ಪ್ರತ್ಯೇಕ ಲೈಂಗಿಕ ಕಿರುಕುಳ ಆರೋಪ: ಇಬ್ಬರ ಬಂಧನ

ಬೆಂಗಳೂರು, ಸೆ.26: ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರನ್ನು ಪೋಸ್ಕೊ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.
ಅಮೃತಹಳ್ಳಿ: ಶನಿವಾರ ಮಧ್ಯಾಹ್ನ ಶಾಲೆಯಿಂದ ಮನೆಗೆ ಬಂದಂತಹ ಸಂಬಂಧಿಕರ ಇಬ್ಬರು ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿದ ಆಟೊ ಚಾಲಕ ರಾಜೇಶ್ ಎಂಬಾತನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಪೋಸ್ಕೊ ಕಾಯ್ದೆಯಡಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಅಂದು ಇಬ್ಬರು ಮಕ್ಕಳೊಂದಿಗೆ ಈತ ಅಸಭ್ಯವಾಗಿ ವರ್ತಿಸಿದ್ದು, ಪೋಷಕರಿಗೆ ತಿಳಿಸಿದ್ದರು. ಪೋಷಕರು ನೀಡಿದ ದೂರಿನ ಮೇರೆಗೆ ಈತನನ್ನು ಬಂಧಿಸಲಾಗಿದೆ.
ಕೊಡಿಗೇಹಳ್ಳಿ: 17 ವರ್ಷದ ಬಾಲಕಿಯ ಕೈ ಹಿಡಿದು ಎಳೆದಾಡಿ ಅಸಭ್ಯವಾಗಿ ವರ್ತಿಸಿದ ಮುಸ್ತಾದ್(33) ಎಂಬಾತನನ್ನು ಕೊಡಿಗೇಹಳ್ಳಿ ಪೊಲೀಸರು ಪೋಸ್ಕೊ ಕಾಯ್ದೆಯಡಿ ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎನ್ನಲಾಗಿದೆ.
Next Story





