Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೀರುಗಾಲುವೆ ಕಾಮಗಾರಿ ಪ್ರದೇಶಕ್ಕೆ ಸಚಿವ...

ನೀರುಗಾಲುವೆ ಕಾಮಗಾರಿ ಪ್ರದೇಶಕ್ಕೆ ಸಚಿವ ಕೆ.ಜೆ.ಜಾರ್ಜ್ ಭೇಟಿ, ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ21 Sept 2017 9:15 PM IST
share
ನೀರುಗಾಲುವೆ ಕಾಮಗಾರಿ ಪ್ರದೇಶಕ್ಕೆ ಸಚಿವ ಕೆ.ಜೆ.ಜಾರ್ಜ್ ಭೇಟಿ, ಪರಿಶೀಲನೆ

ಬೆಂಗಳೂರು, ಸೆ. 21: ಗೋವಿಂದರಾಜ ನಗರ ಕ್ಷೇತ್ರ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಬಿಬಿಎಂಪಿ ಮೇಯರ್ ಪದ್ಮಾವತಿ, ಆ ಕ್ಷೇತ್ರ ವ್ಯಾಪ್ತಿಯಲ್ಲಿನ ಪ್ರಗತಿಯಲ್ಲಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಕಾಮಾಕ್ಷಿಪಾಳ್ಯದ ಸಮೀಪದ ಚೆನ್ನಪ್ಪ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಸದರಿ ಕೈಗಾರಿಕಾ ಬಡಾವಣೆಯ ಸ್ಥಿತಿಯನ್ನು ಗಮನಿಸಿ, ಅಭಿವೃದ್ಧಿ ಕಾರ್ಯ ಕೈಗೊಳ್ಳಲು ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಲು ಸೂಚಿಸಿದರು. ಅದರಂತೆ 36.5 ಕೋಟಿ ರೂ.ವೆಚ್ಚದಲ್ಲಿ ರಸ್ತೆ, ಪಾದಚಾರಿ, ಒಳಚರಂಡಿಗಳ ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಲು ವಿಶೇಷ ಅನುದಾನವನ್ನು ಕೂಡಲೇ ಒದಗಿಸುವುದು ಎಂದು ಅವರು ತಿಳಿಸಿದರು.

ಅನಂತರ ವಿಜಯನಗರ ಕ್ಷೇತ್ರದ ಆರ್‌ಪಿಸಿ ಬಡಾವಣೆಯಲ್ಲಿ ಬೃಹತ್ ನೀರುಗಾಲುವೆ ತೀವ್ರ ಮಳೆಯ ನೀರಿನ ಒತ್ತಡದಿಂದ ಕುಸಿದಿದ್ದು, ಸದರಿ ಬೃಹತ್ ನೀರುಗಾಲುವೆಯನ್ನು ಮರು ನಿರ್ಮಿಸಿ, ಸುತ್ತಮುತ್ತಲಿನ ಮನೆಗಳಿಗೆ ನೀರು ಹರಿಯುವುದನ್ನು ತಡೆಯುವಂತೆ ದುರಸ್ಥಿಗೆ ಆದೇಶ ನೀಡಿದರು.

ಇಲ್ಲಿನ ಶಾಮಣ್ಣ ಗಾರ್ಡನ್ ರೈಲ್ವೆ ಗೇಟ್‌ನ ಪೈಪ್‌ಲೈನ್ ಹತ್ತಿರ ಇರುವ ಬೃಹತ್ ನೀರುಗಾಲುವೆಗಳ ಪರಿಶೀಲನೆ ಮಾಡಿ ಆದ ಅನಾಹುತಗಳನ್ನು ಪರಿಶೀಲಿಸಿದರು. ಪೈಪ್ ಲೈನ್ ನಿವಾಸಿಗಳು ಅಲ್ಲಿನ ತೊಂದರೆಗಳನ್ನು ಸಚಿವರಿಗೆ ವಿವರಿಸಿದ್ದು, ಈ ಬೃಹತ್ ನೀರುಗಾಲುವೆಯಿಂದ ಬಹುತೇಕ ಮನೆಗಳಿಗೆ ನೀರು ನುಗ್ಗಿದಲ್ಲದೆ ಮನೆಗಳ ಅಡಿಪಾಯವು ಹಾಳಾಗಿದ್ದು ಮನೆಗಳು ಯಾವುದೇ ಸಂದರ್ಭದಲ್ಲಿಯು ಬೀಳುವ ಸಂಭವವಿರುತ್ತದೆ ಎಂದು ತಿಳಿಸಿದರು.

ಇದಕ್ಕೆ ಸ್ಪಂದಿಸಿದ ಕೆ.ಜೆ.ಜಾರ್ಜ್, ಸದರಿ ಕಾರ್ಯಕ್ಕೆ ಹೆಚ್ಚುವರಿಯಾಗಿ ತಲಾ 10 ಕೋಟಿ ರೂ.ಗಳಂತೆ ಅನುದಾನವನ್ನು ಕೂಡಲೇ ಬಿಡುಗಡೆಗೊಳಿಸಿ ಕಾಮಗಾರಿ ಪ್ರಾರಂಭಿಸಲು ಸೂಚಿಸಿದ್ದೇನೆ. ಅದರಂತೆ, ಎರಡು ಸ್ಥಳಗಳ ಬೃಹತ್ ನೀರು ಗಾಲುವೆಗಳ ಕಾಮಗಾರಿಗೆ 20ಕೋಟಿ ರೂ.ಹಣವನ್ನು ವಿಶೇಷ ಅನುದಾನದಡಿ ಬೃಹತ್ ನೀರುಗಾಲುವೆ ಕಾಮಗಾರಿಯ ಅಭಿವೃದ್ಧಿಗೆ ನೀಡಲಾಗುವುದೆಂದು ತಿಳಿಸಿದರು.

ಅಲ್ಲಿನ ನಿವಾಸಿಗಳಿಗೆ ಬೇರೆ ಕಡೆ ವಸತಿ ಮನೆಗಳನ್ನು ನೀಡಲು ಕ್ರಮ ವಹಿಸಲು ಸೂಚಿಸಿ, ಅರ್ಹರಿಗೆ ರಿಯಾಯಿತಿ ದರದಲ್ಲಿ ಕೆ.ಎಚ್.ಬಿಯ ಮನೆಗಳನ್ನು ಒದಗಿಸಲು ಕ್ರಮ ವಹಿಸುವಂತೆ ಆದೇಶಿಸಿದರು.

ಈ ವೇಳೆ ವಸತಿ ಸಚಿವ ಕೃಷ್ಣಪ್ಪ, ಸ್ಥಳೀಯ ಶಾಸಕ ಪ್ರಿಯಾಕೃಷ್ಣ, ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X