Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆತ್ತವರನ್ನು ನಿರ್ಗತಿಕರನ್ನಾಗಿಸಿದ...

ಹೆತ್ತವರನ್ನು ನಿರ್ಗತಿಕರನ್ನಾಗಿಸಿದ ಮಕ್ಕಳೂ ಮುಂದೆ ನಿರ್ಗತಿಕರಾಗುತ್ತಾರೆ: ನಾರಾಯಣ್ ತಲಪಾಡಿ

ವಾರ್ತಾಭಾರತಿವಾರ್ತಾಭಾರತಿ17 Sept 2017 7:17 PM IST
share
ಹೆತ್ತವರನ್ನು ನಿರ್ಗತಿಕರನ್ನಾಗಿಸಿದ ಮಕ್ಕಳೂ ಮುಂದೆ ನಿರ್ಗತಿಕರಾಗುತ್ತಾರೆ: ನಾರಾಯಣ್ ತಲಪಾಡಿ

ಕೊಣಾಜೆ, ಸೆ. 17: ಪ್ರೀತಿಯಿಂದ ಸಲಹಿ ಹೆತ್ತು ಹೊತ್ತು ದೊಡ್ಡವರನ್ನಾಗಿಸಿ ತಮ್ಮೆಲ್ಲಾ ಸುಖವನ್ನು ಮಕ್ಕಳಿಗೆ ಧಾರೆಯೆರೆದ ಹೆತ್ತವರನ್ನು ನಿರ್ಗತಿಕರನ್ನಾಗಿಸುವ ಮಕ್ಕಳು ಕೂಡಾ ಭವಿಷ್ಯದಲ್ಲಿ ಎಂದಾದರೂ ನಿರ್ಗತಿಕರಾಗುವಿರಿ ಎಂಬ ಕಹಿ ಸತ್ಯವನ್ನು ಎಂದಿಗೂ ಮರೆಯಬೇಡಿ ಎಂದು ತಲಪಾಡಿ ಬಿಲ್ಲವ ಸಂಘದ ಅಧ್ಯಕ್ಷ  ನಾರಾಯಣ ಪೂಜಾರಿ ಯುವ ಪೀಳಿಗೆಗೆ ಎಚ್ಚರಿಸಿದರು.

ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಗ್ರಾಮಚಾವಡಿ ಕೊಣಾಜೆ ಮತ್ತು ಇದರ ಅಂಗ ಸಂಸ್ಥೆಗಳಾದ ಬ್ರಹ್ಮಶ್ರೀ ನಾರಾಯಣ ಗುರು ಗ್ರಾಮ ಸಮಿತಿ, ನಾರಾಯಣ ಗುರು ಯುವ ಘಟಕ, ನಾರಾಯಣ ಗುರು ಮಹಿಳಾ ಘಟಕದ ಸದಸ್ಯರೆಲ್ಲರೂ ಜಂಟಿಯಾಗಿ ರವಿವಾರ ದೇರಳಕಟ್ಟೆ ಬೆಳ್ಮದ ಸೇವಾಶ್ರಮದ ಅನಾಥ ಮಹಿಳಾ ವೃದ್ಧರೊಂದಿಗೆ ಆಚರಿಸಿದ 'ಸೇವಾಶ್ರಮದಲ್ಲೊಂದು ದಿನ' ಎಂಬ ವಿಶೇಷ ಕಾರ್ಯ ಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. 

ಯೌವನ ಎಂಬುದು ಎಂದಿಗೂ ಶಾಶ್ವತ ಅಲ್ಲ. ಹೆತ್ತವರಿಗೆ ವಯಸ್ಸಾಯಿತೆಂದು ಅವರನ್ನು ಕಡೆಗಣಿಸಿ ಅನಾಥಾಶ್ರಮಗಳಿಗೆ ದೂಡಿದರೆ ನಮಗೂ ಭವಿಷ್ಯದಲ್ಲಿ ವಯಸ್ಸಾದಾಗ ನಮ್ಮ ಮಕ್ಕಳೂ ಕೂಡ ನಮ್ಮನ್ನು ಕಡೆಗಣಿಸಿ ಅನಾಥಾಶ್ರಮಗಳಿಗೆ ದೂಡುವರು. ನಾವಿಂದು ತುಳುನಾಡಿನ ಕೃಷಿ ಪರಂಪರೆ ಕೂಡು ಕುಟುಂಬ ಪದ್ಧತಿಯಿಂದ ವಿಮುಖರಾದ ಪರಿಣಾಮವೇ ಹೆತ್ತವರಿಂದು ವಯಸ್ಸಾದ ನಂತರ ಅನಾಥಾಶ್ರಮಗಳಿಗೆ ಸೇರುವಂತಾಗಿದೆ ಎಂದು ನುಡಿದರು.

