ಕೆಪಿಸಿಸಿ ಎಸ್ಸಿ ಘಟಕ ಅಧ್ಯಕ್ಷ ವಿರುದ್ಧ ದೂರು
ಬೆಂಗಳೂರು, ಸೆ.18: ಕೆಪಿಸಿಸಿ ಎಸ್ಸಿ ಘಟಕದ ಅಧ್ಯಕ್ಷ ಜಕ್ಕಪ್ಪ ವಿರುದ್ಧ ಬೆಂಗಳೂರು ನಗರ ಹಾಗೂ ಮಹಾನಗರ ಕಾಂಗ್ರೆಸ್ ಸಮಿತಿಯ ಮುಖಂಡರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ಗೆ ದೂರು ನೀಡಿದ್ದಾರೆ.
2013ರ ವಿಧಾನಸಭಾ ಚುನಾವಣೆಯಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಎ.ಸಿ.ಶ್ರೀನಿವಾಸ್ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಲ್ಲೂರಹಳ್ಳಿ ನಾಗೇಶ್‌ಗೆ ಎಸ್ಸಿ ಘಟಕದ ಉಪಾಧ್ಯಕ್ಷ ಸ್ಥಾನ ನೀಡಿದ ಹಿನ್ನೆಲೆಯಲ್ಲಿ ಜಕ್ಕಪ್ಪ ವಿರುದ್ಧ ಮುಖಂಡರು ದೂರು ನೀಡಿದ್ದಾರೆ.
ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರಿಂದ ನಲ್ಲೂರಹಳ್ಳಿ ನಾಗೇಶ್‌ರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದರು. ಆದರೆ, ಅವಧಿ ಮುಗಿಯುವ ಮುನ್ನವೆ ಅವರಿಗೆ ಪಕ್ಷದಲ್ಲಿ ಸ್ಥಾನಮಾನ ಕಲ್ಪಿಸಿರುವುದು ಸರಿಯಲ್ಲ. ಈ ಹಿನ್ನೆಲೆಯಲ್ಲಿ ಜಕ್ಕಪ್ಪ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವೇಣುಗೋಪಾಲ್‌ಗೆ ಮುಖಂಡರು ಆಗ್ರಹಿಸಿದ್ದಾರೆ.





