ಬಿಎಸ್ ವೈಗೆ ಪೊಲೀಸ್ ನೋಟಿಸ್ ಜಾರಿ: ಖಂಡಿಸಿ ಬಿಜೆಪಿ ಪ್ರತಿಭಟನೆ
ಬೆಂಗಳೂರು, ಸೆ.23: ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪಆಪ್ತ ಸಹಾಯಕ ವಿನಯ್ ಮೇಲೆ ಹಲ್ಲೆ, ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಅವರಿಗೆ ಮಲ್ಲೇಶ್ವರಂ ಎಸಿಪಿ ನೋಟಿಸ್ ನೀಡಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶನಿವಾರ ನಗರದ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ಮುಂಭಾಗ ಬಿಜೆಪಿ ಶಾಸಕ ಡಾ.ಅಶ್ವತ್ಥ ನಾರಾಯಣ, ಮಾಜಿ ಉಪ ಮಹಾಪೌರ ಹರೀಶ್ ನೇತೃತ್ವದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿ, ನೋಟಿಸ್ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರದ ಕೆಲವರು ಬಿ.ಎಸ್.ಯಡಿಯೂರಪ್ಪಅವರ ವಿರುದ್ಧ ಪಿತೂರಿ ಮಾಡಿ ಅನಗತ್ಯವಾಗಿ ನೋಟಿಸ್ ಜಾರಿ ಮಾಡಿದ್ದಾರೆ. ಕೂಡಲೇ ನೋಟಿಸ್ ವಾಪಸ್ ಪಡೆಯಬೇಕು. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ಪಡೆಯುವುದಿದ್ದರೆ ಯಡಿಯೂರಪ್ಪನವರ ಮನೆಗೆ ತೆರಳಿ ಹೇಳಿಕೆ ಪಡೆಯಿರಿ ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.
Next Story





