ಕ್ಷುಲ್ಲಕ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

ಮಂಡ್ಯ, ಸೆ.19: ಜಾಗದ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮಳವಳ್ಳಿ ತಾಲೂಕಿನ ನಿಟ್ಟೂರು ಹೊಸದೊಡ್ಡಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ನಾಗರಾಜು(55) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ತಿರುಗಾಡುವ ರಸ್ತೆ ವಿಚಾರದಲ್ಲಿ ಚಲುವರಾಜು ಮತ್ತು ನಾಗರಾಜು ಕುಟುಂಬದ ನಡುವೆ ವಿವಾದವಿದ್ದು, ಸೋಮವಾರ ತಡರಾತ್ರಿ ಜಗಳ ವಿಕೋಪಕ್ಕೆ ತಿರುಗಿ ಚಲುವರಾಜು ನಾಗರಾಜು ಕುಟುಂಬದವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎನ್ನಲಾಗಿದೆ.
ಈ ಬಗ್ಗೆ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಪಿ ಜಿ.ರಾಧಿಕಾ, ಡಿವೈಎಸ್ಪಿ ಸಿ.ಮಲ್ಲಿಕ್, ಸಿಪಿಐ ಶಿವಮಲವಯ್ಯ, ಎಸ್ಸೈ ಶ್ರೀಧರ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಆರೋಪಿ ಚಲುವರಾಜನನ್ನು ಬಂಧಿಸಿದ್ದಾರೆ.
Next Story





