Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಪು ಘನತ್ಯಾಜ್ಯ ಘಟಕ ಕಾಮಗಾರಿಗೆ...

ಕಾಪು ಘನತ್ಯಾಜ್ಯ ಘಟಕ ಕಾಮಗಾರಿಗೆ ಎಲ್ಲೂರು ಗ್ರಾಪಂ ವಿರೋಧ

ವಾರ್ತಾಭಾರತಿವಾರ್ತಾಭಾರತಿ25 Sept 2017 8:07 PM IST
share
ಕಾಪು ಘನತ್ಯಾಜ್ಯ ಘಟಕ ಕಾಮಗಾರಿಗೆ ಎಲ್ಲೂರು ಗ್ರಾಪಂ ವಿರೋಧ

ಪಡುಬಿದ್ರಿ,ಸೆ.25: ಕಾಪು ಪುರಸಭೆ ಘನ ತ್ಯಾಜ್ಯ ಸಂಸ್ಕರಣಾ ಘಟಕದ ಕಾಮಗಾರಿಗೆ ಎಲ್ಲೂರು ಗ್ರಾಮ ಪಂಚಾಯತ್ ಸೋಮವಾರ ತಡೆಯೊಡ್ಡಿದ ಘಟನೆ ಸೋಮವಾರ ನಡೆದಿದೆ. 

ಎಲ್ಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಉಳ್ಳಾಲ ಕಾಡು ಪ್ರದೇಶದಲ್ಲಿ ಜಿಲ್ಲಾಧಿಕಾರಿಯವರು ಕಾಪು ಪುರಸಭೆಗೆ ಘನತ್ಯಾಜ್ಯ ಘಟಕ ನಿರ್ಮಾಣಕ್ಕೆ ಸ್ಥಳ ಮಂಜೂರು ಮಾಡಿದ್ದರು. 

ಕಳೆದೆರಡು ದಿನಗಳಿಂದ ಈ ಜಮೀನಿನ ಗಡಿ ಗುರುತು ಮಾಡಿ ಆವರಣಗೋಡೆ ನಿರ್ಮಿಸಲು ಕಾಮಗಾರಿ ನಡೆಯುತ್ತಿದೆ. ಸೋಮವಾರ ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯ್ತಿ ಆಡಳಿತ ಸಮಿತಿ, ಈ ಹಿಂದೆಯೇ ಘನತ್ಯಾಜ್ಯ ಘಟಕ ನಿರ್ಮಾಣ ವಿರೋಧಿಸಿ ಪಂಚಾಯಿತಿ ನಿರ್ಣಯ ಕೈಗೊಂಡು ಪುರಸಭೆಯ ಹಿಂದಿನ ಮುಖ್ಯಾಧಿಕಾರಿ ಹಾಗೂ ತಹಶೀಲ್ದಾರಿಗೆ ಆಕ್ಷೇಪ ಪತ್ರ ಸಲ್ಲಿಸಲಾಗಿದೆ. 
ಇದೀಗ ಪಂಚಾಯಿತಿ ಗಮನಕ್ಕೆ ತಾರದೆ ಕಾಮಗಾರಿ ಮಾಡುವುದು ಸರಿಯಲ್ಲ. ಘಟಕ ಸ್ಥಾಪನೆಗೆ ನಾವು ಅವಕಾಶ ನೀಡುವುದಿಲ್ಲ. ಮಂಗಳವಾರವೇ ಗ್ರಾಪಂ ತುರ್ತು ಸಭೆ ಕರೆದು ನಿರ್ಣಯ ಕೈಗೊಂಡು ಜಿಲ್ಲಾಧಿಕಾರಿಯವರಿಗೆ ಮತ್ತೆ ಆಕ್ಷೇಪ ಪತ್ರ ಸಲ್ಲಿಸಲಾಗುವುದು ಎಂದು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಜಯಂತ್ ಭಟ್ ತಿಳಿಸಿದರು.

ಎಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರು ಈಗಾಗಲೇ ಯುಪಿಸಿಎಲ್ ಯೋಜನೆಯಿಂದ ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಮತ್ತೆ ಇಲ್ಲೇ ಘನತ್ಯಾಜ್ಯ ಘಟಕ ಸ್ಥಾಪನೆ ಮಾಡಲು ನಾವು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಘಟಕ ಆರಂಭದಲ್ಲಿ ಏನೇನು ಸಬೂಬು ಹೇಳಿ ಯೋಜನೆ ಕಾರ್ಯಗತ ಮಾಡುತ್ತಾರೆ. ಬಳಿಕ ಯಾರು ಈ ಬಗ್ಗೆ ಗಮನ ಹರಿಸುವುದಿಲ್ಲ. ಪುರಸಭೆ ಹಾಗೂ ಆಯಾಯ ಗ್ರಾಮ ಪಂಚಾಯ್ತಿ ಅವರವರ ಜಾಗದಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲಿ. ಎಲ್ಲೆಲ್ಲಿಯ ತ್ಯಾಜ್ಯಗಳನ್ನು ನಮ್ಮ ಗ್ರಾಮದಲ್ಲಿ ಸುರಿಯುವುದು ಬೇಡ ಎಂದು ಆಗ್ರಹಿಸಿದರು. 

ಘನತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಕಾಪು ಪುರಸಭೆ ಮುಖ್ಯಾಧಿಕಾರಿ ಹೆಸರಿನಲ್ಲಿ ಎಲ್ಲೂರು ಗ್ರಾಮದಲ್ಲಿ 10 ಎಕರೆ ಸರಕಾರಿ ಜಾಗವನ್ನು ಜಿಲ್ಲಾಧಿಕಾರಿ ಮಂಜೂರು ಮಾಡಿದ್ದಾರೆ. ಮುಖ್ಯಾಧಿಕಾರಿ ಹೆಸರಿನಲ್ಲಿ ಅದಕ್ಕೆ ಪಹಣಿ ಪತ್ರವು ಆಗಿದೆ. ಕಾಪು ಪುರಸಭೆ ತ್ಯಾಜ್ಯವನ್ನು ಇಲ್ಲಿ ಸಂಸ್ಕರಣೆ ಮಾಡಲಾಗುವುದು. ತ್ಯಾಜ್ಯ ಸಂಸ್ಕರಣೆ ಘಟಕ ಸ್ಥಾಪನೆಯ ವಿಸ್ಕøತ ಯೋಜನಾ ವರದಿ  ವಿಳಂಬದಿಂದ ಯೋಜನೆ ಕಾರ್ಯಗತವಾಗಲು ತೊಡಕಾಗಿತ್ತು. ಇದೀಗ ಟೆಂಡರ್ ಪ್ರಕ್ರಿಯೆ ಮುಗಿದು ಲೋಕೋಪಯೋಗಿ ಇಲಾಖೆಗೆ ಕಾಮಗಾರಿಯನ್ನು ವಹಿಸಲಾಗಿದೆ. ಘಟಕ ನಿರ್ಮಾಣಕ್ಕೆ ರೂ. 5 ಕೋಟಿ ಹಣವು ಬಿಡುಗಡೆಯಾಗಿದೆ. ಕಾಮಗಾರಿಗೆ ಗ್ರಾಮ ಪಂಚಾಯ್ತಿ ವಿರೋಧ ವ್ಯಕ್ತವಾಗಿದೆ. ಜಿಲ್ಲಾಧಿಕಾರಿಯವರ ನಿರ್ದೇಶನ ಬರುವರೆಗೆ ಕಾಮಗಾರಿ ಸ್ಥಗಿತ ಮಾಡಲಾಗುವುದು ಎಂದು ಮುಖ್ಯಾಧಿಕಾರಿ ರಾಯಪ್ಪ ತಿಳಿಸಿದರು.

ಎಲ್ಲೂರಿನಲ್ಲಿ ಘನತ್ಯಾಜ್ಯ ಘಟಕ ಸ್ಥಾಪನೆ ಬಗ್ಗೆ ಹೇಳಿಕೆ ನೀಡುವ ಇವರು ಎಲ್ಲೂರಿಗೆ ಎಷ್ಟು ಅನುದಾನ ಈವರೆಗೆ ನೀಡಿದ್ದಾರೆ. ಪಕ್ಕದ ಬೆಳಪು ಗ್ರಾಮ ಪಂಚಾಯ್ತಿಗೆ ಅನುದಾನ ನೀಡುವ ಶಾಸಕರು ಅಲ್ಲಿಯೇ ಘಟಕ ನಿರ್ಮಾಣಕ್ಕೆ ಮುಂದಾಗಲಿ. ಬೆಳಪುವಿನಲ್ಲಿ 10 ಎಕರೆ ಸರಕಾರಿ ಜಮೀನನ್ನು ಘಟಕ ನಿರ್ಮಾಣಕ್ಕೆ ನೀಡುವುದಾಗಿ ಅಲ್ಲಿನ ಪಿಡಿಒ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X