Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ...

ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಪರಿಹಾರವಲ್ಲ: ಡಾ.ಪ್ರಮೋದ್

ವಾರ್ತಾಭಾರತಿವಾರ್ತಾಭಾರತಿ17 Sept 2017 10:49 PM IST
share

ಶಿವಮೊಗ್ಗ, ಸೆ.17: ಮಾನಸಿಕ ದೌರ್ಬಲ್ಯದ ಒಂದು ಕ್ಷಣ ಮನುಷ್ಯನ ಜೀವನವನ್ನೇ ಬಲಿತೆಗೆದುಕೊಳ್ಳುತ್ತದೆ. ಯಾವುದೇ ವ್ಯಕ್ತಿಯು ಮಾನಸಿಕವಾಗಿ ನೊಂದಿದ್ದರೆ, ಅವನಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸವನ್ನು ಸಮುದಾಯ, ಸ್ನೇಹಿತರು, ಕುಟುಂಬದವರು, ಬಂಧುಮಿತ್ರರು, ಮಾಧ್ಯಮದವರು, ಸಂಘ-ಸಂಸ್ಥೆಗಳು ಮಾಡುವ ಮೂಲಕ ವ್ಯಕ್ತಿಯ ನವಜೀವನದ ಆರಂಭಕ್ಕೆ ಮುನ್ನಡಿ ಬರೆಯುವಂತೆ ಮಾನಸಿಕ ತಜ್ಞ ಡಾ.ಪ್ರಮೋದ್ ಅವರು ನುಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆಯ ಅಂಗವಾಗಿ ನಗರದ ಬಾಪೂಜಿನಗರದ ನಗರ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದ ಜಾಥಾ ಮತ್ತು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.  

ಯಾವುದೇ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರೂ, ಅದಕ್ಕೆ ಕಾರಣಗಳು ಏನೇ ಇದ್ದರೂ ಅಂತಿಮವಾಗಿ ನೊಂದುಕೊಳ್ಳುವವರು ಅವರ ಸಂಗಾತಿ, ಪೋಷಕರು, ಮಕ್ಕಳು, ಸ್ನೇಹಿತರು ಅಥವಾ ಸಹೋದ್ಯೋಗಿಗಳೇ ಆಗಿರುತ್ತಾರೆ ಎಂದ ಅವರು, ಅಮೂಲ್ಯವಾಗಿರುವ ಜೀವನವನ್ನು ಯಾವುದೋ ಕ್ಷುಲ್ಲಕ ಕಾರಣಕ್ಕೆ ಬಲಿಕೊಡುವುದು ತರವಲ್ಲ, ಆತ್ಮಹತ್ಯೆ ಯೋಚನೆ ಬಂದಕೂಡಲೇ ಒಂದು ನಿಮಿಷ ಜೀವನದ ಬಗ್ಗೆ ಯೋಚಿಸಿದರೆ ಅದರಿಂದ ಹೊರಬರಲು ಸಾಧ್ಯವಾಗಲಿದೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಏರ್ಪಡಿಸಿದ್ದ ಜಾಗೃತಿಜಾಥಾಕ್ಕೆ ಚಾಲನೆ ನೀಡಿ ನಂತರ ಏರ್ಪಡಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಆರ್.ಬಿ.ಧರ್ಮಗೌಡರ ಅವರು ಮಾತನಾಡಿ, ವ್ಯಕ್ತಿ ಅನೇಕ ಕಾರಣಗಳಿಂದಾಗಿ ಆತ್ಮಹತ್ಯೆಗೆ ಯತ್ನಿಸುತ್ತಾನೆ. ಸಮಸ್ಯೆಗಳ ಪರಿಹಾರಕ್ಕೆ ಆತ್ಮಹತ್ಯೆಯೊಂದೆ ಪರಿಹಾರವಲ್ಲ. ಸಮಸ್ಯೆಗಳ ಪರಿಹಾರಕ್ಕೆ ಪರ್ಯಾಯವಾಗಿರುವ ಕ್ರಮಗಳ ಕುರಿತು ಸಮಾಧಾನಚಿತ್ತರಾಗಿ ಆಲೋಚಿಸಿ ಮುಂದುವರೆಯುವುದು ಕ್ಷೇಮಕರ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮಶೇಖರ ಸಿ.ಬಾದಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್‍ಸುರಗೀಹಳ್ಳಿ, ಡಾ.ಕಾಂತರಾಜ್, ಡಾ.ಉಮಾ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X