Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನನ- ಮರಣ ನೋಂದಣಿ ಕಡ್ಡಾಯ: ಉಡುಪಿ...

ಜನನ- ಮರಣ ನೋಂದಣಿ ಕಡ್ಡಾಯ: ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ

ವಾರ್ತಾಭಾರತಿವಾರ್ತಾಭಾರತಿ21 Sept 2017 9:49 PM IST
share

ಉಡುಪಿ, ಸೆ.21: ಜಿಲ್ಲೆಯ ಪ್ರತಿಯೊಂದು ಜನನ ಮತ್ತು ಮರಣದ ವರದಿ ಯನ್ನು ಕಡ್ಡಾಯವಾಗಿ ನೊಂದಣಿ ಮಾಡುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮರಣ ನೊಂದಣಿ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯ ಪ್ರತಿಯೊಂದು ಜನನ ಮತ್ತು ಮರಣದ ನೊಂದಣಿ ಕಡ್ಡಾಯ ವಾಗಿದ್ದು, ಮನೆಗಳಲ್ಲಿ ಸಂಭವಿಸುವ ಜನನ ಮತ್ತು ಮರಣದ ಕುರಿತು ಸ್ಥಳಿಯ ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು ಹಾಗೂ ಗ್ರಾಮ ಲೆಕ್ಕಿಗರು ಸಂಬಂಧಪಟ್ಟ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಜನನ ಅಥವಾ ಮರಣ ಸಂಭವಿಸಿದ 21 ದಿನಗಳ ಒಳಗೆ ಸಂಬಂಧಪಟ್ಟ ನೊಂದಣಾಧಿಕಾರಿಯಿಂದ ಪ್ರಮಾಣ ಪತ್ರ ಪಡೆಯುವಂತೆ ಹಾಗೂ ತಡ ನೊಂದಣಿಗೆ ಅವಕಾಶ ನೀಡದಂತೆ ತಿಳಿಸಿದರು.

ಗ್ರಾಮಾಂತರ ಹಾಗೂ ನಗರ ಪ್ರದೇಶದಲ್ಲಿರುವ ಎಲ್ಲಾ ಜನನ ಮರಣ ನೊಂದಣಾಧಿಕಾರಿಗಳಿಗೆ ಹಾಗೂ ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳಿಗೆ, ಅಂಗನವಾಡಿ ಹಾಗೂ ಆರೋಗ್ಯ ಕಾರ್ಯಕರ್ತೆಯರಿಗೆ ಜನನ ಮರಣ ನೊಂದಾವಣಿ ಮಾಡುವ ಕುರಿತಂತೆ ಪ್ರತ್ಯೇಕ ಕಾರ್ಯಾಗಾರ ನಡೆಸಿ ಸಮಗ್ರ ಮಾಹಿತಿ ನೀಡುವಂತೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯಲ್ಲಿ 2016ರಲ್ಲಿ 16,215 ಜನನ ಹಾಗೂ 9,247 ಮರಣ ಸಂಭವಿಸಿದ್ದು, 2870 ತಡ ನೊಂದಣಿ ಪ್ರಕರಣ ದಾಖಲಾಗಿದೆ. ಪ್ರಸಕ್ತ 2017ರ ಆಗಸ್ಟ್ ತಿಂಗಳವರೆಗೆ ಜಿಲ್ಲೆಯಲ್ಲಿ 9449 ಜನನ ಮತ್ತು 2618 ಮರಣ ದಾಖಲಾಗಿದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಡಾ. ಉದಯ ಶೆಟ್ಟಿ ಮಾಹಿತಿ ನೀಡಿದರು.

ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂವಿತಾ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X