Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನೀವಿಕ್ಕಿದ ಭಿಕ್ಷದಲ್ಲಿಪ್ಪೆ

ನೀವಿಕ್ಕಿದ ಭಿಕ್ಷದಲ್ಲಿಪ್ಪೆ

ವಾರ್ತಾಭಾರತಿವಾರ್ತಾಭಾರತಿ18 Sept 2017 11:57 PM IST
share
ನೀವಿಕ್ಕಿದ ಭಿಕ್ಷದಲ್ಲಿಪ್ಪೆ

ಲಂಚವಂಚನಕ್ಕೆ ಕೈಯಾನದ ಭಾಷೆ.
ಬಟ್ಟೆಯಲ್ಲಿ ಹೊನ್ನು ವಸ್ತ್ರ ಬಿದ್ದಿದ್ದರೆ
ನಾನು ಕೈ ಮುಟ್ಟಿ ಎತ್ತಿದೆನಾದರೆ
ನಿಮ್ಮಾಣೆ ನಿಮ್ಮ ಪ್ರಮಥರಾಣೆ.
ಅದೇನು ಕಾರಣವೆಂದರೆ, ನೀವಿಕ್ಕಿದ ಭಿಕ್ಷದಲ್ಲಿಪ್ಪೆನಾಗಿ.
ಇಂತಲ್ಲದೆ ನಾನು ಅಳಿಮನವ ಮಾಡಿ
ಪರದ್ರವ್ಯಕ್ಕೆ ಆಸೆ ಮಾಡಿದೆನಾದರೆ,
ನೀನಾಗಲೆ ಎನ್ನ ನರಕದಲ್ಲಿ ಅದ್ದಿ
ನೀನೆದ್ದು ಹೋಗಾ ಶಂಭುಜಕ್ಕೇಶ್ವರಾ.

- ಸತ್ಯಕ್ಕ
 ಬಸವಣ್ಣನವರ ಶರಣಸಂಕುಲ ಜಾತಿ ಸಂಕರದಿಂದ ಸೃಷ್ಟಿಯಾದುದು. ‘ಜಾತಿ ಸಂಕರವಾದ ಬಳಿಕ ಕುಲವನರಸುವರೆ’ ಎಂದು ಬಸವಣ್ಣನವರು ಪ್ರಶ್ನಿಸಿದ್ದಾರೆ. ಬಸವಣ್ಣನವರ ಶರಣಸಂಕುಲದಲ್ಲಿ ಕುಲಗಳಿರಲಿಲ್ಲ, ಜಾತಿಗಳಿರಲಿಲ್ಲ, ಮೇಲುಕೀಳುಗಳಿರಲಿಲ್ಲ, ಬಡವ ಶ್ರೀಮಂತರಿರಲಿಲ್ಲ, ಹೆಣ್ಣು ಗಂಡೆಂಬ ಭೇದಭಾವ ಇರಲಿಲ್ಲ.

ಇಲ್ಲಿ ವ್ಯಕ್ತಿಗಳು ಶ್ರೀಮಂತರಾಗಿರದೆ ಇಡೀ ಸಮಾಜ ಶ್ರೀಮಂತವಾಗಿತ್ತು. ವ್ಯಕ್ತಿಗಳು ಶ್ರೀಮಂತರಾಗುತ್ತ ಹೋದಂತೆಲ್ಲ ಸಮಾಜ ಬಡವಾಗುತ್ತ ಹೋಗುತ್ತದೆ ಎಂಬ ಸತ್ಯವನ್ನು ಮಹಾನುಭಾವಿ ಬಸವಣ್ಣನವರು ಶರಣಸಂಕುಲಕ್ಕೆ ಅರುಹಿದ್ದರು. ಹೀಗಾಗಿ ಶರಣಸಂಕುಲದ ಶರಣ ಶರಣೆಯರೆಲ್ಲ ಸರ್ವಸಮತ್ವದ ಬದುಕನ್ನು ಅನುಭವಿಸಿದರು. ತಮ್ಮ ಸಂಕುಲವನ್ನು ಅಂದರೆ ಹೊಸ ಸಮಾಜವನ್ನು ಸೃಷ್ಟಿಸುವುದಕ್ಕಾಗಿ ಹೊಸ ಮಾನವರಾಗಿ ರೂಪುಗೊಂಡರು. ತಮ್ಮಾಳಗೆ ಸಕಲಜೀವಾತ್ಮರನ್ನೊಳಗೊಂಡ ಇಡೀ ಸಮಾಜವನ್ನು ತುಂಬಿಕೊಂಡರು. ಆ ಮೂಲಕ ಇಡೀ ಸಮಾಜವೇ ತಾವಾದರು. ಆಗ ಅವರಿಗೆ ವ್ಯಕ್ತಿಗತ ಸಂಪತ್ತಿನ ಶೇಖರಣೆ ಅಸಹ್ಯವೆನಿಸಿತು. ಶಿವನಿಧಿ ಎಂಬ ಸಾಮಾಜಿಕ ನಿಧಿಗೇ ತಮ್ಮಲ್ಲಿರುವ ಹೆಚ್ಚಿನದನ್ನೆಲ್ಲ ಅರ್ಪಿಸುತ್ತಿದ್ದರು.

