Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮನುಕುಲದ ಒಳಿತಿಗೆ ನಾರಾಯಣಗುರು ಅವಿರತ...

ಮನುಕುಲದ ಒಳಿತಿಗೆ ನಾರಾಯಣಗುರು ಅವಿರತ ಶ್ರಮ: ಎಂ. ರಾಮಚಂದ್ರ

ವಾರ್ತಾಭಾರತಿವಾರ್ತಾಭಾರತಿ16 Sept 2017 11:22 PM IST
share
ಮನುಕುಲದ ಒಳಿತಿಗೆ ನಾರಾಯಣಗುರು ಅವಿರತ ಶ್ರಮ: ಎಂ. ರಾಮಚಂದ್ರ

ಚಾಮರಾಜನಗರ, ಸೆ.16:  ಬ್ರಹ್ಮಶ್ರೀ ನಾರಾಯಣ ಗುರು ಅವರು ಒಂದೇ ಜಾತಿ, ಒಂದೇ ಧರ್ಮ, ಒಬ್ಬನೇ ದೇವರು ಎಂದು ಸಾರುವ ಮೂಲಕ ಇಡೀ ಮನುಕುಲದ ಒಳಿತಿಗೆ ಅಪಾರವಾಗಿ ಶ್ರಮಿಸಿದರು ಎಂದು ಜಿಲ್ಲಾ ಪಂಚಾಯತ್  ಅಧ್ಯಕ್ಷ ಎಂ. ರಾಮಚಂದ್ರ ತಿಳಿಸಿದರು.

ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಾರಾಯಣ ಗುರು ಅವರು ಕೇರಳದಲ್ಲಿ ಜನಿಸಿ ಇಡೀ ದೇಶಾದ್ಯಂತ ಸಂಚರಿಸಿ ವೈಚಾರಿಕತೆ ಬಗ್ಗೆ ಸಾರಿದರು. ದೀನದಲಿತರು, ಶೋಷಿತರಿಗೆ ಭರವಸೆ ನೀಡಿ ಅವರ ಉನ್ನತಿಗೆ ಹಲವಾರು ಕ್ರಾಂತಿಕಾರಕ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದರು. ಎಲ್ಲರೂ ಒಂದೇ ಎಂಬ ಮೌಲ್ಯವನ್ನು ಪ್ರತಿಪಾದಿಸಿದರು ಎಂದರು. 

ಶಿಕ್ಷಣದಿಂದ ಮಾತ್ರ ಸರ್ವಾಂಗೀಣ ಪ್ರಗತಿ ಸಾಧ್ಯವೆಂಬುದನ್ನು ಇಂದು ಕಂಡುಕೊಂಡಿದ್ದೇವೆ. ಆದರೆ ನಾರಾಯಣಗುರು ಅವರು ಹಿಂದಿನ ಶತಮಾನದಲ್ಲೇ ಶಿಕ್ಷಣದ ಮಹತ್ವವನ್ನು ಮನಗಂಡಿದ್ದರು. ಅನೇಕ ಶಿಕ್ಷಣ ಸಂಸ್ಥೆಗಳನ್ನು ತೆರೆದು ಅಧ್ಯಯನಕ್ಕೆ ಅವಕಾಶ ಮಾಡಿಕೊಟ್ಟರು. ಈ ಮೂಲಕ ದೇಶಕ್ಕೆ ಮಾದರಿಯಾದರು ಎಂದು ತಿಳಿಸಿದರು.

ಎಲ್ಲಾ ಬಡವರು, ನೊಂದವರ ಪರ ನಿಂತು ಅವರ ಅಭ್ಯುದಯಕ್ಕೆ ಶ್ರಮಿಸಿದ ಮಹಾಪುರುಷರು, ದಾರ್ಶನಿಕರು ಹಾಗೂ ಸಮಾಜಸುಧಾರಕರ ಜಯಂತಿ ಕಾರ್ಯಕ್ರಮವನ್ನು ನಿರ್ದಿಷ್ಟ ಜಾತಿಗೆ ಸೀಮಿತಗೊಳಿಸಿ ಭಾಗವಹಿಸುವುದು ಸಲ್ಲದು. ಎಲ್ಲರೂ ಎಲ್ಲಾ ವರ್ಗಕ್ಕೆ ಒಳ್ಳೆಯದನ್ನೇ ಬಯಸಿದ್ದಾರೆ. ಹೀಗಾಗಿ ಎಲ್ಲಾ ಜಯಂತಿ ಕಾರ್ಯಕ್ರಮಗಳಲ್ಲಿ ಸರ್ವ ಸಮುದಾಯಗಳು ಭಾಗವಹಿಸುವಂತಾಗಬೇಕು ಎಂದು ಆಶಿಸಿದರು. 

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು, ಜಾತೀಯತೆ ಹೋಗಬೇಕೆಂಬ ಉದ್ದೇಶದಿಂದ ಬಸವಣ್ಣ, ಡಾ. ಬಿ.ಆರ್. ಅಂಬೇಡ್ಕರ್, ಬ್ರಹ್ಮಶ್ರೀ ನಾರಾಯಣಗುರು ಅವರು ವಿಶೇಷವಾಗಿ ಕಾಳಜಿ ವಹಿಸಿದ್ದರು. ಸಮಾಜದಲ್ಲಿ ಸಮಾನತೆ ಇರಬೇಕೆಂಬ ಆಶಯ ಆದರ್ಶಗಳು ಈಡೇರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯೋನ್ಮುಖರಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.

ಪ್ರಗತಿಪರ ಸಾಹಿತಿ ಹಾಗೂ ಪತ್ರಕರ್ತ ಡಾ.ಕೃಷ್ಣಮೂರ್ತಿ ಚಮರಂ ಮಾತನಾಡಿ, ನಾರಾಯಣಗುರು ಅವರು ಜಾತಿ ವ್ಯವಸ್ಥೆಯನ್ನು ಮೆಟ್ಟಿನಿಂತು ಮಾನವಹಕ್ಕುಗಳನ್ನು ತಂದುಕೊಡಬೇಕೆಂಬ ಸದುದ್ದೇಶದಿಂದ ಅವಿರತವಾಗಿ ಶ್ರಮಿಸಿದರು.ಸಾಮಾಜಿಕ ಅಸಮಾನತೆ ಹೋಗಲಾಡಿಸಲು ನಿರಂತರವಾಗಿ ತೊಡಗಿಸಿಕೊಂಡರು. ಸರ್ವಧರ್ಮ ಸಮನ್ವಯ ಸಭೆ ಏರ್ಪಡಿಸಿ ಎಲ್ಲಾ ಧರ್ಮಗಳ ಸಾರವು ಮಾನವಕುಲದ ಒಳಿತನ್ನೇ ಬಯಸಲಿದೆ ಎಂಬ ಉದಾತ್ತ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಮುಂದಾದರು ಎಂದರು.

ಕಾರ್ಯಕ್ರಮದಲ್ಲಿ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಎಂ.ಚಿನ್ನಸ್ವಾಮಿ ಮಾತನಾಡಿದರು. ಎಪಿಎಂಸಿ ಅಧ್ಯಕ್ಷರಾದ ಬಿ,ಕೆ. ರವಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಉಪವಿಭಾಗಾಧಿಕಾರಿ ಎ.ಜೆ. ರೂಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ. ನಾಗವೇಣಿ, ಮುಖಂಡರಾದ ಜಯಣ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X