Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಾಹನಗಳಿಗೆ ನಕಲಿ ದಾಖಲೆ, ಹಣಕಾಸು...

ವಾಹನಗಳಿಗೆ ನಕಲಿ ದಾಖಲೆ, ಹಣಕಾಸು ಸಂಸ್ಥೆಗಳಿಗೆ ವಂಚನೆಯ ಜಾಲ ಪತ್ತೆ: ವಶ

ವಾರ್ತಾಭಾರತಿವಾರ್ತಾಭಾರತಿ23 Sept 2017 9:49 PM IST
share
ವಾಹನಗಳಿಗೆ ನಕಲಿ ದಾಖಲೆ, ಹಣಕಾಸು ಸಂಸ್ಥೆಗಳಿಗೆ ವಂಚನೆಯ ಜಾಲ ಪತ್ತೆ: ವಶ

ಮಂಗಳೂರು, ಸೆ. 23: ವಾಹನಗಳಿಗೆ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಹಣಕಾಸು ಸಂಸ್ಥೆಗಳಿಂದ ಸಾಲ  ಪಡೆದು ಹಣಕಾಸು ಸಂಸ್ಥೆಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ವಂಚಿಸುತ್ತಿದ್ದ  ಹಾಗೂ ನಕಲಿ ನೋಂದಣಿ ಸಂಖ್ಯೆ ಅಳವಡಿಸಿ ವಾಹನಗಳನ್ನು ಉಪಯೋಗಿಸುತ್ತಿದ್ದ ಜಾಲವನ್ನು ಪತ್ತೆ ಹಚ್ಚುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಉಲಾಯಿಬೆಟ್ಟು ಮಂಜಗುಡ್ಡೆ ಮನೆ ನಿವಾಸಿ ನವೀನ್ ನೊರೊನ್ಹಾ (41) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು - ಮೂಡುಶೆಡ್ಡೆ ನಡುವೆ ರೂಟ್ ನಂಬ್ರ: 3ಬಿ ಯಲ್ಲಿ ಸಂಚರಿಸುವ  ಬಸ್ ಒಂದಕ್ಕೆ ನಕಲಿ ನೋಂದಣಿ ಸಂಖ್ಯೆಯನ್ನು ಅಳವಡಿಸಿ ಸಂಚಾರ ನಡೆಸುತ್ತಿದೆ ಎಂದು ಮಂಗಳೂರು ಸಿಸಿಬಿ ಪೊಲೀಸ್ ದೊರೆತ ಖಚಿತ ವರ್ತಮಾನದಂತೆ ಆ ಬಸ್ಸನ್ನು ಮಂಗಳೂರು ನಗರದ ಮೂಡುಶೆಡ್ಡೆ ಬಳಿ ಪರಿಶೀಲಿಸಿದಾಗ ಈ ವಂಚನೆ ಬೆಳಕಿಗೆ ಬಂದಿದೆ.

ಆರೋಪಿಯನ್ನು ವಿಚಾರಿಸಿದಾಗ ಬಸ್ಸನ್ನು ವ್ಯಕ್ತಿಯೊಬ್ಬರಿಂದ ಖರೀದಿ ಮಾಡಿ ಅದಕ್ಕೆ ತನ್ನ ಮಾಲಕತ್ವದ ಬಸ್ಸಿನ ಚಾಸಿಸ್ ನಂಬ್ರವನ್ನು ಈ ಬಸ್ಸಿಗೆ ನಗರದ ಪಂಪ್‌ವೆಲ್ ಬಳಿಯ ಬೆಂದೂರಿನ ವಿನ್ಸೆಂಟ್ ಸಿಕ್ವೇರಾ(59), ಮಾಲಕತ್ವದ ವರ್ಕ್‌ಶಾಪ್ ನಲ್ಲಿ ನಕಲಿಯಾಗಿ ಅಳವಡಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ನವೀನ್ ನೊರೊನ್ಹಾ ನ ಮಾಹಿತಿಯಂತೆ ಇದೇ ರೀತಿ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ನಕಲಿ ನೋಂದಾಣಿ ಸಂಖ್ಯೆಯಲ್ಲಿ ಸಂಚರಿಸತ್ತಿದ್ದ 2 ಟ್ರಕ್ ಹಾಗೂ ಒಂದು ಜೆಸಿಬಿಯನ್ನು ಹಾಗೂ ನಕಲಿ ಚಾಸಿಸ್ ನಂಬ್ರವನ್ನು ಸೃಷ್ಟಿ ಮಾಡಲು ಉಪಯೋಗಿಸಿದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸೊತ್ತಿನ ಮೌಲ್ಯ ರೂ. 81,09,000 ರೂ. ಎಂದು ಆಂದಾಜಿಸಲಾಗಿದೆ. ಈ ರೀತಿ ಸರಕಾರಕ್ಕೆ ತೆರಿಗೆ ಹಣ ಹಾಗೂ ಹಣಕಾಸು ಸಂಸ್ಥೆಗಳಿಂದ ಸಾಲವನ್ನು ಪಡೆದು ಮರುಪಾವತಿ ಮಾಡದೇ ವಂಚನೆ ಮಾಡುವ ಈ ವ್ಯವಸ್ಥಿತ ಜಾಲದಲ್ಲಿ ಭಾಗಿಯಾದವರ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳ ಪತ್ತೆ ಕಾರ್ಯಾಚರಣೆ ಮಾಡಲಾಗುತ್ತಿದೆ. ಆರೋಪಿಗಳು ಅಕ್ರಮವಾಗಿ ಹಾಗೂ ಕಾನೂನು ಬಾಹಿರವಾಗಿ ಲಾಭಗಳಿಸುವ ಸಮಾನ ಉದ್ದೇಶದಿಂದ ಒಟ್ಟು ಸೇರಿ ಒಳಸಂಚು ನಡೆಸಿ ಲಾರಿ ಮತ್ತು ಜೆಸಿಬಿ ಯನ್ನು ಕಳವು ಮಾಡಿಕೊಂಡು ಅವುಗಳಲ್ಲಿ ಬಸ್ಸು ಮತ್ತು ಲಾರಿಗಳ ಚಾಸಿಸ್ ನಂಬ್ರಗಳನ್ನು ಅದಲು ಬದಲಾಯಿಸಿ ಹಾಗೂ ಇಂಜಿನ್ ನಂಬ್ರಗಳನ್ನು ತಿರುಚಿಸಿ ನಂತರ ಬೇರೆ ನೋಂದಣಿ ನಂಬ್ರಗಳನ್ನು ನೀಡಿ ಅವುಗಳು ನೈಜವಾದುದೆಂದು ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಬಳಿಕ ಆರ್‌ಟಿಒ ಸಂಬಂಧಿತ ಇಲಾಖೆಯ ನಕಲಿ ಸಹಿ ಮೊಹರು ಸೃಷ್ಟಿಸಿ ಸಂಬಂಧಪಟ್ಟ ಇಲಾಖೆಗೆ ಹಾಗೂ ಹಣಕಾಸು ಸಂಸ್ಥೆಗಳಿಗೆ ಮೋಸ ಮತ್ತು ವಂಚನೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಕಮೀಷನರ್ ಟಿ.ಆರ್.ಸುರೇಶ್ ಅವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ ಹನುಮಂತರಾಯ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಅಧಿಕಾರಿ ಮತ್ತು ಸಿಬ್ಬಂದಿ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X