Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ವಿಭಿನ್ನ ಗೆಟಪ್ ನಲ್ಲಿ ಆಮಿರ್

ವಿಭಿನ್ನ ಗೆಟಪ್ ನಲ್ಲಿ ಆಮಿರ್

ವಾರ್ತಾಭಾರತಿವಾರ್ತಾಭಾರತಿ23 Sept 2017 11:13 PM IST
share
ವಿಭಿನ್ನ ಗೆಟಪ್ ನಲ್ಲಿ ಆಮಿರ್

ಧೂಮ್ 3ನಲ್ಲಿ ಭರ್ಜರಿ ಆ್ಯಕ್ಷನ್ ದೃಶ್ಯಗಳಿಂದ ಪ್ರೇಕ್ಷಕರನ್ನು ರಂಜಿಸಿದ್ದ ಆಮಿರ್ ಖಾನ್ ಇದೀಗ ತನ್ನ ಮುಂದಿನ ಚಿತ್ರ ‘ಥಗ್ಸ್ ಆಫ್ ಹಿಂದೂಸ್ಥಾನ್’ನಲ್ಲಿ ಇನ್ನೊಂದು ಅಚ್ಚರಿ ನೀಡಲು ತಯಾರಾಗಿದ್ದಾರೆ. ಈ ಚಿತ್ರದ ಮೂಲಕ ಆಮಿರ್ ಇದೇ ಮೊದಲ ಬಾರಿಗೆ ಬಾಲಿವುಡ್‌ನ ಬಿಗ್‌ಬಿ ಅಮಿತಾಭ್ ಬಚ್ಚನ್ ಜೊತೆ ನಟಿಸುತ್ತಿದ್ದಾರೆ.

ಮಿಸ್ಟರ್ ಪರ್‌ಫೆಕ್ಷನಿಸ್ಟ್ ಎಂದೇ ಹೆಸರಾದ ಆಮಿರ್ ಯಾವುದೇ ಪಾತ್ರವಾದರೂ ಸರಿ, ಅದರಲ್ಲಿ ನೈಜತೆ, ಪರಿಪೂರ್ಣತೆಯನ್ನು ನೀಡುವಲ್ಲಿ ಸಿದ್ಧಹಸ್ತರು. ಥಗ್ಸ್ ಆಫ್ ಹಿಂದೂಸ್ಥಾನ್‌ನಲ್ಲಿ ಅವರದು ದರೋಡೆಕೋರನ ಪಾತ್ರವಾಗಿರುವುದರಿಂದ ರಗ್ಗೆಡ್ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಸೆಟ್‌ನಲ್ಲಿ ಮೇಕಪ್‌ನಲ್ಲಿರುವ ಅವರ ಕೆಲವು ಫೋಟೊಗಳು ಅಂತರ್ಜಾಲ ತಾಣಗಳಲ್ಲಿ ಸೋರಿಕೆಯಾಗಿದ್ದು ಸಾಕಷ್ಟು ವೈರಲ್ ಆಗಿದೆ. ಕುರುಚಲು ಗಡ್ಡ, ಕೆದರಿದ ಉದ್ದನೆಯ ಕೂದಲು ಹಾಗೂ ಮಾಸಿದ ಬಟ್ಟೆ ಧರಿಸಿರುವ ಆಮಿರ್, ಚಿತ್ರಕ್ಕಾಗಿ ಗುರುತಿಸಲು ಸಾಧ್ಯವಾಗದಷ್ಟು ಬದಲಾಗಿದ್ದಾರೆ. ಗಜನಿ ಚಿತ್ರಕ್ಕಾಗಿ ದೇಹದಂಡಿಸಿ ಸಿಕ್ಸ್‌ಪ್ಯಾಕ್ ದೇಹದಾರ್ಢ್ಯ ಬೆಳೆಸಿಕೊಂಡಿದ್ದ ಆಮಿರ್ ಈ ಚಿತ್ರಕ್ಕಾಗಿ ತುಂಬಾ ತೆಳ್ಳಗಾಗಿದ್ದಾರೆ. ಕತ್ರಿನಾ ಕೈಫ್ ಹಾಗೂ ಫಾತಿಮಾ ಸನಾ ಶೇಖ್ ಚಿತ್ರದ ನಾಯಕಿಯರು. ಸ್ವಾತಂತ್ರ ಪೂರ್ವದಲ್ಲಿ ಭಾರತವನ್ನೇ ಬೆಚ್ಚಿಬೀಳಿಸಿದ್ದ ಠಕ್ಕರೆಂಬ ದರೋಡೆಕೋರರ ಕುರಿತಾದ ಕಥಾವಸ್ತುವನ್ನು ಹೊಂದಿರುವ ಈ ಚಿತ್ರವನ್ನು ವಿಜಯ್ ಕೃಷ್ಣ ಆಚಾರ್ಯ ನಿರ್ದೇಶಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ‘ಥಗ್ಸ್ ಆಫ್ ಹಿಂದೂಸ್ಥಾನ್’ ಮುಂದಿನ ವರ್ಷದ ನವೆಂಬರ್‌ನಲ್ಲಿ ತೆರೆಗೆ ಅಪ್ಪಳಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X