Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ : ಬಿಜೆಪಿ ಸದಸ್ಯರಿಂದ ಪುರಸಭಾ...

ಬಂಟ್ವಾಳ : ಬಿಜೆಪಿ ಸದಸ್ಯರಿಂದ ಪುರಸಭಾ ಜಗಲಿಯಲ್ಲಿ ಹಠಾತ್ ಧರಣಿ

ವಾರ್ತಾಭಾರತಿವಾರ್ತಾಭಾರತಿ20 Sept 2017 9:30 PM IST
share
ಬಂಟ್ವಾಳ : ಬಿಜೆಪಿ ಸದಸ್ಯರಿಂದ ಪುರಸಭಾ ಜಗಲಿಯಲ್ಲಿ ಹಠಾತ್ ಧರಣಿ

ಬಂಟ್ವಾಳ, ಸೆ. 20:ಕಸ್ಬಾ ಗ್ರಾಮದ ಪೇಟೆಯಲ್ಲಿರುವ ಕದ ನಂಬರ್ 8-240 ಕಟ್ಟಡದ ವಿರುದ್ಧ ನೀಡಲಾದ ದೂರಿನ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳವ ನಿರ್ಣಯವನ್ನು ಸೆ. 4ರಂದು ನಡೆದ ಸಾಮಾನ್ಯ ಸಭೆಯಲ್ಲಿ ಕೈಗೊಂಡರೂ ಇನ್ನೂ ಕೂಡ ನಿರ್ಣಯ ಪುಸ್ತಕದಲ್ಲಿ ದಾಖಲಿಸದಿರುವುದನ್ನು ಖಂಡಿಸಿ ವಿಪಕ್ಷ ಬಿಜೆಪಿ ಸದಸ್ಯರು ಬುಧವಾರ ಸಂಜೆ ಪುರಸಭಾ ಜಗಲಿಯಲ್ಲಿ ಹಠಾತ್ ಧರಣಿ ನಡೆಸಿದರು.

ದೂರುದಾರ, ಸದಸ್ಯ ದೇವದಾಸ ಶೆಟ್ಟಿ, ಸದಸ್ಯರಾದ ಸುಗುಣ ಕಿಣಿ, ಭಾಸ್ಕರ್ ಟೈಲರ್ ಧರಣಿಗೆ ಸಾಥ್‍ನೀಡಿದರು.
ಸಭೆಯಲ್ಲಿ ದೂರಿನ ಬಗ್ಗೆ ಸುದೀರ್ಘ ಚರ್ಚೆ ನಡೆದು ಬಳಿಕ ಎಲ್ಲ ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮಕೈಗೊಳ್ಳುವುದು ಮತ್ತು ಕದ ನಂಬರ್ 8-240ನ ಕಟ್ಟಡದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು.

ಆದರೆ ಸಾಮಾನ್ಯ ಸಭೆ ನಡೆದು 16 ದಿನಗಳಾದರೂ ಇನ್ನು ಕೂಡ ಈ ನಿರ್ಣಯವನ್ನು ಪುಸ್ತಕದಲ್ಲಿ ದಾಖಲಿಸದಿರುವುದು ಹಾಗೂ ತಿರುಚಿರುವುದು ಕಂಡುಬಂದಿದೆ ಎಂದು ಧರಣಿ ಕುಳಿತಿರುವ ಸದಸ್ಯ ದೇವದಾಸ ಶೆಟ್ಟಿ ಆರೋಪಿಸಿದ್ದಾರೆ.

ಸೆ. 4ರ ಸಾಮಾನ್ಯ ಸಭೆಯಲ್ಲಾದ ನಿರ್ಣಯದ ಪ್ರತಿ ಕೋರಿ ಅರ್ಜಿ ಸಲ್ಲಿಸಿದ್ದೆ. ಆದರೆ ನಿರ್ಣಯ ಪುಸ್ತಕದಲ್ಲಿ ಈ ನಿರ್ಣಯ ಸೇರಿದಂತೆ ಕೆಲವು ನಿರ್ಣಯಗಳು ಕೂಡಾ ದಾಖಲಾಗದಿರುವುದು ಕಂಡು ಬಂದಿದೆ. ಈ ಹಿಂದೆಯೂ ಸಭೆಯಲ್ಲಾದ ನಿರ್ಣಯವನ್ನು ತಿರುಚಿ ದಾಖಲಿಸಿರುವುದು ಸೇರಿದಂತೆ ಪುರಸಭೆಯಲ್ಲಿ ಕಾನೂನು ಬಾಹಿರ ಕೆಲಸಗಳೇ ನಡೆಯುತ್ತಿದೆ ಎಂದು ಅಪಾದಿಸಿದರು.

ಮುಖ್ಯಾಧಿಕಾರಿ ರೇಖಾ ಶೆಟ್ಟಿ, ಮತ್ತಡಿ ಹಾಗೂ ಅವರು ಧರಣಿನಿರತ ಸದಸ್ಯರ ಮನವೊಲಿಸುವ ಪ್ರಯತ್ನ ನಡೆಸಿದರೂ ಫಲಕಾರಿಯಾಗಲಿಲ್ಲ.

ತಹಶೀಲ್ದಾರ್ ಭರವಸೆ:ರಾತ್ರಿ ಸುಮಾರು 7:45ರ ವೇಳೆಗೆ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಪುರಸಭೆಗೆ ಆಗಮಿಸಿ ಧರಣಿ ನಿರತರೊಂದಿಗೆ ಮಾತುಕತೆ ನಡೆಸಿದರು.

ಸೆ. 21ರ ಬೆಳಗ್ಗೆ ಸಹಾಯಕ ಕಮೀಷನರ್ ರೇಣುಕಾ ಪ್ರಸಾದ್ ಅವರ ಸಮ್ಮುಖದಲ್ಲಿ ಪುರಸಭಾ ಅಧ್ಯಕ್ಷರನ್ನೊಳಗೊಂಡಂತೆ ಸಭೆಯನ್ನು ನಡೆಸಿ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದರು. ಆದರೆ ಈ ಸಭೆಗೆ ತಾವು ಭಾಗವಹಿಸುವುದಿಲ್ಲ ಎಂದು ಬಿಜೆಪಿ ಸದಸ್ಯರು ಈ ಸಂದರ್ಭದಲ್ಲಿ ಸ್ಪಷ್ಟ ಪಡಿಸಿದ್ದು, ಮಧ್ಯಾಹ್ನದ ವೇಳೆಗೆ ಸೆ. 4ರಂದು ನಡೆದ ಸಾಮಾನ್ಯ ಸಭೆಯಲ್ಲಿ ಆದ ನಿರ್ಣಯ ಪುಸ್ತಕದಲ್ಲಿ ದಾಖಲಾಗಿ ನಮಗೆ ಅದರ ಪ್ರತಿ ದೊರಕಬೇಕು. ತಪ್ಪಿದಲ್ಲಿ ಮತ್ತೆ ಧರಣಿ ಕುಳಿತುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X