Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯ ಗೃಹ ಮಂಡಳಿಯ ಫ್ಲಾಟ್ ಹಂಚಿಕೆಗೆ...

ರಾಜ್ಯ ಗೃಹ ಮಂಡಳಿಯ ಫ್ಲಾಟ್ ಹಂಚಿಕೆಗೆ ‘ಪ್ರಾಪರ್ಟಿ ಎಕ್ಸ್‌ಪೋ’: ಮಾಲಿಕಯ್ಯ ಗುತ್ತೇದಾರ್

ವಾರ್ತಾಭಾರತಿವಾರ್ತಾಭಾರತಿ21 Sept 2017 9:39 PM IST
share

ಬೆಂಗಳೂರು, ಸೆ.21: ಬೆಂಗಳೂರಿನಲ್ಲಿ ಕರ್ನಾಟಕ ಗೃಹ ಮಂಡಳಿ ನಿರ್ಮಿಸಿರುವ ಬಹುಮಹಡಿ ಸಮುಚ್ಚಯಗಳ ಫ್ಲಾಟ್‌ಗಳನ್ನು ಸ್ಥಳದಲ್ಲಿಯೆ ಹಂಚಿಕೆ ಮಾಡಲು ಸೆ.22 ರಿಂದ 24ರ ವರೆಗೆ ಮೂರು ದಿನಗಳ ‘ಪ್ರಾಪರ್ಟಿ ಎಕ್ಸ್‌ಪೋ’ ಮೇಳವನ್ನು ಕೆಂಗೇರಿ ಉಪನಗರದಲ್ಲಿನ ಕೆಎಚ್‌ಬಿ-ಪ್ಲಾಟಿನಂ ಕ್ಲಬ್‌ ಹಾಸ್‌ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಗೃಹ ಮಂಡಳಿಯ ಅಧ್ಯಕ್ಷ ಮಾಲಿಕಯ್ಯ ಗುತ್ತೇದಾರ್ ತಿಳಿಸಿದರು.

ಗುರುವಾರ ನಗರದ ಕಾವೇರಿ ಭವನದಲ್ಲಿರುವ ರಾಜ್ಯ ಗೃಹ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗೃಹ ಮಂಡಳಿಯು ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿ, ಬಂಡೇಮಠದಲ್ಲಿ ಹಾಗೂ ಸೂರ್ಯನಗರದಲ್ಲಿ ಸುಸಜ್ಜಿತವಾದ ಹಾಗೂ ಮೂಲ ಸೌಕರ್ಯಗಳನ್ನೊಳಗೊಂಡ ವಿವಿಧ ವರ್ಗದ ಫ್ಲಾಟ್‌ಗಳನ್ನು ನಿರ್ಮಿಸಿದ್ದು, ಈಗಾಗಲೇ ಕೆಲವು ಫ್ಲಾಟ್‌ಗಳನ್ನು ಹಂಚಿಕೆ ಮಾಡಲಾಗಿದೆ ಎಂದರು.

ಕೆಂಗೇರಿ ಉಪನಗರದಲ್ಲಿನ ಪ್ಲಾಟಿನಂ ಬಹುಮಹಡಿ ಕಟ್ಟಡದಲ್ಲಿ ಒಟ್ಟು 808 ವಿವಿಧ ವರ್ಗದ ಫ್ಲಾಟ್‌ಗಳನ್ನು ನಿರ್ಮಿಸಿದ್ದು, 397 ಫ್ಲಾಟ್‌ಗಳನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ. ಪ್ರಸ್ತುತ 411 ಫ್ಲಾಟ್‌ಗಳು ಹಂಚಿಕೆಗೆ ಲಭ್ಯವಿದೆ ಎಂದು ಹೇಳಿದರು.

ಕೆಂಗೇರಿ ಬಂಡೇಮಠ ಬಡಾವಣೆಯಲ್ಲಿನ ಡೈಮಂಡ್ ಬಹುಮಹಡಿ ಕಟ್ಟಡದಲ್ಲಿ ಒಟ್ಟು 306 ವಿವಿಧ ವರ್ಗದ ಫ್ಲಾಟ್‌ಗಳನ್ನು ನಿರ್ಮಿಸಿದ್ದು, 110 ಫ್ಲಾಟ್‌ಗಳನ್ನು ಈಗಾಗಲೆ ಹಂಚಿಕೆ ಮಾಡಿದ್ದು, ಪ್ರಸ್ತುತ 206 ಫ್ಲಾಟ್‌ಗಳು ಹಂಚಿಕೆಗೆ ಲಭ್ಯವಿದೆ ಎಂದು ಅವರು, ಸೂರ್ಯನಗರ 1ನೆ ಹಂತದ ಬಡಾವಣೆಯಲ್ಲಿನ ಸೂರ್ಯ ಎಲಿಗೆನ್ಸ್ ಬಹುಮಹಡಿ ಕಟ್ಟಡದಲ್ಲಿ ಒಟ್ಟು 384 ವಿವಿಧ ವರ್ಗದ ಫ್ಲಾಟ್‌ಗಳನ್ನು ನಿರ್ಮಿಸಿದ್ದು, 58 ಫ್ಲಾಟ್‌ಗಳನ್ನು ಈಗಾಗಲೇ ಹಂಚಿಕೆ ಮಾಡಿದ್ದು, ಪ್ರಸ್ತುತ 326 ಫ್ಲಾಟ್‌ಗಳು ಹಂಚಿಕೆಗೆ ಲಭ್ಯವಿರುತ್ತವೆ ಎಂದರು.

