Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೀವಿಕ ದಿನಾಚರಣೆ ಅಂಗವಾಗಿ ವಿಚಾರ...

ಜೀವಿಕ ದಿನಾಚರಣೆ ಅಂಗವಾಗಿ ವಿಚಾರ ಸಂರ್ಕೀಣ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ18 Sept 2017 7:58 PM IST
share
ಜೀವಿಕ ದಿನಾಚರಣೆ ಅಂಗವಾಗಿ ವಿಚಾರ ಸಂರ್ಕೀಣ ಕಾರ್ಯಕ್ರಮ

ಬಾಗೇಪಲ್ಲಿ,ಸೆ.18:  ನಮ್ಮನ್ನಾಳುವ ಸರ್ಕಾರಗಳು ತೆಗೆದುಕೊಳ್ಳುವ  ಆರ್ಥಿಕ ವಿಧಿ ವಿಧಾನಗಳಿಂದಲ್ಲೇ  ಅನಿಷ್ಠ ಪದ್ದತಿಗಳು ಜೀವಂತವಾಗಿರುಲು  ಕಾರಣ ಎಂದು ವಿಚಾರ ಚಿಂತಕ ಹಾಗೂ ವೈದ್ಯ ಡಾ.ಅನಿಲ್ ಕುಮಾರ್ ಕೇಂದ್ರ ಮತ್ತು ರಾಜ್ಯ ಸಕಾರಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಜೀವಿಕವತಿಯಿಂದ 30ನೇ ಜೀವಿಕ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ತಾಲ್ಲೂಕು ಮಟ್ಟದ ವಿಚಾರ ಸಂಕೀರ್ಣ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು  ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳು ಉರಳಿದರೂ ಸಹ ರಾಜಕಾರಣಿಗಳ ಹಾಗೂ ನಮ್ಮನ್ನಾಳುವ ಸರ್ಕಾರಗಳ ಇಚ್ಚಾಶಕ್ತಿ ಕೊರತೆಯಿಂದ ಇಂದಿಗೂ ಬಾಲ್ಯ ವಿವಾಹ,ಜಾತಿ ಪದ್ದತಿ ಹಾಗೂ ಜೀತ ಪದ್ದತಿಗಳಂತಹ ಅನಿಷ್ಠ ಪದ್ದತಿಗಳು ಜೀವಂತವಾಗಿವೆ, ಈ ನಿಟ್ಟಿನಲ್ಲಿ ದೇಶದ ಕೆಲವೇ ಮಂದಿಗೆ ಮಾತ್ರ ಸ್ವಾತಂತ್ರ ಬಂದಿದೆ ಆದರೆ ದೇಶದ ಬಹುತೇಕರಿಗೆ ಸ್ವಾತಂತ್ರ್ಯ ಇನ್ನೂ ಸಿಕ್ಕಿಲ್ಲ,  ನಮ್ಮನ್ನಾಳುವ ಸರ್ಕಾರಗಳು ಉದ್ಯೋಗಗಳನ್ನು ಸೃಷ್ಠಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುವುದರಿಂದ ದೇಶದ ಬಹುತೇಕ ವಿದ್ಯಾವಂತ ನಿರುದ್ಯೋಗಿ ಯುವಕ ಯುವತಿಯರು ಅಡ್ಡ ದಾರಿಯಲ್ಲಿ ಸಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಬಡ ಮತ್ತು ಸಾಮಾನ್ಯ ಜನರು  ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯಗಳು ಸಿಗುತ್ತಿಲ್ಲ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ  ಉತ್ತಮ ಶಿಕ್ಷಣ ಮರೀಚಿಕೆಯಾಗಿದೆ ಇದರಿಂದ ಬಡವರು ಪರದಾಡುವಂತಾಗಿದೆ,  ರಾಜಕಾರಣಿಗಳ  ಸ್ವಾರ್ಥಕ್ಕಾಗಿ ಖಾಸಗಿ ಆಸ್ಪತ್ರೆ ಮತ್ತು ಖಾಸಗಿ ಶಾಲಾ ಕಾಲೇಜುಗಳನ್ನು ನಡೆಸಲು  ಪರವಾಗಿ ನೀಡಿರುವುದರಿಂದ ವೈದ್ಯಕೀಯ ಹಾಗೂ ಶಿಕ್ಷಣ ದುಭಾರಿಯಾಗಿದೆ ಎಂದ ಅವರು ಶಾಲೆಗಳನ್ನು ಬಿಟ್ಟವರನ್ನು ಮತ್ತೇ ಶಾಲೆಗೆ ಸೇರಿಸಿ ಶಿಕ್ಷಣ ನೀಡುವಂತಹ ಕೆಲಸಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕಾದ ಅಗತ್ಯವಿದೆ ಅಲ್ಲದೆ ಸಮಾಜದಲ್ಲಿ ಇನ್ನೂ ಜೀವಂತವಾಗಿರುವಂತಹ ಜೀತ ಪದ್ದತಿ, ಬಾಲ್ಯ ವಿವಾಹ ಮತ್ತು ಜಾತಿ ಪದ್ದತಿಗಳಂತಹ ಅನಿಷ್ಠ ಪದ್ದತಿಗಳನ್ನು ತೊಲಗಿಸಲು ಪ್ರತಿಯೊಬ್ಬರೂ ಕೈಜೋಡಿಸುವಂತೆ ಕರೆ ನೀಡಿದರು.

