ಮಂಗಳೂರು : ಮೀನುಗಾರರಿಗೆ ಮುನ್ನೆಚ್ಚರಿಕೆ
ಮಂಗಳೂರು, ಸೆ.21: ಹವಾಮಾನ ಇಲಾಖೆಯು ಸೆ.23ರವರೆಗೆ ಹೆಚ್ಚಿನ ಮಳೆ ಬೀಳುವ ಸಂಭವವಿದೆ ಎಂದು ಮುನ್ಸೂಚನೆ ನೀಡಿರುವುದರಿಂದ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಮುನ್ನೆಚ್ಚರಿಕೆ ನೀಡಿದ್ದಾರೆ.
Next Story





