರ್ಯಕ್ರಮವನ್ನು ಅರಣ್ಯ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.
ಹಕ್ಕುಪತ್ರ ಹಾಗೂ ಇತರ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಸ್ವಂತ ಜಮೀನು ಹೊಂದಿ ಸಶಕ್ತರಾಗಬೇಕು. ಆ ಮೂಲಕ ಸರಕಾರದ ಸವಲತ್ತುಗಳನ್ನು ಪಡೆಯಲು ಅರ್ಹರಾಗಲು ಸಾಧ್ಯ. ಈ ಉದ್ದೇಶದಿಂದ ವಿವಿಧ ವಸತಿ ಯೋಜನೆಗಳನ್ನು ಜಾರಿಗೊಳಿಸಿದೆ. ಅಲ್ಲದೆ
ಇದೀಗ 94 ಸಿ ಹಾಗೂ 94 ಸಿಸಿ ಕಾರ್ಯಕ್ರಮದಿಂದ ಭೂ ಮಾಲಕತ್ವ ದೊರಕಿಸಿ ಕೊಟ್ಟಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಳಿ ಗ್ರಾಪಂ ಅಧ್ಯಕ್ಷೆ ದೀನಾಕ್ಷಿ, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೊಡ್ರಿಗಸ್, ಜಿಪಂ ಸದಸ್ಯ ಬಿ. ಪದ್ಮಶೇಖರ ಜೈನ್, ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ. ಬಂಗೇರ, ಮಾಜಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಮಾಜಿ ಗ್ರಾಪಂ ಸದಸ್ಯ ಡೀಕಯ್ಯ ಬಂಗೇರ, ಕೆಪಿಸಿಸಿ ಸದಸ್ಯ ರಾಜ್‌ಕುಮಾರ್ ಬೆಂಗಳೂರು, ತಾಪಂ ಸದಸ್ಯೆ ಬೇಬಿ ಕೃಷ್ಣಪ್ಪ, ಗ್ರಾಪಂ ಉಪಾಧ್ಯಕ್ಷ ಸುರೇಶ್ ಮೈರ, ಸದಸ್ಯ ಸಂಜೀವ ಗೌಡ ಅಗ್ಪಲ, ಶ್ರೀಧರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕು ಪತ್ರ, ರಾಷ್ಟ್ರೀಯ ಕುಟುಂಬ ಸಹಾಯಧನ, ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ನವೀನ್ ಕುಮಾರ್, ಗ್ರಾಮಕರಣಿಕ ರಾಜು ಲಮಾಣಿ ಅವರನ್ನು ಗ್ರಾಪಂ ವತಿಯಿಂದ ಸಚಿವರು ಸಮ್ಮಾನಿಸಿದರು.
ಉಳಿ ವ್ಯ.ಸೇ.ಸ. ಬ್ಯಾಂಕ್ ಅಧ್ಯಕ್ಷ ಎ. ಚೆನ್ನಪ್ಪ ಸಾಲ್ಯಾನ್ ಸ್ವಾಗತಿಸಿ, ಕಂದಾಯ ನಿರೀಕ್ಷಕ ನವೀನ್ ಪ್ರಸ್ತಾವಿಸಿದರು. ಪಂ.ಅ. ಅಧಿಕಾರಿ ಶ್ರೀಧರ ಫಲಾನುಭವಿಗಳ ಪಟ್ಟಿ ವಾಚಿಸಿದರು. ವಿಶ್ವನಾಥ ಸಾಲ್ಯಾನ್ ಬಿತ್ತ ವಂದಿಸಿದರು. ರಾಜೀವ ಕಕ್ಯಪದವು ಕಾರ್ಯಕ್ರಮ ನಿರೂಪಿಸಿದರು.