ಉತ್ತಮ ಗುಣಮಟ್ಟದ ಫ್ಲಾಟ್‌ಗಳು ನೀರು, ವಿದ್ಯುತ್, ಒಳಚರಂಡಿ ಹಾಗೂ ಸಕಲ ಸೌಲಭ್ಯಗಳನ್ನು ಒಳಗೊಂಡಿವೆ. ಫ್ಲಾಟ್‌ಗಳು ಕೂಡಲೆ ವಾಸಕ್ಕೆ ಸಿದ್ಧವಿರುತ್ತವೆ. ಪ್ಲಾಟಿನಂ ಮತ್ತು ಸೂರ್ಯ ಎಲಿಗೆನ್ಸ್ ಬಹುಮಹಡಿ ಕಟ್ಟಡಗಳಲ್ಲಿ ಈಜುಕೊಳ ಹಾಗೂ ಕ್ಲಬ್‌ಹೌಸ್ ಸೇರಿದಂತೆ ಹೆಚ್ಚಿನ ಸೌಲಭ್ಯಗಳು ಒಳಗೊಂಡಿವೆ ಎಂದು ತಿಳಿಸಿದರು.

ಗೃಹ ಮಂಡಳಿಯ ಆಯುಕ್ತ ಎ.ಬಿ.ಇಬ್ರಾಹೀಂಮಾತನಾಡಿ, ಪಾಪರ್ಟಿ ಎಕ್ಸ್‌ಪೋ ದಸರಾ ವಿಶೇಷ ಕೊಡುಗೆಯೆಂದು ಶೇ.2ರಷ್ಟು ವಿಶೇಷ ರಿಯಾಯಿತಿ ನೀಡಿ ಸ್ಥಳದಲ್ಲಿಯೆ ಸಾರ್ವಜನಿಕರು ಇಚ್ಛಿಸುವ ಫ್ಲಾಟ್‌ಗಳನ್ನು ಕೈಗೆಟಕುವ ದರದಲ್ಲಿ ಹಂಚಿಕೆ ಮಾಡಿ ಹಂಚಿಕೆ ಪತ್ರವನ್ನು ನೀಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಯೋಜನೆಯಡಿಯಲ್ಲಿ ಖರೀದಿಸಲು ನೀಡಲಾಗಿರುವ ಸಾಲ ಸೌಲಭ್ಯಗಳನ್ನು ಫ್ಲಾಟ್ ಖರೀದಿಸುವ ಗ್ರಾಹಕರಿಗೆ ಬ್ಯಾಂಕ್ ಸಾಲ ಪಡೆಯಲು ಗೃಹ ಮಂಡಳಿಯಿಂದ ಖಾತ್ರಿಯನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.

ಗೃಹ ಮಂಡಳಿಯ ಕಾರ್ಯದರ್ಶಿ ದಯಾನಂದ್ ಭಂಡಾರಿ ಮಾತನಾಡಿ, ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ 3 ಲಕ್ಷ ರೂ. ಒಳಗೆ ವಾರ್ಷಿಕ ಆದಾಯ ಹೊಂದಿರುವ ಅರ್ಜಿದಾರರು ಒಂದು ಬಿ.ಎಚ್.ಕೆ. ಫ್ಲಾಟ್ ಅನ್ನು ಬ್ಯಾಂಕ್ ಸಾಲದ ಮುಖಾಂತರ ಖರೀದಿಸಿದಲ್ಲಿ, ಕೇಂದ್ರ ಸರಕಾರದಿಂದಲೂ 1.5 ಲಕ್ಷ ರೂ.ಗಳಷ್ಟು ಸಹಾಯಧನ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಜಿದಾರರಿಗೆ ಹೆಚ್ಚುವರಿಯಾಗಿ ರಾಜ್ಯ ಸರಕಾರದ ವತಿಯಿಂದ 1.80 ಲಕ್ಷ ರೂ.ಗಳಷ್ಟು ವಿಶೇಷ ಸಹಾಯಧನ ಪಡೆಯಲು ಅವಕಾಶವಿರುತ್ತದೆ ಎಂದು ಮಾಹಿತಿ ನೀಡಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ 18 ಲಕ್ಷ ರೂ.ವರೆಗೆ ವಾರ್ಷಿಕ ಆದಾಯ ಹೊಂದಿರುವ ಅರ್ಜಿದಾರರು ಬ್ಯಾಂಕ್ ಸಾಲದ ಮುಖಾಂತರ ಫ್ಲಾಟ್ ಖರೀದಿಸಿದಲ್ಲಿ, ಗರಿಷ್ಠ 2.67 ಲಕ್ಷ ರೂ.ವರೆಗೆ ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಯೋಜನೆಯಡಿ ಬಡ್ಡಿಯಲ್ಲಿ ವಿಶೇಷ ರಿಯಾುತಿ ಪಡೆಯಲು ಅವಕಾಶವಿರುತ್ತದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X