Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಪಹಣಿ ಪತ್ರಿಕೆಯಲ್ಲಿ ಬದಲಾವಣೆ

​ಪಹಣಿ ಪತ್ರಿಕೆಯಲ್ಲಿ ಬದಲಾವಣೆ

ವಾರ್ತಾಭಾರತಿವಾರ್ತಾಭಾರತಿ22 Sept 2017 10:53 PM IST
share

ಉಡುಪಿ, ಸೆ. 22: ಪೂರ್ವ ಮುದ್ರಿತ ಪಹಣಿ ನಮೂನೆಗಾಗಿ ಸರಬರಾಜು ದಾರರ ಮೇಲೆ ಅವಲಂಬಿತವಾಗುವುದನ್ನು ತಪ್ಪಿಸಲು ತಂತ್ರಾಂಶದಲ್ಲಿಯೇ ಕಪ್ಪು ಬಿಳುಪು ಗಾತ್ರದ ಪಹಣಿಯಲ್ಲಿ ಲೀಗಲ್ ಗಾತ್ರದ ಪಹಣಿಯನ್ನು ಮುದ್ರಿ ಸಲು ಸರಕಾರ ಕ್ರಮಕೈಗೊಂಡಿದೆ.

ಕಂದಾಯ ಇಲಾಖೆಯಿಂದ ರೈತರಿಗೆ /ಸಾರ್ವಜನಿಕರಿಗೆ ಗಣಕೀಕೃತ ಪಹಣಿಗಳನ್ನು ವಿತರಿಸುವ ಸೌಲಭ್ಯವನ್ನು 2001ರಿಂದ ಜಾರಿಗೆ ತರಲಾಗಿದ್ದು, ಸರಕಾರವು ಪ್ರಸ್ತುತ ಟೆಂಡರ್‌ದಾರರಿಂದ ನೀಲಿ ಬಣ್ಣದ ಪೂರ್ವ ಮುದ್ರಿತ ಪಹಣಿ ನಮೂನೆಯನ್ನು ಪಡೆದು ಈ ನಮೂನೆಯಲ್ಲಿ ಭೂಮಿ ಡಾಟಾ ಬೇಸ್ ನಿಂದ ಪಹಣಿಯ ಮಾಹಿತಿಯನ್ನು ಮುದ್ರಿಸಿ ಸಾರ್ವಜನಿಕರಿಗೆ ವಿತರಿಸಲಾಗುತ್ತಿತ್ತು.

ಈ ವ್ಯವಸ್ಥೆಯಲ್ಲಿ ಪಹಣಿ ಪತ್ರಿಕೆಗಳನ್ನು ಮುದ್ರಿಸಲು ಪೂರ್ವ ಮುದ್ರಿತ ಪಹಣಿ ನಮೂನೆಗಾಗಿ ಸರಕಾರ ಸರಬರಾಜುದಾರರ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿತ್ತು. ಇದರಿಂದ ರೈತರಿಗೆ ಪಹಣಿಗಳ ತುರ್ತು ಅಗತ್ಯವಿದ್ದ ಸಂದರ್ಭದಲ್ಲಿ ಬ್ಯಾಂಕ್‌ಗಳಿಂದ ಅಥವಾ ಯಾವುದಾದರೂ ಸಂಸ್ಥೆಯಿಂದ ಸಾಲ ಪಡೆಯಲು, ಸರಕಾರದಿಂದ ಪರಿಹಾರ ಪಡೆಯುವಾಗ, ಬೆಳೆ ವಿಮೆಗಾಗಿ ಪೂರ್ವ ಮುದ್ರಿತ ಪಹಣಿ ನಮೂನೆಯ ಸರಬರಾಜಿನಲ್ಲಿ ಸ್ವಲ್ಪ ವಿಳಂಬ ವಾದರೂ ಸಹ ನಿಗದಿತ ಸಮಯದಲ್ಲಿ ರೈತರು /ಸಾರ್ವಜನಿಕರು ಪಹಣಿಗಳನ್ನು ಪಡೆಯಲು ಕಷ್ಟಸಾಧ್ಯವಾಗುತ್ತಿತ್ತು.

