Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ನೇತ್ರಾವತಿ ರೈಲಿನಲ್ಲಿ ಮುಂಬೈ ಚಿನ್ನದ...

​ನೇತ್ರಾವತಿ ರೈಲಿನಲ್ಲಿ ಮುಂಬೈ ಚಿನ್ನದ ವ್ಯಾಪಾರಿಯ ದರೋಡೆ

ಪಿಸ್ತೂಲ್ ತೋರಿಸಿ ಕೃತ್ಯ: 4.11ಕೆ.ಜಿ. ಚಿನ್ನದೊಂದಿಗೆ ಪರಾರಿ

ವಾರ್ತಾಭಾರತಿವಾರ್ತಾಭಾರತಿ18 Sept 2017 10:40 PM IST
share

ಪಡುಬಿದ್ರೆ, ಸೆ.18: ಮುಂಬೈಯಿಂದ ಕೇರಳಕ್ಕೆ ರೈಲಿನಲ್ಲಿ ಪ್ರಯಾಣಿಸುತಿದ್ದ ಚಿನ್ನದ ವ್ಯಾಪಾರಿಯೊಬ್ಬರಿಂದ ನಾಲ್ಕು ಮಂದಿಯ ತಂಡ ಪಿಸ್ತೂಲ್ ಹಾಗೂ ಚೂರಿ ತೋರಿಸಿ ಕೋಟ್ಯಂತ ರೂ. ಮೌಲ್ಯದ ಚಿನ್ನವನ್ನು ದರೋಡೆಗೈದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.

ಮುಂಬೈಯಿಂದ ತಿರುವನಂತಪುರಂಗೆ ಹೋಗುವ ನೇತ್ರಾವತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪಡುಬಿದ್ರೆಯಿಂದ ಸುರತ್ಕಲ್ ನಡುವೆ ಬೆಳಗ್ಗೆ 6:30 ರಿಂದ 6:40ರ ಮಧ್ಯಾವಧಿಯಲ್ಲಿ ಈ ಘಟನೆ ನಡೆದಿದ್ದು, ದರೋಡೆಕೋರ ತಂಡವು ಸುರತ್ಕಲ್ ರೈಲು ನಿಲ್ದಾಣದಲ್ಲಿ ಇಳಿದು ಚಿನ್ನದೊಂದಿಗೆ ಪರಾರಿಯಾಗಿದೆ.

