ಜಿಲ್ಲೆಯಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ: ಸಚಿವ ರೈ
ಜಗದೀಶ್ ಕಾರಂತ್ ಪೊಲೀಸರಿಗೆ ಬಹಿರಂಗ ಬೆದರಿಕೆ ಹಾಕಿದ ಪ್ರಕರಣ
ಮಂಗಳೂರು, ಸೆ.19: ಪುತ್ತೂರಿನಲ್ಲಿ ಪೊಲೀಸ್ ಅಧಿಕಾರಿಯ ವಿರುದ್ಧ ಹಿಂದೂ ಜಾಗರಣಾ ವೇದಿಕೆ ನಡೆಸಿದ ಪ್ರತಿಭಟನೆಯಲ್ಲಿ ಸಂಘಟನೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ಪ್ರಚೋದನಾಕಾರಿ ಭಾಷಣದ ಬಗ್ಗೆ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಜಿಲ್ಲೆಯಲ್ಲಿ ಶಾಂತಿಕದಡಲು ಯತ್ನಿಸುತ್ತಿರುವವರ ವಿರುದ್ಧ ಹಾಗೂ ಕಾನೂನನ್ನು ಕೈಗೆತ್ತಿಕೊಳ್ಳಲು ಮುಂದಾಗುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈ ಗೊಳ್ಳಲು ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರ ಜೊತೆ ಸಮಾಲೋಚನೆ ನಡೆಸಿ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
Next Story