‘ನಿಮ್ಮ ಸೊಮ್ಮಿಂಗೆ ಸಲಿಸುವೆನು’ ಎಂದು ಬಸವಣ್ಣನವರು ಹೇಳುವ ಮೂಲಕ ಇಂಥ ಸಾಮಾಜಿಕ ನಿಧಿಯನ್ನು ಸ್ಥಾಪಿಸಿದರು. ಶರಣ ಸಂಕುಲದ ಯಾರಿಗಾದರೂ ಕಷ್ಟನಷ್ಟಗಳು ಎದುರಾದಾಗ ಅವರು ಈ ನಿಧಿಯಿಂದ ಪಡೆಯುತ್ತಿದ್ದರು.

ಇಂಥ ಸಾಮಾಜಿಕ ಭದ್ರತೆಯನ್ನು ಹೊಂದಿದ್ದ ಶರಣರು, ವ್ಯಕ್ತಿಗತ ಶ್ರೀಮಂತಿಕೆ ಮತ್ತು ದುಡಿಯದೆ ಬರುವ ವಸ್ತುಗಳು ಅಸಹ್ಯವೆನಿಸುವಷ್ಟು ಬೌದ್ಧಿಕವಾಗಿ ಮತ್ತು ಭಾವನಾತ್ಮಕವಾಗಿ ಬೆಳೆದಿದ್ದರು. ಕಸಗುಡಿಸುವ ಕಾಯಕದ ಸತ್ಯಕ್ಕ ಅಂಥವರಲ್ಲಿ ಒಬ್ಬಳು. ದಲಿತ ವರ್ಗದಿಂದ ಬಂದ ಸತ್ಯಕ್ಕ ವರ್ಗಭೇದ, ಜಾತಿಭೇದ ಮತ್ತು ಲಿಂಗಭೇದಗಳಿಲ್ಲದೆ ಭಾವೈಕ್ಯದಿಂದ ಕೂಡಿದ ಶರಣಸಂಕುಲದಲ್ಲಿ ಹೊಸ ವ್ಯಕ್ತಿತ್ವವನ್ನೇ ಪಡೆದಳು. ಹಂಗಿಲ್ಲದ ಬದುಕಿನ ಶ್ರೇಷ್ಠತೆಯನ್ನು ಅರಿತಳು. ವಸ್ತುಮೋಹಕ್ಕೆ ಹೇಸಿದಳು. ಘನವ್ಯಕ್ತಿತ್ವದಿಂದ ದೇವರ ತಪ್ಪನ್ನೂ ಎತ್ತಿತೋರಿಸುವಷ್ಟು ವ್ಯಕ್ತಿತ್ವ ವಿಕಸನವನ್ನು ಹೊಂದಿದಳು.

ಶರಣೆ ಸತ್ಯಕ್ಕ ಆತ್ಮಗೌರವದ ಪ್ರತೀಕವಾಗಿದ್ದಾಳೆ. ಬಹುಪತ್ನಿತ್ವದ ಹಿನ್ನೆಲೆಯಲ್ಲಿ ಶಿವನನ್ನು ಕೂಡ ಪ್ರಶ್ನಿಸುವಂಥ ವಚನಗಳನ್ನು ಬರೆದ ಕೀರ್ತಿ ಆಕೆಗೆ ಸಲ್ಲುತ್ತದೆ. ಶರಣಸಂಕುಲದ ಕಾಯಕಜೀವಿಗಳು ಸ್ವತಂತ್ರರು ಎಂಬುದನ್ನು ಸತ್ಯಕ್ಕ ಎತ್ತಿತೋರಿಸಿದ್ದಾಳೆ. ಕಾಯಕದ ಮಹತ್ವವನ್ನು ಅರಿತವರ ಸ್ವಾವಲಂಬಿ ಬದುಕು ಆನಂದಮಯವಾಗಿರುತ್ತದೆ. ಅವರು ನಾಳೆಗಾಗಿ ಚಿಂತಿಸುವವರಲ್ಲ. ಪರಿಶುದ್ಧ ಬದುಕಿಗಾಗಿ ಚಿಂತನೆ ಮಾಡುವವರು. ಅಸತ್ಯದಿಂದ ದೂರವಿರುವವರು. ಸರಳ ಸಹಜ ಬದುಕಿನಲ್ಲಿ ನೆಮ್ಮದಿ ಕಾಣುವವರು.

