ಅರ್ಚಕರ ವಿರುದ್ಧ ಸುಳ್ಳು ಸುದ್ದಿ: ದೂರು ದಾಖಲು
ಬಂಟ್ವಾಳ, ಸೆ. 16: ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದ ಪ್ರಧಾನ ಅರ್ಚಕರ ಕುರಿತು ಸಾಮಾಜಿಕ ತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವವರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲ್ಲುರ್ಟಿ ದೇವಸ್ಥಾನದ ಪ್ರಧಾನ ಅರ್ಚಕರ ಬಾಬು ಮೂಲ್ಯ (97) ಆರೋಗ್ಯವಂತರಾಗಿದ್ದು, ದೇವಸ್ಥಾನಕ್ಕೆ ಬಂದ ಭಕ್ತರೊಬ್ಬರು ಅವರ ನಿದ್ರಿಸುತ್ತಿರುವ ಭಾವಚಿತ್ರವನ್ನು ಮೊಬೈಲ್‌ನಲ್ಲಿ ಕ್ಲಿಕ್ಕಿಸಿ ಮೃತಪಟ್ಟಿರುವುದಾಗಿ ಸುಳ್ಳು ಸುದ್ದಿಯನ್ನು ಹಬ್ಬಿಸಿ ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಸಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿರುವ ಆರೋಪಿಯನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅರ್ಚಕರ ಮೊಮ್ಮಗ ಹರ್ಷಿತ್ ಎಂಬವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆಗ್ರಹಿಸಿದ್ದಾರೆ.
Next Story





