ಅ.3: ಆಳ್ವಾಸ್ ವಿದ್ಯಾರ್ಥಿಸಿರಿ ಅಧ್ಯಕ್ಷರ ಆಯ್ಕೆ
ಮೂಡುಬಿದಿರೆ, ಸೆ. 23: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುತ್ತಿರುವ `ಆಳ್ವಾಸ್ ವಿದ್ಯಾರ್ಥಿಸಿರಿ 2017' ವಿದ್ಯಾರ್ಥಿ ಸಾಹಿತ್ಯ ಸಂಸ್ಕಂತಿ ಸಮ್ಮೇಳನವು ನವೆಂಬರ ತಿಂಗಳಲ್ಲಿ ವಿದ್ಯಾಗಿರಿಯಲ್ಲಿ ಜರುಗಲಿದ್ದು, ಸಮ್ಮೇಳನದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಅ. 3 ರಂದು ಬೆಳಗ್ಗೆ 10ರಿಂದ ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸಿನ ಸೆಮಿನಾರ್ ಹಾಲ್‍ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾಷಣ, ಸಾಹಿತ್ಯ, ಸಾಂಸ್ಕಂತಿಕ ಮೊದಲಾದ ಕ್ಷೇತ್ರಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳು ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಕಾಸರಗೋಡು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಹೈಸ್ಕೂಲು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳು ತಾವು ಕಲಿಯುತ್ತಿರುವ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಪತ್ರ, ಸ್ವಪರಿಚಯದ ವಿವರ ಹಾಗೂ ಪಡೆದ ಪ್ರಮಾಣ ಪತ್ರಗಳ ಜತೆಗೆ ಹಾಜರಿರಬೇಕು.
ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಆಶು ಭಾಷಣ ಹಾಗೂ ಸಂದರ್ಶನಗಳನ್ನು ಒಳಗೊಂಡಿರುತ್ತದೆ. ಇದೇ ಸಂದರ್ಭದಲ್ಲಿ ಸಮ್ಮೇಳನದ ಸಮಾರೋಪ ಭಾಷಣ ಮಾಡುವವರನ್ನು ಆಯ್ಕೆ ಮಾಡಲಾಗುವುದು. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಅರ್ಹರಿಗೆ ಸಮ್ಮೇಳನದಲ್ಲಿ ಅವಕಾಶಗಳನ್ನು ನೀಡಲಾಗುವುದು.
ವಿಶಿಷ್ಟ ವೈಯಕ್ತಿಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೂ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶವಿದ್ದು ಅವರು ತಮ್ಮ ಸ್ವವಿವರವನ್ನು ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ-574227 ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.
ಹೆಚ್ಚಿನ ವಿವರಗಳಿಗೆ 9481326858 ಅಥವಾ 9448911190 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು.