ಬೆಳ್ಮ ಸೇವಾಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಜಿ.ಆರ್.ಶೆಟ್ಟಿ ಮಾತನಾಡಿ ಅನಾಥ ವೃದ್ಧರ ಮೇಲೆ ಪ್ರೀತಿ ಇರಿಸಿರುವ ನಾರಾಯಣ ಗುರು ಸೇವಾ ಸಂಘದ ಸದಸ್ಯರು ಪ್ರತೀ ವರುಷ ಬಂದು ವೃದ್ಧರೊಂದಿಗೆ ತಮ್ಮ ಅಮೂಲ್ಯವಾದ ಸಮಯವನ್ನು ಸದ್ವಿನಿಯೋಗಿಸುತ್ತಿರುವುದು ಶ್ಲಾಘನೀಯ. ಕೆಂಪು ರಕ್ತವನ್ನೇ ಹಂಚಿಕೊಂಡು ಹುಟ್ಟಿರುವ ಮನುಷ್ಯರ ನಡುವೆ ಮೇಲು, ಕೀಲು, ಬಡವ, ಶ್ರೀಮಂತರೆನ್ನುವ ಭೇದಭಾವ ಸಲ್ಲದು ಎಂದರು. 

ಸೇವಾಶ್ರಮದ ಮಹಿಳಾ ವೃದ್ಧರಿಗೆ ಸಂಘದ ಸದಸ್ಯರು ಏರ್ಪಡಿಸಿದ ವಿವಿಧ ಒಳಾಂಗಣ ಕ್ರೀಡಾ ಸ್ಫರ್ದೆಯಲ್ಲಿ ವೃದ್ಧೆಯರು ಬಹಳ ಉತ್ಸಾಹದಿಂದ ಭಾಗವಹಿಸಿ ಬಹುಮಾನ ಗೆದ್ದರು. ಬಳಿಕ ಸಂಘದ ಸದಸ್ಯರೆಲ್ಲರೂ ಆಶ್ರಮವಾಸಿಗಳೊಂದಿಗೆ ಸಹಭೋಜನಗೈದರು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಗ್ರಾಮಚಾವಡಿಯ ಕೋಶಾಧಿಕಾರಿ ನಾರಾಯಣ ಪೂಜಾರಿಯವರು ಸಭಾಧ್ಯಕ್ಷತೆ ವಹಿಸಿದ್ದರು.

ಸೇವಾಶ್ರಮ ಹಾಗೂ ಸೇವಾಭಾವ ಚಾರಿಟೇಬಲ್ ಟ್ರಸ್ಟ್‌ನ ಸಂಚಾಲಕರಾದ ಗೀತಾ ಆರ್.ಶೆಟ್ಟಿ, ತೇಜಶ್ರೀ ಅಂಚನ್, ಕೃಷ್ಣ ಪೂಜಾರಿ, ಬೆಳ್ಮ ಬಿರ್ವೆರೆ ಬಳಗದ ಅಧ್ಯಕ್ಷ ರಾಜೀವ ಪೂಜಾರಿ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಗ್ರಾಮಚಾವಡಿಯ ಅಧ್ಯಕ್ಷರಾದ ಭೋಜ ಕುಕ್ಯಾನ್ ಆಚಾರಿ ಹಿತ್ಲು, ಯುವ ಘಟಕದ ಅಧ್ಯಕ್ಷ ಹರೀಶ್ ಪೂಜಾರಿ ಕೊಣಾಜೆ, ಮಹಿಳಾ ಘಟಕದ ಅಧ್ಯಕ್ಷೆ ಲೋಲಾಕ್ಷಿ ಡಿ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X