Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ...

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಪರಮೇಶ್ವರ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 Sept 2017 7:31 PM IST
share
ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಪರಮೇಶ್ವರ್ ಆಗ್ರಹ

ಬೆಂಗಳೂರು, ಸೆ.20: ಗ್ರಾಹಕರಿಗೆ ತೆರಿಗೆಯ ಹೊರೆ ತಪ್ಪಿಸಲು ಕೂಡಲೇ ಪೆಟ್ರೋಲ್ ಮತ್ತು ಡಿಸೇಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು. ಇದರಿಂದ ರಾಜ್ಯ ಸರಕಾರಗಳಿಗೆ ಆಗುವ ನಷ್ಟವನ್ನು ಕೇಂದ್ರ ಸರಕಾರವೇ ಭರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆಗ್ರಹಿಸಿದ್ದಾರೆ.

ಬುಧವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಕುಸಿದಿದೆ. ಆದರೆ ಕೇಂದ್ರ ಸರಕಾರ ಅಬಕಾರಿ ಶುಲ್ಕವನ್ನು ಪದೇ ಪದೇ ಏರಿಕೆ ಮಾಡುತ್ತಿರುವುದರಿಂದ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಗಗನಕ್ಕೇರಿದೆ ಎಂದು ಹೇಳಿದರು.

ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ 48.82 ರೂ., ಬಾಂಗ್ಲಾದೇಶದಲ್ಲಿ 69 ರೂ., ಶ್ರೀಲಂಕಾದಲ್ಲಿ 49.08, ನೇಪಾಳದಲ್ಲಿ 61.08 ರೂ. ಇದೆ. ಆದರೆ ನಮ್ಮ ದೇಶದಲ್ಲಿ ನಾಲ್ಕು ವರ್ಷಗಳಿಂದ ಬೆಲೆ 71 ರೂ. ಅನುಪಾಸಿನಲ್ಲೇ ಇದೆ. ಎನ್‌ಡಿಎ ಸರಕಾರ ಅಧಿಕಾರಕ್ಕೆ ಬರುವ ಮುನ್ನಾ 2014ರಲ್ಲಿ ಅಬಕಾರಿ ಶುಲ್ಕದ ಮೊತ್ತ ವಾರ್ಷಿಕವಾಗಿ 1,77,982 ಕೋಟಿ ರೂ. ಇತ್ತು. ಈ ಶುಲ್ಕ 2017ರಲ್ಲಿ 2,42,961 ಕೋಟಿ ರೂ.ಗೆ ಸಂಗ್ರಹವಾಗಿದೆ. ಒಂದು ಕಡೆ ಬ್ಯಾರೆಲ್ ಬೆಲೆ ಕಡಿಮೆ ಆಗುತ್ತಿದ್ದರೆ, ಇತ್ತ ಪೆಟ್ರೋಲ್ ಬೆಲೆ ಹೆಚ್ಚಿಸುವ ಮೂಲಕ ಜನರಿಂದ ಹಣ ವಸೂಲಿ ಮಾಡುತ್ತಿದೆ ಎಂದು ದೂರಿದರು.

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಡಿಸೇಲ್ ಮತ್ತು ಪೆಟ್ರೋಲ್ ಬೆಲೆಯಲ್ಲಿ ಶೇ.50ರಷ್ಟು ಕಡಿಮೆ ಆಗಲಿದೆ. ಈ ಕುರಿತು ಕೇಂದ್ರ ಇಂಧನ ಸಚಿವರೇ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತನ್ನಿ ಎಂದು ಮನವಿ ಮಾಡಿದ್ದಾರೆ. ಆದರೆ ಪ್ರಧಾನ ಮಂತ್ರಿ ಹಾಗೂ ಆರ್ಥಿಕ ಸಚಿವರು ಜನರಿಗೆ ಮಂಕುಬೂದಿ ಬಳಿದು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಪೆಟ್ರೋಲ್ ಖರೀದಿಸುವವರು ಹೊಟ್ಟೆಗಿಟ್ಟು ಇಲ್ಲದವರಲ್ಲ ಎಂದು ಪೆಟ್ರೋಲ್ ಬೆಲೆ ಏರಿಕೆ ಕುರಿತು ಕೇಂದ್ರ ಸಚಿವರು ಸಮರ್ಥಿಸಿಕೊಂಡಿದ್ದಾರೆ. ಮುಂದೆ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸುವವರು ನಡೆದು ಹೋಗಿ ಅಂಥ ಹೇಳಿ ‘ಆರೋಗ್ಯ ಭಾರತ್’ ಕಾರ್ಯಕ್ರಮವನ್ನು ಜಾರಿಗೆ ತರಬಹುದು ಎಂದು ಕೇಂದ್ರ ಸರಕಾರವನ್ನು ಲೇವಡಿ ಮಾಡಿದರು.

ಜಿಡಿಪಿ ಹಾಳು ಮಾಡಿದ ಕೇಂದ್ರ ಸರಕಾರ: ಎನ್‌ಡಿಎ ಸರಕಾರ ಅಧಿಕಾರಕ್ಕೆ ಬರುವ ಮುನ್ನ ದೇಶದ ಜಿಡಿಪಿ 10.3 ರಷ್ಟಿತ್ತು. ನಂತರ ಪ್ರಧಾನಿ ಮೋದಿ ಕೈಗೊಂಡ ಆತುರದ ನಿರ್ಧಾರಗಳು ದೇಶದ ಜಿಡಿಪಿಯನ್ನು ಮೂರು ವರ್ಷಗಳಲ್ಲಿ 5.6ಗೆ ತಂದಿಳಿಸಿದೆ. ಇದೇ ಅವರ ಸಾಧನೆ. ಬಲಿಷ್ಠ ರಾಷ್ಟ್ರ ನಿರ್ಮಾಣದ ಹೆಸರಿನಲ್ಲಿ ಕೈಗೊಂಡ ನೋಟು ಅಮಾನ್ಯೀಕರಣ ದೇಶದ ಆರ್ಥಿಕ ಸ್ಥಿತಿಯನ್ನು ಸಂಪೂರ್ಣವಾಗಿ ಹಾಳು ಮಾಡಿದೆ. ಈ ನಡೆಯ ಕುರಿತು ಹಲವು ಆರ್ಥಿಕ ತಜ್ಞರು, ಆರ್‌ಬಿಐನ ಮಾಜಿ ಗೌವರ್ನರ್‌ಗಳು ಕೇಂದ್ರ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಜವಾಬ್ದಾರಿ ಹೇಳಿಕೆ: ನಾವೂ ಯಾರು ಬಿಜೆಪಿ ನಾಯಕರ ಫೋನ್ ಕದ್ದಾಲಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಫೋನ್ ಕದ್ದಾಲಿಕೆ ಕುರಿತು ದಾಖಲೆಗಳಿದ್ದರೆ ಬಹಿರಂಗಗೊಳಿಸಲಿ. ಅದು ಬಿಟ್ಟು ಸರಕಾರದ ಮೇಲೆ ಆಧಾರವಿಲ್ಲದೆ ಗುಮಾನಿ ವ್ಯಕ್ತಪಡಿಸುವುದು ಸರಿಯಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X