Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವಚ್ಛತೆಯ ಕೊರತೆಯಿಂದ ಭಾರತಕ್ಕೆ ಭೇಟಿ...

ಸ್ವಚ್ಛತೆಯ ಕೊರತೆಯಿಂದ ಭಾರತಕ್ಕೆ ಭೇಟಿ ನೀಡಲು ಪ್ರವಾಸಿಗರ ಹಿಂದೇಟು: ಜಾವಡೇಕರ್

ವಾರ್ತಾಭಾರತಿವಾರ್ತಾಭಾರತಿ19 Sept 2017 7:43 PM IST
share
ಸ್ವಚ್ಛತೆಯ ಕೊರತೆಯಿಂದ  ಭಾರತಕ್ಕೆ ಭೇಟಿ ನೀಡಲು ಪ್ರವಾಸಿಗರ ಹಿಂದೇಟು: ಜಾವಡೇಕರ್

ಹೊಸದಿಲ್ಲಿ, ಸೆ.19: ಭಾರತದಲ್ಲಿ ಆಕರ್ಷಣೀಯ ಪ್ರವಾಸೀ ತಾಣಗಳಿವೆ. ಆದರೆ ದೇಶದಲ್ಲಿ ನೈರ್ಮಲ್ಯ ವ್ಯವಸ್ಥೆ ಕೆಳಮಟ್ಟದಲ್ಲಿರುವ ಕಾರಣ ಇಲ್ಲಿಗೆ ಪ್ರವಾಸ ಬರಲು ವಿದೇಶೀಯರು ಹಿಂದೇಟು ಹಾಕುತ್ತಿದ್ದಾರೆ ಎಂದು ಕೇಂದ್ರ ಮಾನವಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ವಿಶ್ವದ ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಪ್ರವಾಸಿ ತಾಣಗಳ ಸಂಖ್ಯೆ ಅಧಿಕವಾಗಿದೆ. ಆದರೆ ಭಾರತಕ್ಕಿಂತ 10 ಪಟ್ಟು ಅಧಿಕ ಪ್ರವಾಸಿಗರನ್ನು ಪ್ಯಾರಿಸ್ ಸೆಳೆಯುತ್ತಿದೆ. ನಮ್ಮ ಪ್ರವಾಸೀ ತಾಣಗಳು ಸ್ವಚ್ಛವಾಗಿಲ್ಲದಿರುವುದು ಇದಕ್ಕೆ ಕಾರಣವಾಗಿದೆ ಎಂದು ಸಚಿವರು ತಿಳಿಸಿದರು.

 ಶಾಲಾ ಪರಿಸರ ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಶ್ಲಾಘನೀಯ ಕಾರ್ಯ ನಿರ್ವಹಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ‘ಸುಲಭ್ ಶೌಚಾಲಯ್’ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಾವಡೇಕರ್ ಮಾತನಾಡಿದರು.

 ಭಾರತೀಯರಿಗೆ ಎಲ್ಲೆಂದರಲ್ಲಿ ಕಸ ಬಿಸಾಡುವುದು ಅಭ್ಯಾಸವಾಗಿ ಬಿಟ್ಟಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಸಬೇಕಿದೆ. ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಪೋಷಕರು ಮಾಡುವುದರ ಜೊತೆಗೆ, ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಸರಕಾರದ ಸ್ವಚ್ಛತಾ ಅಭಿಯಾನ ಯಶಸ್ವಿಯಾಗುತ್ತದೆ ಎಂದು ಸಚಿವರು ಹೇಳಿದರು.

  ಪರಿಸರ ಸ್ವಚ್ಛತೆಯಲ್ಲಿ ‘ಸುಲಭ್ ಇಂಟರ್‌ನ್ಯಾಷನಲ್’ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದ ಅವರು, 50 ವರ್ಷಗಳಿಂದಲೂ ಸ್ವಚ್ಛತಾ ಸೇವೆಯನ್ನು ಕನಿಷ್ಠ ಶುಲ್ಕ ಪಡೆದು ನಿರ್ವಹಿಸುತ್ತಾ ಬಂದಿರುವ ಸಂಸ್ಥೆ, ಸ್ವಚ್ಛತಾ ಕಾರ್ಯದಲ್ಲಿ ಬಹುದೊಡ್ಡ ಕ್ರಾಂತಿಯನ್ನೇ ನಡೆಸಿದೆ. 50 ವರ್ಷದ ಹಿಂದೆ ಸಂಸ್ಥೆ ಆರಂಭಗೊಂಡಾಗ, ಮೂತ್ರ ಮಾಡಲೂ ಯಾರು ಹಣ ನೀಡುತ್ತಾರೆ ಎಂಬ ಭಾವನೆ ಜನರಲ್ಲಿತ್ತು. ಆದರೆ ಜನರಲ್ಲಿ ಸ್ವಚ್ಛತೆಯ ಭಾವನೆ ಮೂಡಿಸುವಲ್ಲಿ ಸುಲಭ್ ಇಂಟರ್‌ನ್ಯಾಷನಲ್ ಸಂಸ್ಥೆ ಗಮನಾರ್ಹ ಕೊಡುಗೆ ನೀಡಿದೆ ಎಂದು ಅವರು ಹೇಳಿದರು.

ಸ್ವಚ್ಛತಾ ಅಭಿಯಾನದಡಿ, ಕಳೆದೊಂದು ವರ್ಷದಿಂದ ಸುಮಾರು 4,50,000 ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇದರಿಂದ ಅರ್ಧದಲ್ಲೇ ವ್ಯಾಸಂಗ ಕೈಬಿಡುವ ಹೆಣ್ಣುಮಕ್ಕಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ ಎಂದು ಸಚಿವ ಜಾವಡೇಕರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X