ರೇರಾ-2016ರ ನಿಯಮ 4(1)ಕ್ಕೆ ತಡೆ ನೀಡಲು ಕೋರಿ ಅರ್ಜಿ ಸಲ್ಲಿಕೆ : ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಸೆ.18: ಕೇಂದ್ರ ಸರಕಾರ ಜಾರಿಗೆ ತಂದಿರುವ ರಿಯಲ್ ಎಸ್ಟೇಟ್ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ(ರೇರಾ)ಗೆ ಪೂರಕವಾಗಿ ರಾಜ್ಯ ಸರಕಾರ ಜಾರಿಗೆ ತಂದಿರುವ ರೇರಾ-2016ರ ನಿಯಮ 4(1)ಕ್ಕೆ ತಡೆ ನೀಡಬೇಕೆಂಬ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಕೇಂದ್ರ ಸರಕಾರ, ರಾಜ್ಯ ಸರಕಾರ ಹಾಗೂ ರಾಜ್ಯ ರಿಯಲ್ ಎಸ್ಟೇಟ್ ನಿಯಂತ್ರಣ ಅಥಾರಿಟಿಗೆ ನೋಟಿಸ್ ಜಾರಿಗೊಳಿಸಿದೆ.
ಈ ಸಂಬಂಧ ನಾಡಪ್ರಭು ಕೆಂಪೇಗೌಡ ಬಡಾವಣೆ ನಿವೇಶನಗಳ ಮಾಲಕರು ಸೇರಿ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.
ಅರ್ಜಿದಾರರ ಪರ ವಾದಿಸಿದ ವಕೀಲ ಕೆ.ವಿ.ಧನಂಜಯ್ಯ ಅವರು, ರಾಜ್ಯ ಸರಕಾರ ಜಾರಿಗೆ ತಂದಿರುವ ರಿಯಲ್ ಎಸ್ಟೇಟ್ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ-2016ರ ನಿಯಮ 4(1)ವು ಸಂವಿಧಾನ ಬಾಹಿರವಾಗಿದೆ. ಹೀಗಾಗಿ, ಈ ಕಾಯ್ದೆಗೆ ತಡೆ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು.
Next Story





