ಪ್ರೊ.ವೀರಭದ್ರಪ್ಪ ನಿಧನದಿಂದ ವೈಚಾರಿಕ ಲೋಕ ಅನಾಥ: ಸಚಿವೆ ಉಮಾಶ್ರೀ

ಬೆಂಗಳೂರು, ಸೆ.21: ಹಿರಿಯ ಸಾಹಿತಿ, ವಿಚಾರವಾದಿ ಪ್ರೊ.ಬಿ.ವಿ.ವೀರಭದ್ರಪ್ಪ ನಿಧನದ ಮೂಲಕ ವೈಚಾರಿಕ ಲೋಕ ಅನಾಥವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಉಮಾಶ್ರೀ ಶೋಕ ವ್ಯಕ್ತಪಡಿಸಿದ್ದಾರೆ.
ದಾವಣಗೆರೆಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರೊ.ಬಿ.ವಿ.ವೀರಭದ್ರಪ್ಪ ಕನ್ನಡ ಸಾಹಿತ್ಯಕ್ಕೆ ಹಲವು ಉತ್ತಮ ಕೃತಿಗಳನ್ನು ನೀಡಿದ್ದಾರೆ. ಅವರ ಅತ್ಯಂತ ಜನಪ್ರಿಯ ಕೃತಿ ‘ವೇದಾಂತ ರೆಜಿಮೆಂಟ್’ ಒಂದು ವಿಶಿಷ್ಟ ಅನುಭವ ಕೊಡುವಂತಹದ್ದಾಗಿದೆ. ತಮ್ಮ ವೈಚಾರಿಕ ಲೇಖನಗಳ ಮೂಲಕ ಸಾಹಿತ್ಯಾಸಕ್ತರ ಗಮನ ಸೆಳೆದಿದ್ದ ಬಿ.ವಿ.ವೀರಭದ್ರಪ್ಪ ಒಂದು ತಲೆಮಾರನ್ನು ವೈಚಾರಿಕತೆಯತ್ತ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದ್ದರು. ಅವರ ನಿಧನ ಕನ್ನಡ ಸಾಹಿತ್ಯಕ್ಕೆ ದೊಡ್ಡ ನಷ್ಟ ತಂದಿದೆ ಎಂದು ಅವರು ಪ್ರಕಟನೆಯಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story