ಇದರ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಕಪ್ಪು ಬಿಳುಪು ಗಾತ್ರದ ಪಹಣಿಯಲ್ಲಿ ಈ ಹಿಂದೆ ನೀಡುತ್ತಿದ್ದ ಪಹಣಿಯಲ್ಲಿರುವ ಎಲ್ಲಾ ಸುರಕ್ಷತಾ ಕ್ರಮಗಳನ್ನು ಒಳಗೊಂಡಿದ್ದು, ಹೆಚ್ಚುವರಿ ಭದ್ರತಾ ವೈಶಿಷ್ಟ್ಯಗಳಾದ ವಿಶೇಷ ಪಹಣಿ ಗುರುತಿನ ಸಂಖ್ಯೆ, ಕ್ರಮ ಸಂಖ್ಯೆ, ಬಾರ್‌ಕೋಡ್, ಡಿಜಿಟಲ್ ಸಹಿ ಗಳನ್ನು ಒಳಗೊಂಡಿರುತ್ತದೆ ಹಾಗೂ ಹಿಂದೆಂದಿಗಿಂತಲೂ ಹೆಚ್ಚು ಸುರಕ್ಷಿತವಾಗಿ ರುತ್ತದೆ.

ಈಗಾಗಲೇ ಜಿಲ್ಲೆಗಳಲ್ಲಿರುವ ನೀಲಿ ಬಣ್ಣದ ಪೂರ್ವ ಮುದ್ರಿತ ಪಹಣಿ ಪ್ರತಿಗಳ ದಾಸ್ತಾನು ಖಾಲಿಯಾಗುವವರೆಗೆ ಸದರಿ ಪಹಣಿ ಪ್ರತಿಗಳನ್ನೆ ವಿತರಿಸ ಲಾಗುವುದು. ದಾಸ್ತಾನು ಖಾಲಿಯಾದ ನಂತರ ಕಪ್ಪುಬಿಳುಪು ಬಣ್ಣದಲ್ಲಿ ಲೀಗಲ್ ಗಾತ್ರದ ಕಾಗದದ ಮೇಲೆ ಪಹಣಿಯನ್ನು ಮುದ್ರಿಸಿ ಪಹಣಿ ಪ್ರತಿಗಳನ್ನು ವಿತರಿಸಲಾಗುವುದೆಂದು ಸೂಚಿಸಲಾಗಿದೆ.

ಆದುದರಿಂದ ಸಾರ್ವಜನಿಕರು ಈ ಬದಲಾವಣೆಯನ್ನು ಗಮನದಲ್ಲಿರಿಸಿ ಕೊಂಡು ಯಾವುದೇ ಗೊಂದಲಕ್ಕೆ ಒಳಗಾಗದೇ ತಾಲೂಕು ಕಚೇರಿಯ ಭೂಮಿ ಕೇಂದ್ರದಲ್ಲಿ, ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ, ಗ್ರಾಮ ಪಂಚಾಯತ್‌ನ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಹಾಗೂ ಸರಕಾರದಿಂದ ಪಹಣಿ ವಿತರಿಸಲು ಅನುಮತಿ ನೀಡಿರುವ ಖಾಸಗಿ ಕೇಂದ್ರಗಳಲ್ಲಿ ವಿತರಿಸಲಾಗುವ ಪಹಣಿ ಪತ್ರಿಕೆ ಗಳನ್ನು ಪಡೆದು ತಮ್ಮ ಅವಶ್ಯಕತೆಗಳಿಗೆ ಬಳಸಿಕೊಳ್ಳಬಹುದು.
ಸಾರ್ವಜನಿಕರಿಗೆ ಪಹಣಿಯನ್ನು ನಿಗದಿತ ಸಮಯಕ್ಕೆ ಪಡೆಯಲು ಅನುಕೂಲ ವಾಗುವಂತೆ ಸಾರ್ವಜನಕ ಹಿತದೃಷ್ಟಿಯಿಂದ ಪಹಣಿಯಲ್ಲಿ ಈ ಬದಲಾವಣೆ ಯನ್ನು ತರಲಾಗಿದೆ. ಸಾರ್ವಜನಿಕರು ಪಹಣಿ ಪತ್ರದ ನೈಜತೆಯನ್ನು ವೆಬ್‌ಸೈಟ್‌ www.landrecords.karnataka.gov.inನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X