ಚಿಪ್ಪು ಹಂದಿ ಭೇಟೆಗೆ ಯತ್ನ: ಇಬ್ಬರ ಬಂಧನ

ಹನೂರು, ಸೆ.17: ಅಕ್ರಮವಾಗಿ ಕಾಡಿಗೆ ಹೋಗಿ ಚಿಪ್ಪುಹಂದಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಲೆ ಮಹದೇಶ್ವರ ಬೆಟ್ಟ ವಲಯದ ಅರಣ್ಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ತಮಿಳುನಾಡು ಮೂಲದ ರಾಜು(೨೭) ಮತ್ತು ಭೈರವ(೨೮) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಪೊಲೀಸರ ಕಾರ್ಯಾಚರಣೆಯಲ್ಲಿ ಮೂವರು ಆರೊಪಿಗಳು ಪರಾರಿಯಾಗಿದ್ದಾರೆ.
ಈ ಬಗ್ಗೆ ಮಲೆ ಮಹದೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Next Story





