Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಸೆ.22: ‘ನೇಮೊದ ಬೂಳ್ಯ’ ತುಳು ಚಿತ್ರ...

​ಸೆ.22: ‘ನೇಮೊದ ಬೂಳ್ಯ’ ತುಳು ಚಿತ್ರ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ19 Sept 2017 11:23 PM IST
share

ಮಂಗಳೂರು, ಸೆ.19: ಭೂತಾರಾಧನೆ ಸಂಬಂಧಪಟ್ಟ ಪರತಿ ಮಂಗಣೆ ಪಾಡ್ದನ ಆಧಾರಿತ ‘ನೇಮೊದ ಬೂಳ್ಯ’ ತುಳು ಚಿತ್ರ ಸೆ.22ರಂದು ಕರಾವಳಿಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ಮಾಪಕ ಕುದ್ರಾಡಿ ಗುತ್ತು ಶಬರಿ ಚಂದ್ರಶೇಖರ ಮಾಡ ತಿಳಿಸಿದ್ದಾರೆ.

ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಮಂಗಳೂರಿನ ಬಿಗ್ ಸಿನಿಮಾ, ಪಿವಿಆರ್, ಸಿನಿಪೊಲಿಸ್, ಉಡುಪಿಯ ಡಯಾನಾ, ಮೂಡುಬಿದಿರೆಯ ಅಮರಶ್ರೀ, ಪುತ್ತೂರಿನ ಅರುಣಾ ಚಿತ್ರಮಂದಿರದಲ್ಲಿ ಸಿನೆಮಾ ಪ್ರದರ್ಶನಗೊಳ್ಳಲಿದೆ ಎಂದರು.

ಕುದ್ರಾಡಿ ಕುಲದೇವತಾ ಕ್ರಿಯೇಷನ್ಸ್ ಲಾಂಛನದಲ್ಲಿ ಶಬರಿ ಚಂದ್ರಶೇಖರ್ ಮಾಡ ಅರ್ಪಿಸುವ ಬಿ.ಕೆ. ಗಂಗಾಧರ ಕಿರೋಡಿಯನ್ ನಿರ್ದೇಶನದ ‘ನೇಮೊದ ಬೂಳ್ಯ’ ಸಿನೆಮಾ 200 ವರ್ಷಗಳ ಹಿಂದೆ ಪುತ್ತೂರಿನ ಬೆಟ್ಟಂಪಾಡಿಯಲ್ಲಿ ನಡೆದ ಸತ್ಯ ಘಟನೆಯನ್ನು ಆಧರಿಸಿದ ನಾಟಕವಾಗಿದ್ದು, ಈಗ ಅದನ್ನು ಸಿನೆಮಾವನ್ನಾಗಿ ಪರಿವರ್ತಿಸಲಾಗಿದೆ. ಸಿನೆಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ ಮೆಚ್ಚುಗೆ ಗಳಿಸಿದೆ. ‘ಪರತಿ ಮಂಗಣೆ’ ಪಾಡ್ದನವನ್ನು ಸಿನೆಮಾ ರೂಪಕ್ಕೆ ಇಳಿಸಲಾಗಿದೆ ಎಂದರು.

ವಿ. ಮನೋಹರ್ ಸಾಹಿತ್ಯ ಮತ್ತು ಸಂಗೀತ ಒದಗಿಸಿದ್ದಾರೆ. ಉಮಾಪತಿ ಬೆಂಗಳೂರು ಕ್ಯಾಮರಾ, ಪ್ರಕಾಶ್ ಕಾರಿಂಜ ಸಂಕಲನವಿದ್ದು, ಪ್ರತಾಪ್ ಸಾಲ್ಯಾನ್ ಕದ್ರಿ ಸಹನಿರ್ದೇಶಕರಾಗಿದ್ದಾರೆ. ನೃತ್ಯ ಮದನ್ ಹರಿಣಿ, ಪ್ರೀತಂ ಶೆಟ್ಟಿ, ಕಿರುತೆರೆ ನಟಿ ರಜನಿ, ಪ್ರದೀಪ್ ಚಂದ್ರ ಮುಖ್ಯ ಪಾತ್ರದಲ್ಲಿದ್ದು, ಮನೋಹರ್ ವಿಠಲ್, ರಮೇಶ್ ಭಟ್, ಮಂಡ್ಯ ರಮೇಶ್, ರಘುರಾಮ ಶೆಟ್ಟಿ, ರಮೇಶ್ ಕಲ್ಲಡ್ಕ, ಆರ್, ಎನ್ ಶೆಟ್ಟಿ, ಕಳವಾರ್, ಮೋಹನ್ ಬೋಳಾರ್, ಎನ್.ಎಸ್. ರೈ, ರಾಧಾಕೃಷ್ಣ ಕುಂಬ್ಳೆ, ತಾರಾನಾಥ ಉರ್ವ, ಸುರೇಶ್ ನಿಟ್ಟೆ, ಸುರೇಶ್ ದೇವಾಡಿಗ, ಜಯಶೀಲ ಮರೋಳಿ, ವೀಣಾ ಜಯಂತ್, ರತ್ನಾವತಿ ಜೆ. ಬೈಕಾಡಿ, ಪವಿತ್ರ ಶೆಟ್ಟಿ ಮೊದಲಾದವರು ಸಿನೆಮಾದಲ್ಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ನಟಿ ರತ್ನಾವತಿ ಜೆ. ಬೈಕಾಡಿ, ನಿರ್ದೇಶಕ ಬಿ.ಕೆ. ಗಂಗಾಧರ ಕಿರೋಡಿಯನ್, ನಟರಾದ ಪ್ರೀತಮ್ ಶೆಟ್ಟಿ ಮತ್ತು ಆರ್.ಎನ್. ಶೆಟ್ಟಿ ಕಳವಾರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X