Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆ.ಜೆ.ಜಾರ್ಜ್ ರಾಜೀನಾಮೆ ನೀಡುವಂತೆ...

ಕೆ.ಜೆ.ಜಾರ್ಜ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿಯಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ16 Sept 2017 10:17 PM IST
share
ಕೆ.ಜೆ.ಜಾರ್ಜ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿಯಿಂದ ಧರಣಿ

ಚಾಮರಾಜನಗರ, ಸೆ.16:  ದಕ್ಷ ಪೊಲೀಸ್ ಅಧಿಕಾರಿಗಳಾದ  ಡಿವೈಎಸ್‍ಪಿ ಎಂ.ಕೆ. ಗಣಪತಿ ಹಾಗೂ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆಗೆ  ಕಾರಣರಾದ ಸಚಿವ ಕೆ.ಜೆ.ಜಾರ್ಜ್ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ನಗರದಲ್ಲಿ ಶನಿವಾರ  ಜಿಲ್ಲಾ ಬಿಜೆಪಿಯಿಂದ ಪ್ರತಿಭಟನಾ ಮೆರವಣಿಗೆ  ನಡೆಸಲಾಯಿತು. 

ನಗರದ ಜಿಲ್ಲಾ ಬಿಜೆಪಿ ಕಚೇರಿಯಿಂದ ಮೆರವಣಿಗೆ ಹೊರಟ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು  ಕಾಂಗ್ರೆಸ್ ಪಕ್ಷದ ವಿರುದ್ದ ಘೋಷಣೆಗಳನ್ನು ಕೂಗಿದರು. ದೊಡ್ಡಂಗಡಿ ಬೀದಿ,  ತ್ಯಾಗರಾಜ ರಸ್ತೆ ಮಾರ್ಗವಾಗಿ  ಭುವನೇಶ್ವರಿ ವೃತ್ತ ತಲುಪಿ ಕೆಲ ಪ್ರತಿಭಟನೆ ನಡೆಸಿ, ಸಿದ್ದರಾಮಯ್ಯ, ಜಾರ್ಜ್ ವಿರುದ್ದ ಘೋಷಣೆಗಳನ್ನು ಕೂಗಿದರು.  ಬಳಿಕ ಬಿ. ರಾಚಯ್ಯ ಜೋಡಿ ರಸ್ತೆ ಮಾರ್ಗವಾಗಿ ಜಿಲ್ಲಾಡಳಿತ ಭವನ ತಲುಪಿ, ಧರಣಿ ಕುಳಿತರು, ಸ್ಥಳಕ್ಕಾಗಮಿಸಿ ಅಪರ ಜಿಲ್ಲಾಧಿಕಾರಿ ಗಾಯಿತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. 

ಇದಕ್ಕೂ ಮುನ್ನಾ ಮಾತನಾಡಿದ ಬಿಜೆಪಿ ಉಪಾಧ್ಯಕ್ಷ ಸಿ.ಎಸ್. ನಿರಂಜನ್‍ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ  ಆರ್. ಮಹದೇವ್, ನೂರೊಂದು ಶೆಟ್ಟಿ ಅವರು,   ಡಿವೈಎಸ್‍ಪಿ ಎಂ.ಕೆ. ಗಣಪತಿ  ಪೋಲಿಸ್ ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದವರು.  ಇತ್ತಿಚೀಗಷ್ಟೆ ಡಿವೈಎಸ್‍ಪಿ ಆಗಿ ಭಡ್ತಿಯನ್ನು ಹೊಂದಿ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಐ.ಜಿ ಕಚೇರಿಯಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದರು. ಇಂಥ  ಅಧಿಕಾರಿ ಎಂ.ಕೆ. ಗಣಪತಿ ಅವರಿಗೆ ರಾಜ್ಯದ ಮಾಜಿ ಗೃಹ ಮಂತ್ರಿ, ಹಾಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಮ್ಮ ಪ್ರಭಾವವನ್ನು ಪೊಲೀಸ್ ಇಲಾಖೆಯಲ್ಲಿ ಬಳಸಿ ಗಣಪತಿರವರಿಗೆ ಮಾನಸಿಕ ಕಿರುಕುಳ ನೀಡುವುದರ ಜೊತೆಗೆ ಇಲಾಖೆಯ ಹಿರಿಯ ಅಧಿಕಾರಿಗಳ ಸಹಾಯದಿಂದ ಸುಳ್ಳು ಆರೋಪವನ್ನು ಮಾಡಿ,  ಗಣಪತಿ  ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದಾರೆ ಎಂದು ದೂರಿದರು. 

