Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಹದಿಹರೆಯದವರನ್ನೂ ಕಾಡಲಾರಂಭಿಸಿದೆ!

ಹದಿಹರೆಯದವರನ್ನೂ ಕಾಡಲಾರಂಭಿಸಿದೆ!

-ಎನ್.ಕೆ.-ಎನ್.ಕೆ.19 Sept 2017 11:58 PM IST
share
ಹದಿಹರೆಯದವರನ್ನೂ ಕಾಡಲಾರಂಭಿಸಿದೆ!

ಅಧಿಕ ರಕ್ತದೊತ್ತಡ

 ಸಹಜ ರಕ್ತದೊತ್ತಡವು ನಮ್ಮ ಶರೀರದ ಸುಗಮ ಕಾರ್ಯನಿರ್ವಹಣೆಯಲ್ಲಿ ಪ್ರಮುಖ ಪಾತ್ರವನ್ನು ಹೊಂದಿದೆ. ರಕ್ತದೊತ್ತಡದಲ್ಲಿ ಏರಿಳಿತಗಳು ನಮ್ಮ ಪ್ರಮುಖ ಅಂಗಾಂಗಗಳಿಗೆ ಹಾನಿಯನ್ನುಂಟು ಮಾಡುತ್ತವೆ. ಈ ಸಮಸ್ಯೆ ವಯಸ್ಕರಲ್ಲಿ ಮತ್ತು ಹಿರಿಯರಲ್ಲಿ ಸಾಮಾನ್ಯ. ಆದರೆ ಈಗ ಈ ಸಮಸ್ಯೆ ಹದಿಹರೆಯದವರನ್ನೂ ಕಾಡಲಾರಂಭಿಸಿರುವುದು ಇತ್ತೀಚಿನ ಅಧ್ಯಯನವೊಂದರಿಂದ ಬೆಳಕಿಗೆ ಬಂದಿದೆ. ಅಧಿಕ ರಕ್ತದೊತ್ತಡದಿಂದ ಹಾನಿಗೀಡಾಗುವ ಪ್ರಮುಖ ಅಂಗಗಳೆಂದರೆ ಹೃದಯ ಮತ್ತು ರಕ್ತನಾಳಗಳು.

ವಯಸ್ಕರಲ್ಲಿ ಅಧಿಕ ರಕ್ತದೊತ್ತಡವು ರಕ್ತದೊತ್ತಡದ ಮಟ್ಟವನ್ನು ಆಧರಿಸಿದ್ದರೆ, ಹದಿಹರೆಯದವರಲ್ಲಿ ಇದಕ್ಕೆ ಶೇಕಡಾವಾರು ಪ್ರಮಾಣವನ್ನು ಪರಿಗಣಿಸಲಾಗುತ್ತದೆ. 14ರಿಂದ 17ವರ್ಷ ವಯೋಮಾನದ 180 ಹದಿಹರೆಯದವರನ್ನು ಅಧ್ಯಯನಕ್ಕೊಳ ಪಡಿಸಲಾಗಿದ್ದು, ಶೇ.80ಕ್ಕೂ ಕಡಿಮೆ ರಕ್ತದೊತ್ತಡದೊಂದಿಗೆ ‘ಸಾಮಾನ್ಯ’ ವರ್ಗದಲ್ಲಿ ಪರಿಗಣಿಸಲ್ಪಟ್ಟವರಲ್ಲಿಯೂ ಅಂಗಾಂಗ ಹಾನಿಯು ಬೆಳಕಿಗೆ ಬಂದಿದೆ.

80ರಿಂದ 90 ಶೇಕಡಾ ರಕ್ತದೊತ್ತಡ ಹೊಂದಿರುವ ಮಧ್ಯಮ-ಅಪಾಯ ಮತ್ತು ಶೇ.90ಕ್ಕೂ ಹೆಚ್ಚಿನ ರಕ್ತದೊತ್ತಡದೊಂದಿಗೆ ಅಧಿಕ-ಅಪಾಯ ಗುಂಪಿನವರಲ್ಲಿ ಹೃದಯ ಮತ್ತು ರಕ್ತನಾಳಗಳಿಗೆ ಹಾನಿಯುಂಟಾಗಿದ್ದುದು ಸಹ ಅಧ್ಯಯನದಲ್ಲಿ ಬೆಳಕಿಗೆ ಬಂದಿದೆ.

