ಸಿಲಿಂಡರ್ ಕಳವು ಪ್ರಕರಣ: ಆರೋಪಿಯ ಬಂಧನ
ಶಿವಮೊಗ್ಗ, ಸೆ. 26: ಜಿಲ್ಲೆಯ ಭದ್ರಾವತಿ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಸಿಲಿಂಡರ್‍ಗಳನ್ನು ಕಳವು ಮಾಡುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿ, 10 ಗ್ಯಾಸ್ ಸಿಲಿಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೀಗೆಬಾಗಿ ಬಡಾವಣೆಯ ನಿವಾಸಿ ಅಮ್ಜದ್ (37) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಇತ್ತೀಚೆಗೆ ಭದ್ರಾವತಿ ಪಟ್ಟಣ ಹಾಗೂ ತಾಲೂಕಿನ ವಿವಿಧೆಡೆ ಸಿಲಿಂಡರ್ ಕಳವು ಪ್ರಕರಣ ಹೆಚ್ಚಾಗಿತ್ತು. ಪ್ರಕರಣ ಬೇಧಿಸಲು ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು.
ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





