Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ದಸರಾ ವಿಶೇಷ
  3. ಮೈಸೂರು ದಸರಾ: ಟ್ರಿಣ್-ಟ್ರಿಣ್...

ಮೈಸೂರು ದಸರಾ: ಟ್ರಿಣ್-ಟ್ರಿಣ್ ಸೈಕಲ್‍ನಲ್ಲಿ ಪಾರಂಪರಿಕ ಕಟ್ಟಡಗಳ ವೀಕ್ಷಣೆಗೆ ಚಾಲನೆ

ಸೈಕಲ್‍ನಲ್ಲಿ ನಗರ ಸುತ್ತಾಡಿದ ಡಿಸಿ

ವಾರ್ತಾಭಾರತಿವಾರ್ತಾಭಾರತಿ25 Sept 2017 5:37 PM IST
share
ಮೈಸೂರು ದಸರಾ: ಟ್ರಿಣ್-ಟ್ರಿಣ್ ಸೈಕಲ್‍ನಲ್ಲಿ ಪಾರಂಪರಿಕ ಕಟ್ಟಡಗಳ ವೀಕ್ಷಣೆಗೆ ಚಾಲನೆ

ಮೈಸೂರು, ಸೆ.25: ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ  ರಂಗಾಚಾರ್ಲು ಪುರಭವನ ಆವರಣದಲ್ಲಿ ಟ್ರಿಣ್-ಟ್ರಿಣ್ ಸೈಕಲ್ ಗಳೊಡನೆ, ಪಾರಂಪರಿಕ ಕಟ್ಟಡಗಳ ದರ್ಶನಕ್ಕೆ ಚಾಲನೆ ನೀಡಲಾಯಿತು.

ದಸರಾ ಮಹೋತ್ಸವದ ಪ್ರಯುಕ್ತ  ಪುರಾತತ್ವ, ಪರಂಪರೆ ಮತ್ತು ಪರಂಪರೆ ಇಲಾಖೆಯ ಯಶಸ್ವಿ ಕಾರ್ಯಕ್ರಮ ಪಾರಂಪರಿಕ ನಡಿಗೆ ಮೂರನೇ ದಿನ ಸೈಕಲ್ ಮೇಲೆ ಪಾರಂಪರಿಕ ಕಟ್ಟಡಗಳನ್ನು ವೀಕ್ಷಿಸುವ ಅವಕಾಶ ಕಲ್ಪಿಸಲಾಗಿತ್ತು.

ಜಿಲ್ಲಾಧಿಕಾರಿ ಹಾಗೂ ದಸರಾ ವಿಶೇಷಾಧಿಕಾರಿ ಡಿ. ರಂದೀಪ್ ಹಾಗೂ ಮಹಾಪೌರ ಎಂ.ಜೆ.ರವಿಕುಮಾರ್ ಅವರು ಸೋಮವಾರ ಬೆಳಗ್ಗೆ ರಂಗಾಚಾರ್ಲು ಪುರಭವನದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಬಳಿಕ ದಸರಾ ವಿಶೇಷಾಧಿಕಾರಿ ಡಿ.ರಂದೀಪ್ ಮಾತನಾಡಿ,  ದಸರಾ ಮಹೋತ್ಸವ ಯಶಸ್ವಿಯಾಗಿ ನಡೆದಿದೆ, ಇವತ್ತು ಮಳೆ ಇದ್ದರೂ ಆಸಕ್ತರು ಬಂದಿದ್ದಾರೆ. ಪಾರಂಪರಿಕ ಕಟ್ಟಡಗಳ ಮಾಹಿತಿಯನ್ನು ಸೈಕಲ್‍ನಲ್ಲಿ ಸವಾರಿಮಾಡಿ ನೋಡುವುದು ವಿಶೇಷವಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳು ಖುದ್ದು ಸೈಕಲ್‍ನಲ್ಲಿ ಪ್ರಯಾಣಿಸಿ, ತಮ್ಮ ಕಚೇರಿಯ ಮಹತ್ವ ಪಡೆದುಕೊಂಡರು. ಅಲ್ಲಿನ ಕಂಚಿನ ಗೋರ್ಡನ್ ಪ್ರತಿಮೆಯ ಬಳಿಪೋಟೊ ತೆಗೆಸಿಕೊಂಡರು. ಜಿಲ್ಲಾಧಿಕಾರಿಗಳಿಗೆ ಮಹಾಪೌರರಾದ ಎಂ.ಜೆ. ರವಿಕುಮಾರ್ ಅವರು ಸಾತ್ ನೀಡಿದರು.

ನಗರದ ಸುಮಾರು 70ಕ್ಕೂ ಅಧಿಕ ಮಂದಿ ವಯಸ್ಸಿನ ಹಿರಿಯರು ಟ್ರಿಣ್ ಟ್ರಿಣ್ ಸೈಕಲ್ ಸವಾರಿಯಲ್ಲಿ ಭಾಗವಹಿಸಿದ್ದರು.  ಸವಾರಿ ದೊಡ್ಡಗಡಿಯಾರ, ಚಾಮರಾಜ ವೃತ್ತ, ಅರಮನೆ, ಕೆ.ಆರ್ ವೃತ್ತ,  ಜಗನ್ಮೋಹನ ಅರಮನೆ , ಜೂನಿಯರ್ ಮಹಾರಾಣಿ ಕಾಲೇಜು, ನಿರಂಜನ ಆಶ್ರಮ, ಪದ್ಮಾಲಯ, ಯುವರಾಜ ಕಾಲೇಜು, ಮಹಾರಾಜ ಕಾಲೇಜು, ಒರಿಯಂಟಲ್ ರಿಸರ್ಚ್ ಇನ್ಸ್ಟಿಟ್ಯೂಟ್, ಕ್ರಾಫರ್ಡ್ ಹಾಲ್, ಜಿಲ್ಲಾಧಿಕಾರಿ ಕಚೇರಿ ಮೂಲಕ ಸಾಗಿ ಬಂತು. ಸೈಕಲ್ ಸವಾರಿಯಲ್ಲಿ 88 ವರ್ಷದ ಎನ್.ಆರ್.ಮೊಹಲ್ಲಾದ ಅಂಚೆ ಇಲಾಖೆಯ ಮಾಜಿ ನೌಕರ  ಸೋಸಲೆ ವೀರಯ್ಯ ಅವರು ಹಾಗೂ 11 ವರ್ಷದ 6 ನೆ ತರಗತಿಯ ಜೆಎಸ್ ಎಸ್ ಬಾಲಜಗತ್ ಶಾಲೆಯ ಅನ್ನಪೂರ್ಣೇಶ್ವರಿ ಅವರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ತಜ್ಞರಾದ ಎನ್.ಎಸ್. ರಂಗರಾಜು ಹಾಗೂ ಈಚನೂರು ಕುಮಾರ್ ಅವರು ಮಾಹಿತಿ ನೀಡಿದರು. ಇಲಾಖೆಯ ಉಪನಿರ್ದೆಶಕ ಡಾ.ಗವಿಸಿದ್ದಯ್ಯ, ಹಾಗೂ ಪುರಾತತ್ವ ತಜ್ಞ ಎನ್.ಎಲ್. ಗೌಡ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X