ಕಾರು-ಬೈಕ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಬೆಂಗಳೂರು, ಸೆ.20: ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದಾವಣಗೆರೆಯ ಗಿರೀಶ್(27) ಮೃತಪಟ್ಟ ಬೈಕ್ ಚಾಲಕ ಎಂದು ಪೊಲೀಸರು ಗುರುತಿಸಿದ್ದಾರೆ.
ಕಂಪೆನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಗಿರೀಶ್ ಅವರು, ಇಂದು ಬೆಳಗ್ಗೆ ಕೆಲಸ ಮುಗಿಸಿಕೊಂಡು 2:30ರಲ್ಲಿ ರಿಂಗ್ ರಸ್ತೆ ಮೂಲಕ ಮನೆಗೆ ತೆರಳುತ್ತಿದ್ದರು. ಲುಂಬಿನಿ ಗಾರ್ಡನ್ ಸಮೀಪ ಅತಿವೇಗವಾಗಿ ಮುನ್ನುಗ್ಗಿದ ಕಾರೊಂದು ಈತನ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಗಿರೀಶ್ ಕೆಳಗೆ ಬಿದ್ದು ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸುದ್ದಿ ತಿಳಿದ ಹೆಬ್ಬಾಳ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಮೃತ ದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿ ತನಿಖೆ ಕೈಗೊಂಡಿದ್ದಾರೆ.
Next Story