ರಕ್ತದೊತ್ತಡವನ್ನು ನಿಯಂತ್ರಿಸಲು ಕೆಲವು ಅತ್ಯುತ್ತಮ ಮಾರ್ಗಗಳ ಬಗ್ಗೆ ಮಾಹಿತಿ ಇಲ್ಲಿದೆ.

ಆರೋಗ್ಯಕರ ಆಹಾರ

ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಿಸಲು ಆರೋಗ್ಯಕರ ಆಹಾರ ಸೇವನೆ ಅತಿ ಅಗತ್ಯವಾಗಿದೆ. ನಾರಿನಂಶ ಮತ್ತು ಇತರ ಖನಿಜಗಳು ಸಮೃದ್ಧವಾಗಿರುವ, ಕಡಿಮೆ ಕೊಬ್ಬು ಹೊಂದಿರುವ, ಹೇರಳ ಹಣ್ಣುಹಂಪಲಗಳು ಮತ್ತು ತರಕಾರಿಗಳನ್ನೊಳಗೊಂಡ ಆಹಾರವು ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಿಸಲು ನೆರವಾಗುತ್ತದೆ.

ನಿಯಮಿತ ವ್ಯಾಯಾಮ

ನಿಯಮಿತವಾದ, ಅತಿಯಲ್ಲದ ವ್ಯಾಯಾಮ ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿಯಾಗಿದೆ. ಅರ್ಧ ಗಂಟೆ ಬಿರುಸಿನ ವಾಕಿಂಗ್ ಮಾಡಿದರೂ ಸಾಕು.

ಕಡಿಮೆ ಉಪ್ಪು ಸೇವನೆ

ಉಪ್ಪನ್ನು ಹೆಚ್ಚಾಗಿ ಸೇವಿಸುವುದರಿಂದ ರಕ್ತದಲ್ಲಿ ಸೋಡಿಯಂ ಪ್ರಮಾಣವು ಹೆಚ್ಚುತ್ತದೆ ಮತ್ತು ಇದು ಹೆಚ್ಚುವರಿ ನೀರನ್ನು ಶರೀರದಿಂದ ಹೊರಹಾಕುವ ಮೂತ್ರಪಿಂಡಗಳ ಸಾಮರ್ಥ್ಯವನ್ನು ತಗ್ಗಿಸುತ್ತದೆ. ದೇಹದಲ್ಲಿ ಹೆಚ್ಚಿನ ದ್ರವಗಳು ಉಳಿದುಕೊಂಡರೆ ಅದು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗುತ್ತದೆ. ಹೀಗಾಗಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಕಡಿಮೆ ಉಪ್ಪನ್ನು ಸೇವಿಸುವುದು ಅಗತ್ಯವಾಗಿದೆ.

ಮದ್ಯಪಾನ ನಿಯಂತ್ರಣ

ಮದ್ಯಪಾನಿಗಳಾಗಿದ್ದಲ್ಲಿ ಮತ್ತು ರಕ್ತದೊತ್ತಡವು ಅಧಿಕವಾಗಿದ್ದರೆ ಮದ್ಯ ಸೇವನೆಯ ಪ್ರಮಾಣವನ್ನು ಕಡಿಮೆ ಮಾಡುವುದು ಅತ್ಯಂತ ಮುಖ್ಯವಾಗಿದೆ.

ಧೂಮಪಾನ ಬೇಡ

ಧೂಮಪಾನವು ನಮ್ಮ ಶರೀರದಲ್ಲಿ ಸಹಜ ರಕ್ತಸಂಚಾರದ ಮೇಲೆ ದುಷ್ಪರಿಣಾಮ ವನ್ನುಂಟು ಮಾಡುತ್ತದೆ. ಇದರಿಂದಾಗಿ ರಕ್ತನಾಳಗಳ ಮೇಲೆ ಒತ್ತಡ ಹೆಚ್ಚುತ್ತದೆ ಮತ್ತು ರಕ್ತದೊತ್ತಡ ಹೆಚ್ಚಲು ಇದು ಪ್ರಮುಖ ಕಾರಣವಾಗಿದೆ. ಧೂಮಪಾನವನ್ನು ವರ್ಜಿಸುವುದು ಅಧಿಕ ರಕ್ತದೊತ್ತಡವನ್ನು ತಡೆಯಲು ಅತ್ಯುತ್ತಮ ಮಾರ್ಗಗಳಲ್ಲೊಂದಾಗಿದೆ.

share
-ಎನ್.ಕೆ.
-ಎನ್.ಕೆ.
Next Story
X