ಬೆಂಗಳೂರು: ಮಹಿಳೆ ಆತ್ಮಹತ್ಯೆ

ಬೆಂಗಳೂರು, ಸೆ.20: ಉಡುಪಿ ಮೂಲದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೂಲತಃ ಉಡುಪಿಯ ಆರತಿ(27) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಪೊಲೀಸರು ಗುರುತಿಸಿದ್ದಾರೆ.
ಆರತಿಯ ಪತಿ ಹಾಗೂ ಮಕ್ಕಳು ಉಡುಪಿಯಲ್ಲೇ ವಾಸವಾಗಿದ್ದು, ಇವರು ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ಗಾರ್ಮೆಂಟ್ಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಗಂಗಮ್ಮ ಗುಡಿ ವ್ಯಾಪ್ತಿಯ ಅಬ್ಬಿಗೆರೆಯ ಕೃಷ್ಣಪ್ಪಕಟ್ಟಡದಲ್ಲಿ ಅಕ್ಕನ ಮಗಳೊಂದಿಗೆ ಆರತಿ ವಾಸವಿದ್ದರು. ಮಂಗಳವಾರ ಆರತಿ ಕೆಲಸಕ್ಕೆ ಹೋಗದೆ ಮನೆಯ್ಲೇ ಉಳಿದುಕೊಂಡಿದ್ದರು ಎನ್ನಲಾಗಿದೆ.
ಮನೆಯವರೆಲ್ಲ ಹೊರಗೆ ಹೋದಾಗ ಇವರು ನನಗೆ ಆರೋಗ್ಯ ಸರಿಯಿಲ್ಲ. ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್‌ನೋಟ್ ಬರೆದಿಟ್ಟು ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಗಂಗಮ್ಮ ಗುಡಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಡೆತ್‌ನೋಟ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.





