ಸೆ.24: ಜಿಲ್ಲಾ ಮಟ್ಟದ ವಿಚಾರ ಸಂಕಿರಣ
ಮಂಗಳೂರು, ಸೆ.21: ಬ್ರಹ್ಮಶ್ರೀ ನಾರಾಯಣಗುರುಗಳ 163ನೆ ಜನ್ಮ ದಿನಾಚರಣೆಯ ಅಂಗವಾಗಿ ನಾರಾಯಣಗುರು ವಿಚಾರ ಕಮ್ಮಟ (ನಾಕ)ದ ವತಿಯಿಂದ ದ.ಕ. ಜಿಲ್ಲಾ ಮಟ್ಟದ ವಿಚಾರ ಸಂಕಿರಣವು ಸೆ.24ರಂದು ಬೆಳಗ್ಗೆ 9:45ಕ್ಕೆ ನಗರದ ಸಂತ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
‘ಯುವಜನರ ಗುರು ಮತ್ತು ಗುರಿ-ನಾರಾಯಣಗುರು’ ಎಂಬ ವಿಷಯದಲ್ಲಿ ನಡೆಯಲಿರುವ ವಿಚಾರ ಸಂಕಿರಣವನ್ನು ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಉದ್ಘಾಟಿಸಲಿದ್ದು, ಪ್ರಾಧ್ಯಾಪಕ ಪ್ರೊ. ಎಂ.ಎಸ್. ಕೋಟ್ಯಾನ್ ಉಪನ್ಯಾಸ ನೀಡಲಿದ್ದಾರೆ.
ಉಪನ್ಯಾಸಕ ಡಾ. ಗಣೇಶ್ ಅಮೀನ್ ಸಂಕಮಾರ್ ಹಾಗೂ ಮಂಗಳೂರು ವಿವಿ ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕ ಮುದ್ದು ಮೂಡುಬೆಳ್ಳೆ ಪ್ರತಿಕ್ರಿಯೆ ನೀಡಲಿದ್ದಾರೆ. ವಕೀಲ ಯಶವಂತ ಮರೋಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಎಂದು ನಾರಾಯಣಗುರು ವಿಚಾರ ಕಮ್ಮಟ (ನಾಕ) ಪ್ರಕಟನೆಯಲ್ಲಿ ತಿಳಿಸಿದೆ.
Next Story