ಹಿರಿಯ ವಕೀಲರಾದ ಎ.ಜಿ.ಸುಧಾಕರ್ ಮಾತನಾಡಿ, ನಮ್ಮ ದೇಶದ ಸಂವಿಧಾನದಲ್ಲಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಬಡವ ಶ್ರೀಮಂತ ಎಂಬ ಬೇದಭಾವವಿಲ್ಲದೆ ಇಬ್ಬರಿಗೂ ಸಮಾನವಾಗಿ ಮತವನ್ನು ಚಾಲಾಯಿಸುವ ಹಕ್ಕು ನೀಡಿದೆ ಆದರೆ  ನಮ್ಮ ಅಭಿವೃದ್ದಿಗಾಗಿ ಆಯ್ಕೆಯಾಗಿರುವ  ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳು ವರ್ಷದಿಂದ ವರ್ಷಕ್ಕೆ ತಮ್ಮ ಆಧಾಯವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ, ಮನೆ, ಜಮೀನು ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆದುಕೊಳ್ಳುವ  ಮೂಲಕ ಶ್ರೀಮಂತರಾಗುತ್ತಿದ್ದಾರೆ,  ಮತದಾನವನ್ನು ಮಾಡುವ  ಮತದಾರರು ಮಾತ್ರ ಯಾವುದೇ ರೀತಿಯ ಸೌಲತ್ತುಗಳನ್ನು ಪಡೆಯಲು ಸಾಧ್ಯವಾಗದೆ  ದಿನದಿಂದ ದಿನಕ್ಕೆ ಬಡತನ ರೇಖೆಗಿಂತಲ್ಲೂ ಕೆಳಕ್ಕೆ ಹೋಗುತ್ತಿದ್ದಾರೆ. ಇಲ್ಲಿ ಎಲ್ಲಿದೆ ಸಮಾನತೆ ಎಂದು ಪ್ರಶ್ನಿಸಿದ ಅವರು ಒಬ್ಬ ಶಾಸಕರಿಗೆ ತಿಂಗಳಿಗೆ 5 ಲಕ್ಷ ವೇತನ, ನಂತರದ ದಿನಗಳಲ್ಲಿ ಸುಮಾರು 50 ಸಾವಿರ ರೂ.ಗಳ ಪಿಂಚಣಿಯನ್ನು ಪಡೆಯುತ್ತಾರೆ, ಈ ಜನಪ್ರತಿನಿಧಿಗಳು ಏನು ಸಾಧನೆ ಮಾಡಿದ್ದಾರೆಂದು ಇಷ್ಟು ಸಂಬಳ ಹಾಗೂ ಪಿಂಚಣಿ ನೀಡುತ್ತಿದ್ದಾರೆ ಎಂದ ಅವರು ಜೀತ ವಿಮುಕ್ತರಿಗೆ ಕೇವಲ 20 ಸಾವಿರ ರೂ.ಗಳ ಪರಿಹಾರ ನೀಡಿದರೆ ಸಾಲದು ಅವರಿಗೆ ಪುನರ್ರ್‍ಜೀವನ ಕಲ್ಪಿಸಬೇಕಾದ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದ ಅವರು  ಹಣಕ್ಕಾಗಿ ಮತವನ್ನು ಮಾರಿಕೊಳ್ಳದೆ ಮತವನ್ನು ಚಲಾಯಿಸಿದಾಗ ಮಾತ್ರ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುವುದಲ್ಲದೆ ಅನಿಷ್ಠ ಪದ್ದತಿಗಳನ್ನು ಸಹ ಸಮಾಜದಿಂದ ತೊಲಗಿಸಲು ಸಾಧ್ಯವಾಗುತ್ತ ಎಂದರು.

ಪ್ರಗತಿಪರ ಚಿಂತಕ ವಿಚಾರವಾದಿ ಡಾ.ಚಿನ್ನಕೈವಾರಮಯ್ಯ, ಜೀವಿಕ ಜಿಲ್ಲಾ ಸಂಚಾಲಕ ನಾರಾಯಣಸ್ವಾಮಿ, ಜೀವಿಕ ತಾಲ್ಲೂಕು ಸಂಚಾಲಕ ಬಿ.ನಾರಾಯಣಸ್ವಾಮಿ, ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಟಿ.ಲಕ್ಷ್ಮೀನಾರಾಯಣರೆಡ್ಡಿ, ಜೀವಿಕ ಒಕ್ಕೂಟಗಳ ರಾಜ್ಯಾಧ್ಯಕ್ಷ ಹೆಚ್.ಸಿ.ಚೌಡಪ್ಪ,   ಪ್ರಾಂಶುಪಾಲರಾದ ಡಾ.ನಯಾಜ್ ಅಹಮ್ಮದ್, ಹೋಬಳಿ ಸಂಚಾಲಕ ಆಧಿನಾರಾಯಣ ನಾರಾಯಣಸ್ವಾಮಿ,ಅಂಜಿನಪ್ಪ, ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X