ಬ್ರಹ್ಮಶ್ರೀ ನಾರಾಯಣ ಗುರು 163ನೆ ಜನ್ಮದಿನಾಚರಣೆ

ಬಂಟ್ವಾಳ, ಸೆ. 17: ತಾಲೂಕಿನ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬಿ.ಸಿ.ರೋಡ್‌ನ ಗಾಣದಪಡ್ಪುವಿನಲ್ಲಿ ರವಿವಾರ ಏರ್ಪಡಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು 163ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು.
ಪ್ರಾಧ್ಯಪಕ ಡಾ. ರಾಜೇಶ್ ಬಿಜ್ಜಂಗಳ ಹಾಗೂ ಬಿಲ್ಲವ ಮಹಾಮಂಡಲ ವಕ್ತಾರ ಕೆ. ಹರಿಕೃಷ್ಣ ಬಂಟ್ವಾಳ್ ಮಾತನಾಡಿದರು.
ಪ್ರಸಿದ್ಧ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಮತ್ತು ತುಳು ಸಾಹಿತ್ಯ ಅಕಾಡೆಮಿ ಸದಸ್ಯ, ಪತ್ರಕರ್ತ ಗೋಪಾಲ ಅಂಚನ್ ಇವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಸಂಘದ ಉಪಾಧ್ಯಕ್ಷ ರಾಘವ ಅಮೀನ್, ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್, ಕೋಶಾಧಿಕಾರಿ ರಮೇಶ್ ಎಂ.ತುಂಬೆ, ಜೊತೆ ಕಾರ್ಯದರ್ಶಿ ಶಂಕರ್ ಕಾಯರ್‌ಮಾರ್, ಲೆಕ್ಕ ಪರಿಶೋಧಕ ಸತೀಶ್ ಬಿ. ಮತ್ತಿತರರು ಇದ್ದರು. ಪತ್ರಕರ್ತ ಗೋಪಾಲ ಅಂಚನ್ ಮತ್ತು ಶ್ರೀಧರ ಅಮೀನ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
Next Story





