ಜೆಡಿಎಸ್‌ಗೆ ಕೆಪಿಸಿಸಿ ಸದಸ್ಯ ಎ.ಮಂಜು ಸೇರ್ಪಡೆಗೆ ಸಿದ್ಧತೆ
ಬೆಂಗಳೂರು, ಸೆ.19: ಮಾಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆಪಿಸಿಸಿ ಸದಸ್ಯ ಎ.ಮಂಜು, ಜೆಡಿಎಸ್ ಸೇರಲು ಸಿದ್ಧವಾಗಿದ್ದಾರೆ.
ಈ ಸಂಬಂಧ ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಗಡಿ ಕ್ಷೇತ್ರದ ಜೆಡಿಎಸ್ ಬಂಡಾಯ ಶಾಸಕ ಎಚ್.ಸಿ.ಬಾಲಕೃಷ್ಣ ಕಾಂಗ್ರೆಸ್‌ಗೆ ಬಂದರೆ ಸಂತೋಷ. ಆದರೆ, ಅವರ ಆಗಮನದ ಹಿನ್ನೆಲೆಯಲ್ಲಿ ನನ್ನನ್ನು ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎಂದು ದೂರಿದರು.
ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿರುವುದರಿಂದ ಮನಸ್ಸಿಗೆ ದುಃಖವಾಗಿದೆ. ಆದುದರಿಂದ, ನಾನು ಸಂತೋಷವಾಗಿ ಜೆಡಿಎಸ್ ಪಕ್ಷಕ್ಕೆ ಹೋಗುತ್ತಿದ್ದೇನೆ. ನನ್ನ ಪಕ್ಷ ಸೇರ್ಪಡೆಗೆ ಮಾಗಡಿ ಕ್ಷೇತ್ರದ ಜೆಡಿಎಸ್ ಮುಖಂಡರು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಎ.ಮಂಜು ಹೇಳಿದರು.
Next Story