ಜಿಲ್ಲಾ ಕಾರ್ಯದರ್ಶಿ ಸಿ.ಎಂ. ರಾಜೇಂದ್ರಕುಮಾರ್ ಮಾತನಾಡಿ, ಕಳೆದ  ನಾಲ್ಕು ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರ ಸಂಪುಟದ ಸಚಿವರು  ಪ್ರಾಮಾಣಿಕ ಅಧಿಕಾರಿಗಳನ್ನು  ನಿಷ್ಠೆಯಿಂದ  ಕರ್ತವ್ಯ ನಿರ್ವಹಿಸಲು ಬಿಟ್ಟಿಲ್ಲ. ಅನೇಕ ಅಧಿಕಾರಿಗಳು ಕಿರುಕುಳ ತಾಳರದೆ ಸ್ವಯಂ ನಿವೃತ್ತಿ ಪಡೆದುಕೊಂಡಿರುವ ನಿರ್ದಶನಗಳು ಇವೆ. ಹೀಗಾಗಿ ಕೂಡಲೇ ಸಿಬಿಐ ಆದೇಶ ಹಿನ್ನೆಲೆಯಲ್ಲಿ ಜಾರ್ಜ್ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು. 

ಧರಣಿಯಲ್ಲಿ  ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸಿ.ಎಂ. ರಾಜೇಂದ್ರ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಆರ್. ಮಹದೇವ್,ನೂರೊಂದು ಶೆಟ್ಟಿ, ಶಾಂತಮೂರ್ತಿ, ನಾಗೇಂದ್ರಸ್ವಾಮಿ, ಮುಖಂಡರಾದ  ನಿರಂಜನ್‍ಕುಮಾರ್, ನಿಜಗುಣರಾಜು, ಅಮಚವಾಡಿ ಚಂದ್ರಶೇಖರ್,  ಜಿ.ಪಂ. ಸದಸ್ಯರಾದ ಸಿ.ಎನ್. ಬಾಲರಾಜು, ಆರ್. ಬಾಲರಾಜು, ಕಲ್ಯಾಣಿ, ಸುಕೇಶಿನಿ, ದಾಕ್ಷಾಯಿಣಿ, ತಾ.ಪಂ. ಸದಸ್ಯೆ ಸುದಾಮಲ್ಲಣ್ಣ, ಗ್ರಾಮಾಂತರ ಅಧ್ಯಕ್ಷ  ಸುಂದ್ರಪ್ಪ, ಕಾರ್ಯದರ್ಶಿ ಜೆ.ಎಂ. ಮರಿಸ್ವಾಮಿ, ಪುರುಷೋತ್ತಮ್, ಹನೂರಿನ ಸಿ.ಎಂ. ರಾಜೇಂದ್ರಕುಮಾರ್ ಅಭಿಮಾನಿಗಳ ಬಳUದÀ  ಸಚಿನ್‍ದಿಕ್ಷೀತ್, ಪಾಳ್ಯ ಸಿದ್ದಾಪ್ಪಾಜಿ, ಪುಟ್ಟಸ್ವಾಮಿ, ಸಿದ್ದರಾಜು, ರೇವಣ್ಣ, ಮುರುಗೇಶ್, ಬಂಡಹಳ್ಳಿ ಶಂಕರ್, ನಾಗೇಂದ್ರ, ಸಂತೋಷ್, ಮಂಜುನಾಥ್ ಸೇರಿದಂತೆ ಹನೂರು ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ  ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X