“ಕಾಂಗ್ರೆಸ್ ಸರಕಾರದ ಸಾಧನೆಯನ್ನು ಗುರುತಿಸಿದ್ದಕ್ಕೆ ಧನ್ಯವಾದಗಳು”
ವಿಶ್ವಸಂಸ್ಥೆಯಲ್ಲಿ ಸುಷ್ಮಾ ಭಾಷಣಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಹೊಸದಿಲ್ಲಿ, ಸೆ.24: ಭಾರತವು ಐಐಟಿ, ಐಐಎಂಗಳನ್ನು ಸ್ಥಾಪಿಸಿ ಬೆಳೆಸಿ, ಅದರ ಮೂಲಕ ಜಗತ್ತಿಗೆ ಅತ್ಯುತ್ತಮ ವಿಜ್ಞಾನಿಗಳನ್ನು, ಇಂಜಿನಿಯರ್ ಗಳನ್ನು ನೀಡಿದೆ ಎಂದು ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಸುಷ್ಮಾ ಸ್ವರಾಜ್ ಮಾಡಿರುವ ಭಾಷಣಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಸರಕಾರದ ಶ್ರೇಷ್ಟ ದೃಷ್ಟಿಕೋನವನ್ನು ಗುರುತಿಸಿದ್ದಕ್ಕಾಗಿ ಸುಷ್ಮಾ ಸ್ವರಾಜ್ ರಿಗೆ ಧನ್ಯವಾದ ತಿಳಿಸಿದ್ದಾರೆ.
“ಸುಷ್ಮಾ ಜೀ, ಕೊನೆಗೂ ಐಐಟಿ ಹಾಗೂ ಐಐಎಂಎಸ್ ಗಳನ್ನು ಸ್ಥಾಪಿಸಿದ ಕಾಂಗ್ರೆಸ್ ಸರಕಾರದ ಶ್ರೇಷ್ಟ ದೃಷ್ಟಿಕೋನವನ್ನು ಗುರುತಿಸಿದ್ದಕ್ಕಾಗಿ ಧನ್ಯವಾದಗಳು” ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಮಾತನಾಡಿದ್ದ ಸುಷ್ಮಾಸ್ವರಾಜ್ ಭಾರತವು, ಐಐಟಿ, ಐಐಎಂ, ಇನ್ಫೋಸಿಸ್ ನಂತಹ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದರೆ ಪಾಕಿಸ್ತಾನವು ಭಯೋತ್ಪಾದಕ ಗುಂಪುಗಳನ್ನು ಹುಟ್ಟುಹಾಕಿದೆ ಎಂದಿದ್ದರು.
Next Story





