ತೈಲ ಬೆಲೆ ಏರಿಕೆಗೆ ಖಂಡನೆ
ಉಡುಪಿ, ಸೆ.19: ಕೇಂದ್ರ ಸರಕಾರ ದಿನೇ ದಿನೇ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡುತ್ತಿರುವ ಕ್ರಮವನ್ನು ಎನ್‌ಎಸ್‌ಎಸ್‌ಯುಐ ಉಡುಪಿ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.
ಒಂದೆಡೆ ಉರುವಲು ಬದಲಿಗೆ ಎಲ್‌ಪಿಜಿ ಬಳಸಿ ಎಂದು ಪ್ರಚಾರ ಮಾಡು ತ್ತಲೇ ಗ್ಯಾಸ್ ಬೆಲೆಯನ್ನೂ ದಿನೇ ದಿನೇ ಹೆಚ್ಚಿಸುತ್ತಿದೆ. ಅಲ್ಲದೆ ಗ್ಯಾಸ್‌ಗೆ ನೀಡುತ್ತಿದ್ದ ಸಬ್ಸಿಡಿ ರದ್ದುಗೊಳಿಸಲು ಮುಂದಾಗಿರುವುದು ಖಂಡನೀಯ. ಆದುದರಿಂದ ಕೇಂದ್ರ ಸರಕಾರ ಕೂಡಲೇ ಇಂತಹ ಕ್ರಮಗಳನ್ನು ಕೈಬಿಡಬೇಕು ಎಂದು ಜಿಲ್ಲಾಧ್ಯಕ್ಷ ಕ್ರಿಸ್ಟನ್ ಅಲ್ಮೇಡಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
Next Story