ಮುಂಬೈಯ ಚಿನ್ನದ ವ್ಯಾಪಾರಿ, ಮೂಲತಃ ರಾಜಸ್ಥಾನದ ಉದಯಪುರ ಜಿಲ್ಲೆಯ ರಾಜೇಂದ್ರ ಸಿಂಗ್ (38) ಎಂಬವರು ಸೆ.17ರಂದು ಮುಂಬೈಯ ಪನ್ವೇಲ್‌ನಿಂದ ಕೇರಳದ ತಿರುವನಂತಪುರಕ್ಕೆ ನೇತ್ರಾವತಿ ರೈಲಿನಲ್ಲಿ ಚಿನ್ನದ ಬ್ಯಾಗ್‌ನೊಂದಿಗೆ ಹೊರಟಿದ್ದರು. ರೈಲಿನ ಎಸ್7 ಸ್ಲೀಪರ್ ಕೋಚ್‌ನಲ್ಲಿ ಮಲಗಿದ್ದ ರಾಜೇಂದ್ರ ಸಿಂಗ್ ಅವರನ್ನು ನಾಲ್ಕು ಜನರ ತಂಡ ಇಂದು ಬೆಳಗ್ಗೆ ಎಚ್ಚರಿಸಿತ್ತೆನ್ನಲಾಗಿದೆ. ರಾಜೇಂದ್ರ ಸಿಂಗ್ ಎಚ್ಚರಗೊಳ್ಳುತ್ತಿದ್ದಂತೆ ದರೋಡೆಕೋರರು ತಮ್ಮಲ್ಲಿದ್ದ ಪಿಸ್ತೂಲ್ ಹಾಗೂ ಚೂರಿಯನ್ನು ತೋರಿಸಿ ಅವರನ್ನು ಬೆದರಿಸಿದರು. ಬಳಿಕ ರಾಜೇಂದ್ರ ಸಿಂಗ್ ಅವರ ಬ್ಯಾಗ್‌ನ ಕೀಯನ್ನು ಅವರ ಮೂಲಕವೇ ತೆರಿಸಿದರು. ಸುರತ್ಕಲ್ ರೈಲು ನಿಲ್ದಾಣದ ಬರುತ್ತಿದ್ದಂತೆಯೇ ದರೋಡೆಕೋರರು 4.11ಕೆ.ಜಿ. ಚಿನ್ನದ ಬಳೆಗಳ ಬ್ಯಾಗ್‌ನ್ನು ರಾಜೇಂದ್ರ ಸಿಂಗ್‌ರಿಂದ ಕಸಿದು ರೈಲಿನಿಂದ ಇಳಿದು ಪರಾರಿಯಾದರು ಎನ್ನಲಾಗಿದ್ದು, ದರೋಡೆಗೈದ ಒಟ್ಟು ಚಿನ್ನದ ಮೌಲ್ಯ ಸುಮಾರು 4.28 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಬಳಿಕ ರಾಜೇಂದ್ರ ಸಿಂಗ್ ಅದೇ ರೈಲಿನಲ್ಲಿ ಮಂಗಳೂರಿಗೆ ತೆರಳಿ ಸ್ನೇಹಿತರ ಮೂಲಕ ಪಡುಬಿದ್ರೆಗೆ ಆಗಮಿಸಿ ಪಡುಬಿದ್ರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘ಘಟನೆ ನಡೆಯುವ ವೇಳೆ ಪ್ರಯಾಣಿಕರಿದ್ದರೂ ಕೂಡ ಯಾರೂ ಮಾತನಾಡಲಿಲ್ಲ. ದರೋಡೆಕೋರರಲ್ಲಿ ಪಿಸ್ತೂಲ್ ಇದ್ದ ಕಾರಣ ಎಲ್ಲರೂ ಘಟನೆಯನ್ನು ವೀಕ್ಷಿಸುತ್ತಿದ್ದರೆ ಹೊರತು ಯಾರು ಸಹಾಯ ಮಾಡಲಿಲ್ಲ ಎಂದು ರಾಜೇಂದ್ರ ಸಿಂಗ್ ಪೊಲೀಸರಿಗೆ ತಿಳಿಸಿದ್ದಾರೆ.

ಮೂರು ತಂಡ ರಚನೆ: ಎಸ್ಪಿ

ದರೋಡೆ ಪ್ರಕರಣದ ತನಿಖೆಗಾಗಿ ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕ ಹೃಷಿಕೇಶ್ ಸೋನವನೆ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಸಂಜೀವ ಪಾಟೀಲ್ ಪತ್ರಿಕೆಗೆ ತಿಳಿಸಿದ್ದಾರೆ.

ಕಾಪು ಪೊಲೀಸ್ ಉಪನಿರೀಕ್ಷಕ ಹಾಲಮೂರ್ತಿ, ಪಡುಬಿದ್ರೆ ಪೊಲೀಸ್ ನಿರೀಕ್ಷಕ ಹಾಗೂ ಉಡುಪಿ ಡಿಸಿಐಬಿ ನಿರೀಕ್ಷಕ ಸಂಪತ್ ಕುಮಾರ್ ಅವರ ತಂಡಗಳು ಈಗಾಗಲೇ ಬೇರೆ ಬೇರೆ ಕಡೆಗಳಲ್ಲಿ ತನಿಖೆ ನಡೆಸುತ್ತಿದ್ದು, ಕೆಲವೊಂದು ಸುಳಿವುಗಳು ಲಭ್ಯವಾಗಿವೆ. ತನಿಖೆ ಮುಂದುವರೆಯುತ್ತಿದೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X