ಭ್ರಷ್ಟಾಚಾರದ ಬದುಕು ಎಲ್ಲ ಕಾಲದಲ್ಲಿಯೂ ಇದೆ. ದೇವರ ಹೆಸರಿನಲ್ಲಿ, ಧರ್ಮದ ಹೆಸರಿನಲ್ಲಿ, ಸಂತರ ಹೆಸರಿನಲ್ಲಿ, ಸಮಾಜದ ಹೆಸರಿನಲ್ಲಿ ಮತ್ತು ಅಧಿಕಾರದ ಹೆಸರಿನಲ್ಲಿ ಭ್ರಷ್ಟಾಚಾರ ತನ್ನ ಕರಾಳ ಸ್ವರೂಪವನ್ನು ತೋರಿಸುತ್ತಲೇ ಇರುತ್ತದೆ. ಜನರು ಎಲ್ಲವನ್ನೂ ಸಹಿಸಿಕೊಳ್ಳುತ್ತ ಜೀವನ ಸಾಗಿಸುತ್ತಿರುತ್ತಾರೆ. ಇದೆಲ್ಲ ಬದುಕಿನ ಭಾಗವೆಂದು ಸಹಿಸಿಕೊಳ್ಳುತ್ತಾರೆ. ಸಮಯ ಬಂದಾಗ ಅನೇಕರು ಅದೇ ದಾರಿಯಲ್ಲಿ ಮುನ್ನಡೆಯುತ್ತಾರೆ. ಆದರೆ ಸತ್ಯಕ್ಕ ‘ನಾನು ಅನ್ಯಾಯದ ಧನದಿಂದ ದೂರವಿದ್ದೇನೆ’ ಎಂದು ಎದೆತಟ್ಟಿ ಹೇಳುತ್ತಾಳೆ. ಅಷ್ಟೇ ಅಲ್ಲ, ಕಸಗುಡಿಸುವ ಕಾಯಕದ ಸಂದರ್ಭದಲ್ಲಿ ಬೆಲೆಯುಳ್ಳ ವಸ್ತುಗಳಾದ ಬಂಗಾರದ ಆಭರಣ, ರೇಷ್ಮೆವಸ್ತ್ರ ಮುಂತಾದವು ಬೀದಿಯಲ್ಲಿ ಬಿದ್ದಿದ್ದರೂ ಕಾಲಕಸದಂತೆ ನೋಡುತ್ತ, ಅವುಗಳನ್ನು ಮುಟ್ಟುವುದಿಲ್ಲ ಎಂದು ಹೇಳುತ್ತಾಳೆ. ಇವೆಲ್ಲವನ್ನೂ ಪ್ರತಿಜ್ಞಾ ವಿಧಾನದಲ್ಲಿ ತಿಳಿಸುತ್ತಾಳೆ. ತನಗೊಂದು ಪರಂಪರೆ ಇದೆ. ಅದುವೇ ಪ್ರಮಥರ ಪರಂಪರೆ. ಅಂಥ ಶರಣರ ಆಣೆ ಮಾಡುತ್ತ ದೃಢನಿಶ್ಚಯದಿಂದ ನುಡಿಯುತ್ತಾಳೆ. ತನ್ನ ಕಾಯಕದ ಮೂಲಕವೇ ಬದುಕುವುದಾಗಿ ವಚನ ನೀಡುತ್ತಾಳೆ.

ತನಗೆ ಈ ಶಕ್ತಿ ಹೇಗೆ ಬಂದಿತೆಂಬುದನ್ನು ಕೂಡ ಸತ್ಯಕ್ಕ ಮಾರ್ಮಿಕವಾಗಿ ತಿಳಿಸಿದ್ದಾಳೆ. ಪರಮಾತ್ಮನಲ್ಲಿ ಮತ್ತು ಕಾಯಕದಲ್ಲಿ ಅಚಲ ನಂಬಿಕೆ ಇದ್ದವರಿಗೆ ನಾಳಿನ ಭಯ ಇರುವುದಿಲ್ಲ ಎಂದು ಸೂಚಿಸಿದ್ದಾಳೆ. ಹೀಗೆ ನಂಬಿಕೆ ಇಲ್ಲದವರು ದುರ್ಬಲ ಮನದವರಾಗುತ್ತಾರೆ. ಭವಿಷ್ಯದ ಬಗ್ಗೆ ಹೆದರುತ್ತಾರೆ. ಹೇಗಾದರೂ ಮಾಡಿ ಸಂಗ್ರಹಿಸಿಡಬೇಕು ಎಂಬ ಭಾವ ತಾಳುತ್ತಾರೆ. ‘ನಾನು ಈ ರೀತಿ ಆಸೆಬುರುಕಿಯಾದರೆ ನನ್ನನ್ನು ನರಕಕ್ಕೆ ಅಟ್ಟಿ ನನ್ನಿಂದ ದೂರ ಹೋಗು’ ಎಂದು ದೇವರಿಗೆ ನಿರ್ಭಿಡೆಯಿಂದ ಹೇಳುತ್ತಾಳೆ. ಹಾಗೆ ಹೇಳುವುದರ ಮೂಲಕ ನಮ್ಮಾಳಗಿನ ಆತ್ಮಶಕ್ತಿಯನ್ನು ಜಾಗೃತಗೊಳಿಸುತ್ತಾಳೆ.

***

share
ವಾರ್ತಾಭಾರತಿ
ವಾರ್ತಾಭಾರತಿ
Next Story
X